ಈ ಫೋನ್ ಬೆಲೆಯಲ್ಲಿ 2000ರೂ. ಇಳಿಕೆ!..ಇದರ ಲುಕ್ ಬೊಂಬಾಟ್!
ಐಕ್ಯೂ ಸಂಸ್ಥೆಯು ಇತ್ತೀಗಷ್ಟೆ ಭಾರತದಲ್ಲಿ ಬಿಡುಗಡೆ ಮಾಡಿರುವ ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಭಾರೀ ಗುಡ್‌ನ್ಯೂಸ್ ಇದೆ. ಅದೇನಂತೀರಾ, ಈ ಫೋನ್ ಬೆಲೆಯಲ್ಲಿ ಈಗ ಬರೋಬ್ಬರಿ 2,000ರೂ. ಇಳಿಕೆ ಆಗಿದ್ದು, ಗ್ರಾಹಕರಿಗೆ ಸಖತ್ ಖುಷಿ ಎನಿಸಿದೆ.
ಹೌದು, ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಮಾದರಿಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8GB + 128GB ಮತ್ತು 12GB + 256GB ಆಗಿವೆ. ಈ ಎರಡು ವೇರಿಯಂಟ್‌ಗಳ ಬೆಲೆಯಲ್ಲಿಯೂ ಈಗ 2,000 ರೂ. ಬೆಲೆ ಇಳಿಕೆ ಆಗಿದೆ.

ಬೆಲೆ ಇಳಿಕೆ ಬಳಿಕ ಐಕ್ಯೂ ನಿಯೋ 7 ಪ್ರೊ 5G ಫೋನ್ 8GB + 128 GB ವೇರಿಯಂಟ್ 27,999ರೂ. ಗಳಿಗೆ ಲಭ್ಯ ಇದೆ. ಹಾಗೆಯೇ ಗ್ರಾಹಕರು 12GB + 256GB ವೇರಿಯಂಟ್ ಅನ್ನು 31,999ರೂ. ಗಳಿಗೆ ಖರೀದಿಸಬಹುದಾಗಿದೆ. ಹಾಗಾದರೆ ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಕ್ಯೂ ನಿಯೋ 7 ಪ್ರೊ 5G ಡಿಸ್‌ಪ್ಲೇ ರಚನೆ ಹೇಗಿದೆ : ಐಕ್ಯೂ ನಿಯೋ 7 ಪ್ರೊ 5G ಮೊಬೈಲ್ 6.78 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದ್ದು, ಹಾಗೆಯೇ ಇದು 120Hz ರಿಫ್ರೆಶ್ ರೇಟ್ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಸಾಮರ್ಥ್ಯವನ್ನು ಪಡೆದು ಕೊಂಡಿದೆ.
ಐಕ್ಯೂ ನಿಯೋ 7 ಪ್ರೊ 5G ಪ್ರೊಸೆಸರ್ ಕಾರ್ಯವೈಖರಿ ಏನು : ಐಕ್ಯೂ ನಿಯೋ 7 ಪ್ರೊ 5G ಮೊಬೈಲ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 8+ ಜೆನ್ 1 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಈ ಪ್ರೊಸೆಸರ್‌ಗೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಇದು ಪಡೆದುಕೊಂಡಿದೆ.
ಐಕ್ಯೂ ನಿಯೋ 7 ಪ್ರೊ 5G ಕ್ಯಾಮೆರಾ ಸೆನ್ಸಾರ್ ಯಾವುದು : ಐಕ್ಯೂ ನಿಯೋ 7 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದ್ದು, ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೇ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಐಕ್ಯೂ ನಿಯೋ 7 ಪ್ರೊ 5G ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ : ಐಕ್ಯೂ ನಿಯೋ 7 ಪ್ರೊ 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಈ ಬ್ಯಾಟರಿಗೆ ಪೂರಕವಾಗಿ 120W ಫ್ಲ್ಯಾಶ್ ಚಾರ್ಜಿಂಗ್ ಸೌಲಭ್ಯ ಕೂಡಾ ಇದು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.2, GPS, GNSS, NavIC, ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ.


Click it and Unblock the Notifications








