ಇಂದು ಐಕ್ಯೂ ನಿಯೋ 9 ಪ್ರೊ ಪ್ರಿ-ಬುಕಿಂಗ್‌ಗೆ ಲಭ್ಯ!..ಬೆಲೆ ಎಷ್ಟು ಗೊತ್ತಾ?
ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಐಕ್ಯೂ ನಿಯೋ 9 ಪ್ರೊ ಫೋನ್ ಇಂದು ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ಪ್ರಿ-ಬುಕಿಂಗ್ (Pre-Booking) ಆರಂಭವಾಗಲಿದೆ. ಅಂದಹಾಗೆ ಈ ಫೋನ್ ಇದೇ ಫೆಬ್ರವರಿ 22 ರಂದು ಅಧಿಕೃತವಾಗಿ ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಆಗಲಿದೆ. ಈ ಫೋನಿನ ಬೆಲೆಯು ಲೀಕ್ ಆಗಿದ್ದು, ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಇದೇ ಫೆಬ್ರವರಿ 8 ರಿಂದ ಮಧ್ಯಾಹ್ನ 12 ಗಂಟೆಯಿಂದ ಪ್ರಿ-ಬುಕಿಂಗ್ ಶುರು ಆಗಲಿದೆ. ಗ್ರಾಹಕರು ಮರುಪಾವತಿಸಬಹುದಾದ ಠೇವಣಿ 1000 ರೂ. ಪಾವತಿಸಿ ಐಕ್ಯೂ ನಿಯೋ 9 ಪ್ರೊ ಫೋನ್ ಅನ್ನು ಮುಂಗಡವಾಗಿ ಬುಕ್ ಮಾಡಬಹುದಾಗಿದೆ. ಟಿಪ್‌ಸ್ಟರ್ ಮುಕುಲ್ ಶರ್ಮಾ ಎಕ್ಸ್‌ನಲ್ಲಿ ಶೇರ್ ಮಾಡಿರುವ ಮಾಹಿತಿಯಂತೆ 8GB + 256GB ವೇರಿಯಂಟ್ ಬೆಲೆಯು 37,999ರೂ. ಆಗಿರಲಿದೆ.

ಅಂದಹಾಗೆ ಈ ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಪವರ್ ಸೌಲಭ್ಯ ಇದರೊಂದಿಗೆ 50 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಒಳಗೊಂಡಿರುವ ಬಗ್ಗೆ ಸೂಚನೆ ನೀಡಿದೆ. ಹಾಗೆಯೇ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡಾ ಒಳಗೊಂಡಿರುವ ಸಾಧ್ಯತೆ ಅಧಿಕ. ಹಾಗಾದರೆ ಇನ್ನುಳಿದಂತೆ ಐಕ್ಯೂ ನಿಯೋ 9 ಪ್ರೊ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಕ್ಯೂ ನಿಯೋ 9 ಪ್ರೊ ಮೊಬೈಲ್ - ಫೀಚರ್ಸ್
ಐಕ್ಯೂ ಸಂಸ್ಥೆಯ ಈ ಮೊಬೈಲ್ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಇದು 1260 x 2800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿರಲಿದೆ. ಇನ್ನು ಡಿಸ್‌ಪ್ಲೇ 453 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರಲಿದ್ದು, ಇದಲ್ಲದೆ ಡಿಸ್‌ಪ್ಲೇಯು 1400 ನಿಟ್ಸ್ ಬ್ರೈಟ್‌ನೆಸ್ ಲೆವೆಲ್ ಪಡೆದುಕೊಂಡಿರಲಿದೆ. ಅಲ್ಲದೇ ಡಿಸ್‌ಪ್ಲೇಯು 144 Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿರಲಿದೆ ಎಂದು ವರದಿಯಾಗಿದೆ.

ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಬಲ ಅನ್ನು ಪಡೆದಿರಲಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 8 GB RAM ಮತ್ತು 256 GB ಹಾಗೂ 12 GB RAM ಮತ್ತು 256 GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಸಿಗಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸಲು ಅವಕಾಶ ಲಭ್ಯ.
ಐಕ್ಯೂ ನಿಯೋ 9 ಪ್ರೊ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿರಲಿದೆ. ಇದರಲ್ಲಿ ಮಿಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX920 ಸೆನ್ಸಾರ್‌ನೊಂದಿಗೆ ಎಂಟ್ರಿ ಕೊಡಲಿದೆ. ಇನ್ನು ಮೊಬೈಲ್ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.
ಇನ್ನು ಐಕ್ಯೂ ನಿಯೋ 9 ಪ್ರೊ ಮೊಬೈಲ್ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ. ಇದಕ್ಕೆ ಪೂರಕವಾಗಿ 120W FlashCharge ಸಪೋರ್ಟ್ ಕೂಡಾ ಲಭ್ಯ ವಾಗಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಇದೇ ಫೆಬ್ರವರಿ 22 ರಂದು ಭಾರತದಲ್ಲಿ ಲಾಂಚ್ ಆಗಲಿದೆ.


Click it and Unblock the Notifications








