Home
ಸುದ್ದಿಜಾಲ

ಬಿಡುಗಡೆಗೂ ಮುನ್ನವೇ ಐಕ್ಯೂ ನಿಯೋ 7 SE ಫೀಚರ್ಸ್‌ ಬಹಿರಂಗ!

ಐಕ್ಯೂ ಕಂಪೆನಿಯ ಹೊಸ ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಈಗಾಗಲೇ ಫಿಕ್ಸ್‌ ಆಗಿದ್ದು, ಇದೀಗ ಇದರ ಫೀಚರ್ಸ್‌ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 8200SoC ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್ಅಪ್‌ ಅನ್ನು ಹೊಂದಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಸ್ಮಾರ್ಟ್‌ಫೋನ್‌

ಹೌದು, ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿರುವ ಸಾಧ್ಯತೆಯಿದೆ. ಜೊತೆಗೆ 4880mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಅಡಾಪ್ಟರ್ ಮೂಲಕ 120W ವೇಗದ ವೈರ್ಡ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಹೊಂದಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ 6.78-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಡಿಸ್‌ಪ್ಲೇ 90.61 % ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ ಹೊಂದಿರಬಹುದು ಎಂದು ಅಂದಾಜಿಸಲಾಗದೆ. ಇದಲ್ಲದೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತದಲ್ಲಿರಬಹುದು ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ v13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲವನ್ನು ಹೊಂದಿರುವುದಿಲ್ಲ ಎಂದು ಹೇಳಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಬಹುದು. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಐಕ್ಯೂ ನಿಯೋ 7 SE ಸ್ಮಾರ್ಟ್‌ಫೋನ್‌ 4880mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು ಅಡಾಪ್ಟರ್ ಮೂಲಕ 120W ವೇಗದ ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುವ ನಿರೀಕ್ಷೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಹೊಂದಿರುವ ಸಾಧ್ಯತೆಯಿದೆ. ಇದರೊಂದಿಗೆ ಆಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಗೈರೋಸ್ಕೋಪ್‌, ಲೈಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಇದೇ ಡಿಸೆಂಬರ್‌ 2 ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಇದು ಪ್ರಾರಂಭದಲ್ಲಿ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಭಾರತದಲ್ಲಿಯೂ ಕೂಡ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆಯಿದೆ. ಇದು ಯಾವ ಪ್ರೈಸ್‌ಟ್ಯಾಗ್‌ನಲ್ಲಿ ಬರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಲಾಂಚ್‌ ಡೇಟ್‌ ಹತ್ತಿರವಾಗ್ತಿದ್ದ ಹಾಗೇ ಇದರ ವಿವರಗಳು ಬಹಿರಂಗವಾಗಬಹುದು ಎಂದು ಅಂದಾಜಿಸಲಾಗಿದೆ.

Best Mobiles in India

English summary
iQOO Neo 7 SE specifications revealed ahead of launch
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+