Just In
- 2 hrs ago
2023ರಲ್ಲಿ ಸ್ಮಾರ್ಟ್‌ಫೋನ್ ಖರೀದಿಸುವ ಮುನ್ನ ನೀವು ಗಮನಿಸಲೇಬೇಕಾದ ವಿಚಾರಗಳು!
- 2 hrs ago
Ooredoo ಸಂಸ್ಥೆಯಿಂದ ಮೈಕ್ರೋಸಾಫ್ಟ್ ಟೀಮ್ಸ್ ಫೋನ್ ಬಗ್ಗೆ ಘೋಷಣೆ; ಯಾರಿಗೆ ಉಪಯೋಗ!?
- 3 hrs ago
ಇನ್ಸ್ಟಾಗ್ರಾಮ್ನಲ್ಲಿ ನೂತನ ಸೌಲಭ್ಯ!; ಟೀನೇಜರ್ಸ್ಗೆ ಸಖತ್ ಅನುಕೂಲ!
- 4 hrs ago
ಇನ್ಫಿನಿಕ್ಸ್ ನೋಟ್ 12i ಲಾಂಚ್ ಡೇಟ್ ಬಹಿರಂಗ! ಫೀಚರ್ಸ್ ಹೇಗಿದೆ?
Don't Miss
- News
ಬಿಹಾರದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಮತ್ತೆ ಕಲ್ಲು ತೂರಾಟ
- Lifestyle
ಮಗುವಿಗೆ ಗ್ಯಾಸ್ ಪ್ರಾಬ್ಲಂ ಆದಾಗ ಹೀಗೆ ಮಾಡಿ
- Sports
ರಾಯ್ಪುರದಲ್ಲಿ ರಾರಾಜಿಸಿದ ರೋಹಿತ್ ಪಡೆ: 8 ವಿಕೆಟ್ಗಳ ಅಮೋಘ ಗೆಲುವಿನೊಂದಿಗೆ ಸರಣಿ ವಶಕ್ಕೆ
- Automobiles
ಮತ್ತಷ್ಟು ತಡವಾಗಲಿದೆ ಹೊಸ ಹ್ಯುಂಡೈ ಕ್ರೆಟಾ ಫೇಸ್ಲಿಫ್ಟ್ ಎಸ್ಯುವಿ ಬಿಡುಗಡೆ
- Movies
ದರ್ಶನ್ ಫಾರ್ಮ್ಹೌಸ್ ಮೇಲೆ ಅರಣಾಧಿಕಾರಿಗಳ ರೇಡ್: ವನ್ಯ ಪಕ್ಷಿಗಳು ವಶ
- Finance
NRI PAN Card: ಎನ್ಆರ್ಐ ಪ್ಯಾನ್ ಕಾರ್ಡ್ಗೆ ಆನ್ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನೀವೇನಾದರೂ ಈ ಸ್ಮಾರ್ಟ್‌ಫೋನ್ ಖರೀದಿಸಿದರೇ, ಭರ್ಜರಿ ಡಿಸ್ಕೌಂಟ್ ಲಭ್ಯ!
ಐಕ್ಯೂ ಸಂಸ್ಥೆಯು ಜನಪ್ರಿಯ ಫೋನ್‌ಗಳಲ್ಲಿ ಒಂದಾದ ಐಕ್ಯೂ ನಿಯೋ 6 (iQOO Neo 6) ಸ್ಮಾರ್ಟ್‌ಫೋನ್ ಅನ್ನು ಈಗ ಭರ್ಜರಿ ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ. ಇ ಕಾಮರ್ಸ್ ದೈತ್ಯ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಈ ಫೋನ್ ಗಮನಾರ್ಹ ಡಿಸ್ಕೌಂಟ್ ಪಡೆದಿದ್ದು, ಗ್ರಾಹಕರನ್ನು ಸೆಳೆದಿದೆ. ಅಂದಹಾಗೆ ಸದ್ಯದಲ್ಲೇ ಐಕ್ಯೂ ಸಂಸ್ಥೆಯು ನೂತನ ಫೋನ್ ಐಕ್ಯೂ ನಿಯೋ 7 ಲಾಂಚ್ ಆಗಲಿದೆ.

ಹೌದು, ಐಕ್ಯೂ ಸಂಸ್ಥೆಯ ಐಕ್ಯೂ ನಿಯೋ 6 (iQOO Neo 6) ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 27,999ರೂ. ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ, 2,250ರೂ. ರಿಯಾಯಿತಿ ಲಭ್ಯವಾಗಲಿದೆ. ಇದರೊಂದಿಗೆ ಸುಮಾರು 18,000ರೂ. ವರೆಗೂ (ಹಳೆಯ ಫೋನ್ ಕಾರ್ಯವೈಖರಿ ಸ್ಥಿತಿ ಆಧರಿಸಿ) ಎಕ್ಸ್‌ಚೇಂಜ್ ಕೊಡುಗೆಯೂ ಸಹ ಗ್ರಾಹಕರಿಗೆ ದೊರೆಯುತ್ತದೆ.

ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಪಡೆದಿದ್ದು, ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದೆ. ಹಾಗೆಯೇ ಇದು 8GB RAM + 128GB ಮತ್ತು 12GB RAM ಹಾಗೂ 256 GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಇನ್ನು ಈ ಫೋನ್ ಸೈಬರ್ ರೇಜ್ ಮತ್ತು ಡಾರ್ಕ್ ನೋವಾ ಬಣ್ಣ ಆಯ್ಕೆಗಳಲ್ಲಿ ಲಭ್ಯ. ಹಾಗಾದರೆ ಐಕ್ಯೂ ನಿಯೋ 6 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್ 6.62 ಇಂಚಿನ ಫುಲ್ ಹೆಚ್‌ಡಿ ಪ್ಲಸ್ E4 ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಫನ್‌ಟಚ್ OS 12 ನಲ್ಲಿ ರನ್ ಆಗಲಿದೆ. ಇದು 12GB RAM ಮತ್ತು 256 GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಫೋನ್ ಗೇಮಿಂಗ್ ಮಾಡುವಾಗ ಸುಧಾರಿತ ಥರ್ಮಲ್ ಮ್ಯಾನೇಜ್‌ಮೆಂಟ್‌ಗಾಗಿ ಲಿಕ್ವಿಡ್ ಕೂಲಿಂಗ್ ವೇಪರ್ ಚೇಂಬರ್ ಅನ್ನು ಹೊಂದಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್
ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್ GW1P ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ 5.2, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470