iQOO Neo 7 : ಭಾರತದಲ್ಲಿ ಐಕ್ಯೂ ನಿಯೋ 7 5G ಸುಂಟರಗಾಳಿ! ಮಾರುಕಟ್ಟೆಯಲ್ಲಿ ಭಾರಿ ಟ್ರೆಂಡ್!
ಟೆಕ್ ವಲಯದಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡ್ತಿದ್ದ ಹಾಗೇ ಸೊಶೀಯಲ್ ಮೀಡಿಯಾದಲ್ಲಿ ಹಲ್‌ಚಲ್ ಅನ್ನೇ ಸೃಷ್ಟಿಸಿದೆ. ಟ್ವಿಟರ್‌ನಲ್ಲಿ ಕೂಡ ಟ್ರೆಂಡ್ ಸೃಷ್ಟಿಸಿರುವ ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್ ತನ್ನ ಅತ್ಯಾಕರ್ಷಕ ಫೀಚರ್ಸ್‌ಗಳ ಮೂಲಕ ಗಮನಸೆಳೆದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಐಕ್ಯೂ ನಿಯೋ 7 5G ಡಿಸ್‌ಪ್ಲೇ ರಚನೆ ಹೇಗಿದೆ?
ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು AMOLED ಡಿಸ್ಪ್ಲೇ ಜೊತೆಗೆ 20:9 ಆಕಾರ ಅನುಪಾತ, 93.11 ಪ್ರತಿಶತ ಸ್ಕ್ರೀನ್ ಟು ಬಾಡಿ , ಮತ್ತು 120Hz ರಿಫ್ರೆಶ್ ದರ. ಕೆಪ್ಯಾಸಿಟಿವ್ ಟಚ್ ಡಿಸ್ಪ್ಲೇ 1,200Hz ತ್ವರಿತ ಸ್ಪರ್ಶ ಮಾದರಿ ದರ, 300Hz ಸ್ಪರ್ಶ ಮಾದರಿ ದರ 1,300 ನಿಟ್ಸ್ ಗರಿಷ್ಠ ಹೊಳಪು ಮತ್ತು 388ppi ಪಿಕ್ಸೆಲ್ ಸಾಂದ್ರತೆಯನ್ನು ನೀಡುತ್ತದೆ.

ಐಕ್ಯೂ ನಿಯೋ 7 5G ಪ್ರೊಸೆಸರ್ ಯಾವುದು?
ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 8200 5G SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಫನ್‌ಟೌಚ್ OS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ನಲ್ಲಿ ಗೇಮಿಂಗ್ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಲಭ್ಯವಿರುವ RAM ಅನ್ನು 20GB ವರೆಗೆ ವಿಸ್ತರಿಸಬಹುದಾಗಿದೆ.
ಐಕ್ಯೂ ನಿಯೋ 7 5G ಕ್ಯಾಮೆರಾ ಸೆಟ್‌ಅಪ್ ವಿವರ
ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಸೆಲ್ಫಿ ಕ್ಯಾಮೆರಾದ ವಿವರವನ್ನು ಇನ್ನು ಬಹಿರಂಗಪಡಿಸಿಲ್ಲ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್, ನೈಟ್, ಮ್ಯಾಕ್ರೋ, ಟೈಮ್-ಲ್ಯಾಪ್ಸ್ ಫೋಟೋಗ್ರಫಿ, ಸ್ಲೋ ಮೋಷನ್, ಪನೋರಮಾ ಮತ್ತು ಡ್ಯುಯಲ್-ವ್ಯೂ ವೀಡಿಯೋವನ್ನು ಬೆಂಬಲಿಸಲಿದೆ.

ಐಕ್ಯೂ ನಿಯೋ 7 5G ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ಫ್ಲ್ಯಾಷ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್, OTG, NFC, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಇ-ಕಂಪಾಸ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಅತಿಗೆಂಪು ರಿಮೋಟ್ ಕಂಟ್ರೋಲ್ ಅನ್ನು ಒಳಗೊಂಡಿವೆ.
ಭಾರತದಲ್ಲಿ ಐಕ್ಯೂ ನಿಯೋ 7 5G ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 128GB ಸ್ಟೋರೇಜ್ ಮಾದರಿಗೆ 29,999ರೂ.ಬೆಲೆಯನ್ನು ಹೊಂದಿದೆ. ಇದರ 12GB RAM + 256GB ಸ್ಟೋರೇಜ್ ಆಯ್ಕೆಯ ಬೆಲೆ 33,999ರೂ.ಆಗಿದೆ. ಇದನ್ನು ಫ್ರಾಸ್ಟ್ ಬ್ಲೂ ಮತ್ತು ಇಂಟರ್ ಸ್ಟೆಲ್ಲರ್ ಬ್ಲ್ಯಾಕ್ ಶೇಡ್‌ಗಳಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ICICI, HDFC ಮತ್ತು SBI ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 1,500ರೂ. ರಿಯಾಯಿತಿ ಸಿಗಲಿದೆ.


Click it and Unblock the Notifications








