ಸದ್ಯ ನೀವು ಈ ಸ್ಮಾರ್ಟ್‌ಫೋನ್‌ ಖರೀದಿಸಿದರೇ, 3,000ರೂ. ಡಿಸ್ಕೌಂಟ್‌!

|

ವಿವೋ ಕಂಪನಿಯ ಸಬ್‌ಬ್ರ್ಯಾಂಡ್ ಐಕ್ಯೂ (iQoo) ಸಂಸ್ಥೆಯು ಬಿಡುಗಡೆ ಮಾಡಿರುವ ಐಕ್ಯೂ ಸರಣಿಯ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಮೆಚ್ಚುಗೆ ಪಡೆದಿದೆ. ಆದರೆ ಇದೀಗ ಐಕ್ಯೂ ಸಂಸ್ಥೆಯು ತನ್ನ ಐಕ್ಯೂ ನಿಯೋ 6 (iQOO Neo 6) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದೆ. ಇದು ಹೊಸದಾಗಿ ಬಿಡುಗಡೆ ಆಗಿರುವ ಒನ್‌ಪ್ಲಸ್‌ ನಾರ್ಡ್‌ 2T 5G ಫೋನಿಗೆ ನೇರ ಪ್ರತಿಸ್ಪರ್ಧಿ ಆಗಿದೆ.

ಐಸಿಐಸಿಐ

ಹೌದು, ಐಕ್ಯೂ ಸಂಸ್ಥೆಯ ಐಕ್ಯೂ ನಿಯೋ 6 (iQOO Neo 6) ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿಯಲ್ಲಿ ಸಿಗಲಿದೆ. ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಐಸಿಐಸಿಐ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸದರೆ, 3,000ರೂ. ಗಳ ಭರ್ಜರಿ ರಿಯಾಯಿತಿ ದೊರೆಯುತ್ತದೆ. ಹಾಗೆಯೇ ಅಮೆಜಾನ್ 12,150 ರೂ. ಗಳ ವರೆಗೂ ವಿನಿಮಯ ರಿಯಾಯಿತಿ ಸಹ ನೀಡುತ್ತದೆ. ಅಂದಹಾಗೆ ಈ ಕೊಡುಗೆ ಸಿಮೀತ ಅವಧಿ ಹೊಂದಿದ್ದು, ಇದೇ ಜುಲೈ 4ರ ವರೆಗೂ ಮಾತ್ರ ಇರಲಿದೆ.

ದೊರೆಯಲಿದೆ

ಐಕ್ಯೂ ನಿಯೋ 6 ಫೋನ್ 8 RAM + 128 GB ಸ್ಟೋರೇಜ್‌ನ ಬೇಸ್‌ ವೇರಿಯಂಟ್‌ ಆರಂಭಿಕ ಬೆಲೆಯು 29,999 ರೂ. ಆಗಿದೆ. ಇದೀಗ ಕೊಡುಗೆಯಲ್ಲಿ 26,999 ರೂ.ಗಳಿಗೆ ದೊರೆಯಲಿದೆ. ಈ ಕೊಡುಗೆಯು 12GB + 256 GB ಸ್ಟೋರೇಜ್‌ ವೇರಿಯಂಟ್‌ಗೂ ಲಭ್ಯವಾಗಲಿದೆ. ಗ್ರಾಹಕರು ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ಖರೀದಿಸಬಹುದಾಗಿದೆ. ಹಾಗಾದರೇ, ಐಕ್ಯೂ ನಿಯೋ 6 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದ್ದು, 360Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಫನ್‌ಟಚ್‌ OS 12 ನಲ್ಲಿ ರನ್ ಆಗಲಿದೆ. ಇದು 12GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಫೋನ್‌ ಗೇಮಿಂಗ್ ಮಾಡುವಾಗ ಸುಧಾರಿತ ಥರ್ಮಲ್ ಮ್ಯಾನೇಜ್‌ಮೆಂಟ್‌ಗಾಗಿ ಲಿಕ್ವಿಡ್ ಕೂಲಿಂಗ್ ವೇಪರ್ ಚೇಂಬರ್ ಅನ್ನು ಹೊಂದಿದೆ.

ಟ್ರಿಪಲ್‌ ಕ್ಯಾಮೆರಾ ಸೆನ್ಸಾರ್

ಟ್ರಿಪಲ್‌ ಕ್ಯಾಮೆರಾ ಸೆನ್ಸಾರ್

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್‌ GW1P ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್‌ ಚಾರ್ಜ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ 5.2, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB + 128GB ಸ್ಟೋರೇಜ್ ಮಾದರಿಗೆ 29,999ರೂ,ಬೆಲೆ ಹೊಂದಿದೆ. ಆದರೆ ಉನ್ನತ-ಮಟ್ಟದ 12GB + 256GB ರೂಪಾಂತರದ ಬೆಲೆ 33,999ರೂ.ಆಗಿದೆ. ಇದು ಸೈಬರ್ ರೇಜ್ ಮತ್ತು ಡಾರ್ಕ್ ನೋವಾ ಬಣ್ಣ ಆಯ್ಕೆಗಳಲ್ಲಿ ಲಭ್ಯ. ಅಮೆಜಾನ್ ಇ ಕಾಮರ್ಸ್‌ನಲ್ಲಿ ಖರೀದಿಗೆ ದೊರೆಯುತ್ತದೆ. ಗ್ರಾಹಕರು ICICI ಬ್ಯಾಂಕ್ ಕ್ರೆಡಿಟ್ ಮೂಲಕ ಖರೀದಿಸಿದರೇ, 3,000ರೂ. ಗಳ ರಿಯಾಯಿತಿ ಪಡೆಯಬಹುದು.

ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್‌ ಫೀಚರ್ಸ್‌

ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್‌ ಫೀಚರ್ಸ್‌

ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ Origin OS ಓಷನ್ ಕಸ್ಟಮ್ ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಆಯ್ಕೆಗಳಲ್ಲಿ

ಹಾಗೆಯೇ ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್‌ ಐಸೋಸೆಲ್‌ ಪ್ಲಸ್‌ GW1P ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರೊಂದಿಗೆ 4,700 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿದೆ.

Best Mobiles in India

English summary
iQOO Neo 6 gets discounted in India, now starts at Rs 26,999: Details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X