iQoo: ಭಾರತಕ್ಕೆ ಕಾಲಿಟ್ಟ ಐಕ್ಯೂ ನಿಯೋ 7ಪ್ರೊ 5G! 120W ವೇಗದ ಚಾರ್ಜಿಂಗ್ ವಿಶೇಷ!
ಐಕ್ಯೂ ಬ್ರ್ಯಾಂಡ್ ಕೂಡ ಭಾರತದಲ್ಲಿ ತನ್ನದೇ ಆದ ಪ್ರಾಬಲ್ಯವನ್ನು ಪಡೆದಿದೆ. ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಗಮನಸೆಳೆದಿದೆ. ಇದೀಗ ಸಾಕಷ್ಟು ದಿನಗಳಿಂದ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ಐಕ್ಯೂ ನಿಯೋ 7ಪ್ರೊ 5G (iQoo Neo 7 Pro 5G) ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್ ಹೊಂದಿದೆ.
ಹೌದು, ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗಾದ್ರೆ ಈ ಹೊಸ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ ನಿಯೋ 7ಪ್ರೊ 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ನೊಂದಿಗೆ ಬರಲಿದೆ.
ಐಕ್ಯೂ ನಿಯೋ 7ಪ್ರೊ 5G ಪ್ರೊಸೆಸರ್ ಯಾವುದು?
ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ.
ಐಕ್ಯೂ ನಿಯೋ 7ಪ್ರೊ 5G ಕ್ಯಾಮೆರಾ ಸೆಟ್‌ಅಪ್ ಏನಿದೆ?
ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್-ಲೆನ್ಸ್ ಅನ್ನು ಹೊಂದಿದೆ. ಇದರ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.


ಐಕ್ಯೂ ನಿಯೋ 7ಪ್ರೊ 5G ಬ್ಯಾಟರಿ ಯಾವುದು?
ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 120W ಫ್ಲ್ಯಾಶ್ ಚಾರ್ಜ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.2, GPS, GNSS, NavIC, ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್, ಇ-ಕಂಪಾಸ್, ಗೈರೊಸ್ಕೋಪ್ ಅನ್ನು ಒಳಗೊಂಡಿದೆ.
ಐಕ್ಯೂ ನಿಯೋ 7ಪ್ರೊ 5G ಬೆಲೆ ಮತ್ತು ಲಭ್ಯತೆ
ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್ ಭಾರತದಲ್ಲಿ 8GB+128GB RAM ಸ್ಟೋರೇಜ್ ಆಯ್ಕೆಗೆ 34,999ರೂ.ಬೆಲೆಯನ್ನು ಹೊಂದಿದೆ. ಇದರ 12GB+256GB ರೂಪಾಂತರದ ಆಯ್ಕೆಯು 37,999ರೂ.ಬೆಲೆಯನ್ನು ಹೊಂದಿದೆ. ಇದನ್ನು ಡಾರ್ಕ್ ಸ್ಟಾರ್ಮ್ ಮತ್ತು ಫಿಯರ್‌ಲೆಸ್ ಫ್ಲೇಮ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಅನ್ನು ಜುಲೈ 15 ರಿಂದ ಐಕ್ಯೂ ಕಂಪನಿಯ ಆನ್‌ಲೈನ್ ಸ್ಟೋರ್, ಅಮೆಜಾನ್ ಇಂಡಿಯಾ ಮತ್ತು ರಿಟೇಲ್ ಔಟ್‌ಲೆಟ್‌ಗಳ ಮೂಲಕ ಖರೀದಿಸಬಹುದಾಗಿದೆ.
ಲಾಂಚ್ ಆಫರ್ ಏನಿದೆ?
ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್ ಅನ್ನು ಜುಲೈ 18 ರೊಳಗೆ ಖರೀದಿಸುವ ಗ್ರಾಹಕರಿಗೆ 1,000ರೂ. ರಿಯಾಯಿತಿ ಸಿಗಲಿದೆ. ಜೊತೆಗೆ SBI ಮತ್ತು ICICI ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸುವವರಿಗೆ 2,000ರೂ. ರಿಯಾಯಿತಿ ದೊರೆಯಲಿದೆ. ಇದರೊಂದಿಗೆ ಐಕ್ಯೂ ಕಂಪನಿಯ ಪ್ರಕಾರ ಸ್ಮಾರ್ಟ್‌ಫೋನ್ ಅನ್ನು ಮುಂಗಡವಾಗಿ ಬುಕ್ ಮಾಡುವ ಗ್ರಾಹಕರು ಹೆಚ್ಚುವರಿ ವರ್ಷದ ವಾರಂಟಿ ಕವರೇಜ್ ಅನ್ನು ಪಡೆದುಕೊಳ್ಳಲಿದ್ದಾರೆ.


Click it and Unblock the Notifications








