Home
ಸುದ್ದಿಜಾಲ

ಇಂದು ಮತ್ತೆ ಸೇಲ್‌ ಆರಂಭಿಸಲಿದೆ ಈ ದೈತ್ಯ 5G ಫೋನ್‌!..ಆಫರ್‌ ಬೆಲೆ ಎಷ್ಟು?

ಜನಪ್ರಿಯ ಐಕ್ಯೂ ಸಂಸ್ಥೆಯ ಇತ್ತೀಚಿನ 'ಐಕ್ಯೂ ನಿಯೋ 7 ಪ್ರೊ 5G' ಮೊಬೈಲ್‌ ತನ್ನ ಹೈ ಎಂಡ್‌ ಫೀಚರ್ಸ್‌ಗಳಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಫೋನ್‌ ಈಗಾಗಲೇ ಇ ಕಾಮರ್ಸ್‌ ತಾಣದಲ್ಲಿ ಮಾರಾಟ ಕಂಡಿದೆ. ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಇಂದು (ಜು. 21) ಮತ್ತೆ ಸೇಲ್‌ ಪ್ರಾರಂಭಿಸಲಿದೆ.

ಹೌದು, ಐಕ್ಯೂ ನಿಯೋ 7 ಪ್ರೊ 5G ಮೊಬೈಲ್‌ ಅಮೆಜಾನ್‌ನಲ್ಲಿ ಇಂದು ಮದ್ಯಾಹ್ನ 12 ರಿಂದ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಫೋನ್‌ 8GB + 128GB ಮತ್ತು 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಅವುಗಳು ಕ್ರಮವಾಗಿ ಆಗಿವೆ. ಇನ್ನು ಅಮೆಜಾನ್‌ನಲ್ಲಿ ಈ ಫೋನ್‌ 34,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.

ಇಂದು ಮತ್ತೆ ಸೇಲ್‌ ಆರಂಭಿಸಲಿದೆ ಈ ದೈತ್ಯ 5G ಫೋನ್‌!..ಆಫರ್‌ ಬೆಲೆ ಎಷ್ಟು?

ಅಂದಹಾಗೆ ನಿಯೋ 7 ಪ್ರೊ 5G ಫೋನ್‌ ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್ 8+ ಜೆನ್‌ 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ. ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಹಾಗದರೇ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ ನಿಯೋ 7 ಪ್ರೊ 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸದ ಮಾಹಿತಿ ಇಲ್ಲಿದೆ : ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್‌ಫೋನ್‌ 6.78 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದ ಈ ಡಿಸ್‌ಪ್ಲೇಯು 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದ್ದು, 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಆಯ್ಕೆ ಅನ್ನು ಪಡೆದುಕೊಂಡಿದೆ.

ಐಕ್ಯೂ ನಿಯೋ 7 ಪ್ರೊ 5G ಪ್ರೊಸೆಸರ್‌ ಸಾಮರ್ಥ್ಯ ಹೇಗಿದೆ : ಐಕ್ಯೂ ನಿಯೋ 7 ಪ್ರೊ 5G ಫೋನ್‌ ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್ 8+ ಜೆನ್‌ 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಬೆಂಬಲದೊಂದಿಗೆ ಕೆಲಸ ಮಾಡಲಿದೆ. ಇದಲ್ಲದೇ 12GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಸಹ ಪಡೆದುಕೊಂಡಿದೆ.

ಐಕ್ಯೂ ನಿಯೋ 7 ಪ್ರೊ 5G ಕ್ಯಾಮೆರಾ ಸೆನ್ಸಾರ್‌ ವಿಶೇಷ ಏನು : ಐಕ್ಯೂ ನಿಯೋ 7 ಪ್ರೊ 5G ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಆಗಿದ್ದು, ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್-ಲೆನ್ಸ್‌ ಅನ್ನು ಹೊಂದಿದೆ. ಹಾಗೆಯೇ ಮೂರನೇಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಪಡೆದಿದೆ. ಅಲ್ಲದೇ 16 ಮೆಗಾ ಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಐಕ್ಯೂ ನಿಯೋ 7 ಪ್ರೊ 5G ಬ್ಯಾಟರಿ ಬ್ಯಾಕ್‌ಅಪ್‌ ಮಾಹಿತಿ : ಐಕ್ಯೂ ನಿಯೋ 7 ಪ್ರೊ 5G ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಬೆಂಬಲವಾಗಿ 120W ಫ್ಲ್ಯಾಶ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.2, GPS, GNSS, NavIC, ಮತ್ತು USB ಟೈಪ್-C ಪೋರ್ಟ್ ಸೌಲಭ್ಯಗಳನ್ನು ಇದು ಹೊಂದಿದೆ.

Best Mobiles in India

English summary
iqoo neo 7 pro 5g back on sale via amazon: offer Price, specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+