ಬಿಡುಗಡೆಗೂ ಮುನ್ನವೇ ಪ್ರಿ-ಬುಕಿಂಗ್ ಆರಂಭಕ್ಕೆ ಸಜ್ಜಾದ 'ಐಕ್ಯೂ ನಿಯೋ 9 ಪ್ರೊ'!
ಬಹುನಿರೀಕ್ಷಿತ ಐಕ್ಯೂ ನಿಯೋ 9 ಪ್ರೊ ಫೋನ್ ಇದೇ ಫೆಬ್ರವರಿ 22 ರಂದು ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಆಗಲಿದೆ. ಆದರೆ ಬಿಡುಗಡೆಗೂ ಮುಂಚಿತವಾಗಿ, ಸಂಸ್ಥೆಯು ಸ್ಮಾರ್ಟ್‌ಫೋನ್ ಗಾಗಿ ಮುಂಗಡ ಕಾಯ್ದಿರಿಸುವಿಕೆಯ (Pre-Bookings) ವಿವರಗಳ ಬಗ್ಗೆ ಪ್ರಕಟಿಸಿ ಅಚ್ಚರಿ ಮೂಡಿಸಿದೆ.
ಹೌದು, ಅಮೆಜಾನ್ ತಾಣದಲ್ಲಿ ಇದೇ ಫೆಬ್ರವರಿ 8 ರಿಂದ ಮಧ್ಯಾಹ್ನ 12 ಗಂಟೆಯಿಂದ ಪ್ರಿ-ಬುಕಿಂಗ್ ಪ್ರಾರಂಭವಾಗಲಿದೆ. ಗ್ರಾಹಕರು ಮರುಪಾವತಿಸಬಹುದಾದ ಠೇವಣಿ 1000 ರೂ. ಪಾವತಿಸಿ ಐಕ್ಯೂ ನಿಯೋ 9 ಪ್ರೊ ಫೋನ್ ಅನ್ನು ಮುಂಗಡವಾಗಿ ಬುಕ್ ಮಾಡಬಹುದಾಗಿದೆ.

ಇನ್ನು ಈ ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಸೌಲಭ್ಯ ಜೊತೆಗೆ 50 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಒಳಗೊಂಡಿರುವ ಬಗ್ಗೆ ಸೂಚನೆ ನೀಡಿದೆ. ಹಾಗೆಯೇ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡಾ ಒಳಗೊಂಡಿರುವ ಸಾಧ್ಯತೆ ಅಧಿಕ. ಹಾಗಾದರೆ ಇನ್ನುಳಿದಂತೆ ಐಕ್ಯೂ ನಿಯೋ 9 ಪ್ರೊ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಕ್ಯೂ ನಿಯೋ 9 ಪ್ರೊ - ನಿರೀಕ್ಷಿತ ಫೀಚರ್ಸ್
ಐಕ್ಯೂ ನಿಯೋ 9 ಪ್ರೊ ಮೊಬೈಲ್ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಇದು 1260 x 2800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿರಲಿದೆ. ಇನ್ನು ಡಿಸ್‌ಪ್ಲೇ 453 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರಲಿದ್ದು, ಇದಲ್ಲದೆ ಡಿಸ್‌ಪ್ಲೇಯು 1400 ನಿಟ್ಸ್ ಬ್ರೈಟ್‌ನೆಸ್ ಲೆವೆಲ್ ಪಡೆದುಕೊಂಡಿರಲಿದೆ. ಅಲ್ಲದೇ ಡಿಸ್‌ಪ್ಲೇಯು 144 Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎಂದು ವರದಿಯಾಗಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿರಲಿದ್ದು, ಆಂಡ್ರಾಯ್ಡ್ 14 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 8 GB RAM ಮತ್ತು 256 GB ಹಾಗೂ 12 GB RAM ಮತ್ತು 256 GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸಲು ಅವಕಾಶ ಇರಲಿದೆ.
ಐಕ್ಯೂ ನಿಯೋ 9 ಪ್ರೊ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX920 ಸೆನ್ಸಾರ್‌ನೊಂದಿಗೆ ಬರಲಿದೆ. ಇನ್ನು ಸ್ಮಾರ್ಟ್‌ಫೋನ್ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.
ಇನ್ನು ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ 120W FlashCharge ಸಪೋರ್ಟ್ ಕೂಡಾ ಪಡೆದಿರಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
ಇನ್ನು ಅತ್ಯುತ್ತಮ ಗೇಮಿಂಗ್ ಅನುಭವಕ್ಕಾಗಿ 144 fps ಗೇಮಿಂಗ್ ಮತ್ತು 900 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒದಗಿಸುತ್ತದೆ. ನೆಟ್‌ಫ್ಲಿಕ್ಸ್, ಯೂಟ್ಯೂಬ್ ಮತ್ತು ಪ್ರೈಮ್ ವಿಡಿಯೋದಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಫ್ರೇಮ್‌ಗಳನ್ನು ಸೇರಿಸುವ ಮೂಲಕ ವೀಡಿಯೊ ವಿಷಯವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ MEMC ತಂತ್ರಜ್ಞಾನ ವನ್ನು ಒಳಗೊಂಡಿದೆ ಎನ್ನಲಾಗಿದೆ. ಇನ್ನು ಈ ಫೋನ್ ಇದೇ ಫೆಬ್ರವರಿ 22 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ.


Click it and Unblock the Notifications








