ಐಕ್ಯೂ ನಿಯೋ 6 SE ಫೋನ್ ಲಾಂಚ್! 80W ಫ್ಲ್ಯಾಶ್ ಚಾರ್ಜ್ ವಿಶೇಷ!
ಸ್ಮಾರ್ಟ್‌ಫೋನ್ ವಲಯದಲ್ಲಿ ಐಕ್ಯೂ ಕಂಪೆನಿ ತನ್ನದೇ ಆದ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ತನ್ನ ಭಿನ್ನ ಮಾದರಿಯ ಫೋನ್‌ಗಳಿಗೆ ಸೈ ಎನಿಸಿಕೊಂಡಿರುವ ಐಕ್ಯೂ ಕಂಪೆನಿ ಇದೀಗ ಹೊಸ ಐಕ್ಯೂ ನಿಯೋ 6 SE ಫೋನ್ ಲಾಂಚ್ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಹೌದು, ಐಕ್ಯೂ ಕಂಪೆನಿ ಟೆಕ್ ಮಾರುಕಟ್ಟೆಯಲ್ಲಿ ಹೊಸ ಐಕ್ಯೂ ನಿಯೋ 6 SE ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುತ್ತದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ OriginOS ಓಷನ್ ಕಸ್ಟಮ್ ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ
ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್ ಪ್ಲಸ್ GW1P ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿದೆ.

ಬೆಲೆ ಮತ್ತು ಲಭ್ಯತೆ
ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್ ಚೀನಾ ಮಾರುಕಟ್ಟೆಯಲ್ಲಿ ಬೇಸ್ ಮಾಡೆಲ್ 8GB + 128GB ಸ್ಟೋರೇಜ್ ಆಯ್ಕೆಗೆ CNY 1,999 (ಸುಮಾರು 23,000ರೂ)ಬೆಲೆ ಹೊಂದಿದೆ. ಇನ್ನು 8GB + 256GB ಮಾದರಿಯ ಆಯ್ಕೆಗೆ CNY 2,299 (ಸುಮಾರು 26,500ರೂ)ಬೆಲೆ ಪಡೆದುಕೊಂಡಿದೆ. ಈ ಫೋನ್ ಇಂಟರ್‌ಸ್ಟೆಲ್ಲರ್, ಆರೆಂಜ್ ಮತ್ತು ನಿಯೋ ಬಣ್ಣಗಳಲ್ಲಿ ಬರುತ್ತದೆ. ಇದು ಮೇ 11 ರಿಂದ ಚೀನಾದಲ್ಲಿ ಮಾರಾಟವಾಗಲಿದೆ.


Click it and Unblock the Notifications








