Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್‌! ಫೀಚರ್ಸ್‌ ಹೇಗಿದೆ?

ಐಕ್ಯೂ ಕಂಪೆನಿಯ ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ಐಕ್ಯೂ ಕಂಪೆನಿ ಕೂಡ ಹೊಸ ಮಾದರಿಯ ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇನ್ನು ಇತ್ತೀಚಿಗೆ ತನ್ನ ಐಕ್ಯೂ ನಿಯೋ 7 ಸರಣಿಯನ್ನು ಪರಿಚಯಿಸಿ ಸಾಕಷ್ಟು ಸೌಂಡ್‌ ಮಾಡಿತ್ತು. ಇದೀಗ ಅದೇ ಸರಣಿಯಲ್ಲಿ ಹೊಸದಾಗಿ ಐಕ್ಯೂ ನಿಯೋ 7 ರೇಸಿಂಗ್‌ ಎಡಿಷನ್‌ ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8+ Gen 1 ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ.

ಐಕ್ಯೂ

ಹೌದು, ಐಕ್ಯೂ ಕಂಪೆನಿ ತನ್ನ ಹೊಸ ಐಕ್ಯೂ ನಿಯೋ 7 ರೇಸಿಂಗ್ ಆವೃತ್ತಿಯನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸ್ಯಾಮ್‌ಸಂಗ್‌ GN5 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 120W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್‌ ಸ್ಮಾರ್ಟ್‌ಫೋನ್‌ 6.78 ಇಂಚಿನ FHD+ E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಪಂಚ್-ಹೋಲ್ ಕಟೌಟ್ ಅನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ HDR10 ಬೆಂಬಲವನ್ನು ಹೊಂದಿದೆ. ಇದಲ್ಲದೆ ಫ್ರೇಮ್ ರೇಟ್‌ ಇಂಟರ್ಪೋಲೇಷನ್, ಇಮೇಜ್ ರೆಂಡರಿಂಗ್ ಫೀಚರ್ಸ್‌ ಒಳಗೊಂಡ ಪ್ರೊ+ ಡಿಸ್‌ಪ್ಲೇ ಚಿಪ್ ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್‌ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8+ Gen 1SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರದ ಮೇಲೆ OriginOS 3 ನಲ್ಲಿ ರನ್ ಆಗುತ್ತದೆ. ಹಾಗೆಯೇ 16GB RAM ಮತ್ತು 512GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ವಿಸ್ತರಿಸಬಹುದಾದ 8GB RAM ಬೆಂಬಲವನ್ನು ಕೂಡ ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್‌ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸ್ಯಾಮ್‌ಸಂಗ್‌ GN5 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಇನ್ನು 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಐಕ್ಯೂ ನಿಯೋ 7 ರೇಸಿಂಗ್ ಆವೃತ್ತಿಯು 120W ವೇಗದ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಹೊಂದಿದೆ. ಇದಲ್ಲದೆ ಆಕ್ಸಿಲೆರೋ ಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಗ್ಯಾವಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಐಕ್ಯೂ ನಿಯೋ 7 ರೇಸಿಂಗ್ ಆವೃತ್ತಿಯು ಪ್ರಸ್ತುತ ಚೀನಾದಲ್ಲಿ ಬಿಡುಗಡೆಯಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ 8GB + 128GB ರೂಪಾಂತರದ ಆಯ್ಕೆಯ ಬೆಲೆ RMB 2,799 (33,305ರೂ) ಆಗಿದೆ.

Best Mobiles in India

English summary
iQOO Neo 7 Racing Edition With 120W Charging Launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+