ಭಾರತದಲ್ಲಿ ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

|

ಐಕ್ಯೂ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ.

ಸ್ಮಾರ್ಟ್‌ಫೋನ್‌

ಹೌದು, ಐಕ್ಯೂ ಕಂಪನಿ ಭಾರತದಲ್ಲಿ ಹೊಸ ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್‌ ಚಾರ್ಜ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್‌ ಸೈಬರ್‌ ರೇಜ್‌ ಮತ್ತು ಡಾರ್ಕ್‌ ನೋವಾ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಇಂದು ಮಧ್ಯಾಹ್ನ 1 ಗಂಟೆಗೆ ಅಮೆಜಾನ್ ಮತ್ತು ಕಂಪನಿಯ ವೆಬ್‌ಸೈಟ್ ಮೂಲಕ ಮಾರಾಟವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ 6.62-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದ್ದು, 360Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಫನ್‌ಟಚ್‌ OS 12 ನಲ್ಲಿ ರನ್ ಆಗಲಿದೆ. ಇದು 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಫೋನ್‌ ಗೇಮಿಂಗ್ ಮಾಡುವಾಗ ಸುಧಾರಿತ ಥರ್ಮಲ್ ಮ್ಯಾನೇಜ್‌ಮೆಂಟ್‌ಗಾಗಿ ಲಿಕ್ವಿಡ್ ಕೂಲಿಂಗ್ ವೇಪರ್ ಚೇಂಬರ್ ಅನ್ನು ಹೊಂದಿದೆ.

ಟ್ರಿಪಲ್‌ ಕ್ಯಾಮೆರಾ

ಟ್ರಿಪಲ್‌ ಕ್ಯಾಮೆರಾ

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್‌ GW1P ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್‌ ಚಾರ್ಜ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ 5.2, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB + 128GB ಸ್ಟೋರೇಜ್ ಮಾದರಿಗೆ 29,999ರೂ,ಬೆಲೆ ಹೊಂದಿದೆ. ಆದರೆ ಉನ್ನತ-ಮಟ್ಟದ 12GB + 256GB ರೂಪಾಂತರದ ಬೆಲೆ 33,999ರೂ.ಆಗಿದೆ. ಇದು ಸೈಬರ್ ರೇಜ್ ಮತ್ತು ಡಾರ್ಕ್ ನೋವಾ ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇನ್ನು ಈ ಫೋನ್‌ ಇಂದು ಮಧ್ಯಾಹ್ನ 1 ಗಂಟೆಗೆ ಅಮೆಜಾನ್ ಮತ್ತು ಕಂಪನಿಯ ವೆಬ್‌ಸೈಟ್ ಮೂಲಕ ಮಾರಾಟವಾಗಲಿದೆ. ಗ್ರಾಹಕರು ಜೂನ್ 5 ರವರೆಗೆ ಲಾಂಚ್‌ ಆಫರ್‌ ಅನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ICICI ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳು ಮತ್ತು EMI ವಹಿವಾಟುಗಳನ್ನು ಬಳಸಿಕೊಂಡು ಸ್ಮಾರ್ಟ್‌ಫೋನ್‌ನಲ್ಲಿ 3,000ರೂ ರಿಯಾಯಿತಿ ಪಡೆಯಬಹುದು.

Best Mobiles in India

English summary
iQoo Neo 6 With Triple Rear Cameras Launched in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X