Home
ಸುದ್ದಿಜಾಲ

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಐಕ್ಯೂ ನಿಯೋ 7 ಪ್ರೊ! ಏನೆಲ್ಲಾ ನಿರೀಕ್ಷೆ?

ಐಕ್ಯೂ ಕಂಪೆನಿ ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸ್ಟೈಲಿಶ್‌ ಲುಕ್‌ ಹಾಗೂ ಡಿಸೈನ್‌ ಫೋನ್‌ಗಳ ಮೂಲಕ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ.

ಹೌದು, ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಏನಿರಲಿದೆ ಅನ್ನೊದು ಇದೀಗ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಅದರಂತೆ ಈ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಐಕ್ಯೂ ನಿಯೋ 7 ಪ್ರೊ! ಏನೆಲ್ಲಾ ನಿರೀಕ್ಷೆ?

ಐಕ್ಯೂ ನಿಯೋ 7 ಪ್ರೊ ಫೀಚರ್ಸ್‌ ನಿರೀಕ್ಷೆ: ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಒಳಗೊಂಡಿರುವ ಸಾಧ್ಯತೆಯಿದೆ.

ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ನಲ್ಲಿ ಬರುವ ನಿರೀಕ್ಷೆಯಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಅನ್ನು ಬೆಂಬಲಿಸುವ ಸಾದ್ಯತೆಯನ್ನು ಸಹ ಹೊಂದಿದೆ.

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಐಕ್ಯೂ ನಿಯೋ 7 ಪ್ರೊ! ಏನೆಲ್ಲಾ ನಿರೀಕ್ಷೆ?

ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಬಹುದು ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಇರಬಹುದು ಎಂದು ವರದಿಯಾಗಿದೆ. ಇದರೊಂದಿಗೆ 32 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ ಎಂದು ಅಂದಾಜಿಸಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ 120W ಫ್ಲ್ಯಾಷ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಜೂನ್‌ ತಿಂಗಳ ಅಂತ್ಯದಲ್ಲಿ ಭಾರತಕ್ಕೆ ಎಂಟ್ರಿ ನೀಡಲಿದೆ ಎಂದು ವರದಿಯಾಗಿದೆ.

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಐಕ್ಯೂ ನಿಯೋ 7 ಪ್ರೊ! ಏನೆಲ್ಲಾ ನಿರೀಕ್ಷೆ?

ಇತ್ತೀಚಿಗೆ ಲಾಂಚ್‌ ಆಗಿದ್ದ ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್‌ ಕೂಡ ಈಗಾಗಲೇ ಭಾರಿ ಟ್ರೆಂಡ್‌ ಹುಟ್ಟುಹಾಕಿದೆ. ಈ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು AMOLED ಡಿಸ್ಪ್ಲೇ ಜೊತೆಗೆ 20:9 ಆಕಾರ ಅನುಪಾತ, 93.11 ಪ್ರತಿಶತ ಸ್ಕ್ರೀನ್ ಟು ಬಾಡಿ , ಮತ್ತು 120Hz ರಿಫ್ರೆಶ್ ದರ. ಕೆಪ್ಯಾಸಿಟಿವ್ ಟಚ್ ಡಿಸ್ಪ್ಲೇ 1,200Hz ತ್ವರಿತ ಸ್ಪರ್ಶ ಮಾದರಿ ದರ, 300Hz ಸ್ಪರ್ಶ ಮಾದರಿ ದರ 1,300 ನಿಟ್ಸ್ ಗರಿಷ್ಠ ಹೊಳಪು ಮತ್ತು 388ppi ಪಿಕ್ಸೆಲ್ ಸಾಂದ್ರತೆಯನ್ನು ನೀಡುತ್ತದೆ.

ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 8200 5G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಫನ್‌ಟೌಚ್‌ OS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ನಲ್ಲಿ ಗೇಮಿಂಗ್ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಲಭ್ಯವಿರುವ RAM ಅನ್ನು 20GB ವರೆಗೆ ವಿಸ್ತರಿಸಬಹುದಾಗಿದೆ.

Best Mobiles in India

English summary
iQoo Neo 7 Pro is expected to launch in India soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+