ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ಕೊಡುತ್ತೆ 'ಐಕ್ಯೂ ನಿಯೋ 7'!..ಪಕ್ಕಾ 5G ಫೋನ್‌!

|

ಐಕ್ಯೂ (iQOO) ಕಂಪೆನಿಯ ಕೆಲವು ಫೋನ್‌ಗಳು ಸಹ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿವೆ. ಆ ಪೈಕಿ ಸಂಸ್ಥೆಯು ಇತ್ತೀಚಿಗೆ ಚೀನಾದಲ್ಲಿ ಅನಾವರಣ ಮಾಡಿರುವ iQOO Neo 7 ಫೋನ್‌ ಸರಣಿಯು ಮೂರು ಮಾಡೆಲ್‌ಗಳನ್ನು ಪಡೆದಿದೆ. ಅವುಗಳು ಕ್ರಮವಾಗಿ ಐಕ್ಯೂ ನಿಯೋ 7, ಐಕ್ಯೂ ನಿಯೋ 7 SE ಮತ್ತು ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್‌ ಆಗಿವೆ. ಇವುಗಳಲ್ಲಿ ಇದೀಗ ಐಕ್ಯೂ ನಿಯೋ 7 ಫೋನ್‌ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾಗಿದೆ.

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ಕೊಡುತ್ತೆ 'ಐಕ್ಯೂ ನಿಯೋ 7'!..ಪಕ್ಕಾ 5G ಫೋನ್‌!

ಹೌದು, ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ ಇದೇ ಫೆಬ್ರವರಿ 16 ರಂದು ಇ ಕಾಮರ್ಸ್‌ ತಾಣ ಅಮೆಜಾನ್‌ ಮೂಲಕ ದೇಶದಲ್ಲಿ ಬಿಡುಗಡೆ ಆಗಲಿದೆ. ಇನ್ನು ಈ ಫೋನ್‌ ಭಾರತದಲ್ಲಿ ಚೀನಾ ವೇರಿಯಂಟ್‌ಗಿಂತ ಭಿನ್ನ ಫೀಚರ್ಸ್‌ಗಳ ಆಯ್ಕೆಯೊಂದಿಗೆ ಲಗ್ಗೆ ಇಡಲಿದೆ ಎನ್ನಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 8200SoC ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್ಅಪ್‌ ಅನ್ನು ಹೊಂದಿರುವ ಸಾಧ್ಯತೆಯಿದೆ. ಜೊತೆಗೆ 5G ಸಪೋರ್ಟ್‌ ಸಹ ಪಡೆದಿದೆ.

ನಿರೀಕ್ಷಿತ ಫೀಚರ್ಸ್‌ ಹೀಗಿವೆ
ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ HD+ AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಡಿಸ್‌ಪ್ಲೇ 90.61 % ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ ಹೊಂದಿರಬಹುದು ಎಂದು ಅಂದಾಜಿಸಲಾಗದೆ. ಇದಲ್ಲದೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತದಲ್ಲಿರಬಹುದು ಎಂದು ನಿರೀಕ್ಷಿಸಲಾಗಿದೆ.

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ಕೊಡುತ್ತೆ 'ಐಕ್ಯೂ ನಿಯೋ 7'!..ಪಕ್ಕಾ 5G ಫೋನ್‌!

ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ v13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲವನ್ನು ಹೊಂದಿರುವುದಿಲ್ಲ ಎಂದು ಹೇಳಲಾಗಿದೆ.

ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಬಹುದು. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ಕೊಡುತ್ತೆ 'ಐಕ್ಯೂ ನಿಯೋ 7'!..ಪಕ್ಕಾ 5G ಫೋನ್‌!

ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ 4880mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು ಅಡಾಪ್ಟರ್ ಮೂಲಕ 120W ವೇಗದ ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುವ ನಿರೀಕ್ಷೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಹೊಂದಿರುವ ಸಾಧ್ಯತೆಯಿದೆ. ಇದರೊಂದಿಗೆ ಆಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಗೈರೋಸ್ಕೋಪ್‌, ಲೈಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್‌ ಫೀಚರ್ಸ್‌:
ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್‌ ಸ್ಮಾರ್ಟ್‌ಫೋನ್‌ 6.78 ಇಂಚಿನ FHD+ E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ HDR10 ಬೆಂಬಲವನ್ನು ಹೊಂದಿದೆ. ಜೊತೆಗೆ 16GB RAM ಮತ್ತು 512GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 120W ವೇಗದ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.

Best Mobiles in India

English summary
iQOO Neo 7 India Launch Date Announced: Price, Specifications, Availability.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X