iQoo: ಬಿಡುಗಡೆಗೂ ಮುನ್ನವೇ ಬಹಿರಂಗವಾಯ್ತು ಐಕ್ಯೂ ನಿಯೋ 9 ಪ್ರೊ ಡಿಸೈನ್!
iQoo Neo 9 Pro ಸ್ಮಾರ್ಟ್‌ಫೋನ್ ಭಾರತದ ಮೊಬೈಲ್ ಮಾರುಕಟ್ಟೆಗೆ ಎಂಟ್ರಿ ನೀಡುವುದಕ್ಕೆ ತಯಾರಿ ನಡೆಸಿದೆ. ಈಗಾಗಲೇ ತನ್ನ ಫೀಚರ್ಸ್ ಸೋರಿಕೆಯ ಮೂಲಕ ಸಾಕಷ್ಟು ಸದ್ದು ಮಾಡುತ್ತಿರುವ ಈ ಫೋನ್ ಇದೀಗ ತನ್ನ ಡಿಸೈನ್ ಡಿಟೈಲ್ಸ್ ಅನ್ನು ಬಹಿರಂಗಪಡಿಸಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ರಿಯರ್ ಪ್ಯಾನೆಲ್‌ನಲ್ಲಿ ಡ್ಯುಯಲ್ ಬಣ್ಣಗಳನ್ನು ಹೊಂದಿರುತ್ತದೆ.
ಹೌದು, ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ ಡಿಸೈನ್ ಬಹಿರಂಗವಾಗಿದೆ. ಈ ಮೂಲಕ ಟೆಕ್ ವಲಯದಲ್ಲಿ ಬಿಡುಗಡೆಗೂ ಮುನ್ನವೇ ಸಾಕಷ್ಟು ಸೌಂಡ್ ಮಾಡುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ ನಿಯೋ 9 ಪ್ರೊ ಡಿಸೈನ್ ಹೇಗಿರಲಿದೆ?
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ ರಿಯರ್ ಪ್ಯಾನೆಲ್‌ನಲ್ಲಿ ಡ್ಯುಯಲ್ ಬಣ್ಣಗಳನ್ನು ಹೊಂದಿರುತ್ತದೆ. ಅಂದರೆ ಈ ಫೋನ್ ಕೆಂಪು ಮತ್ತು ಬಿಳಿ ಸಂಯೋಜನೆಯನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನು ಸ್ಮಾರ್ಟ್‌ಫೋನ್ ಎಡಭಾಗದಲ್ಲಿ ತೆಳುವಾದ ಬಿಳಿ ಪಟ್ಟಿಯನ್ನು ಹೊಂದಿರುತ್ತದೆ, ಇನ್ನುಳಿದ ಭಾಗವು ಕೆಂಪು ಬಣ್ಣದ್ದಲ್ಲಿರಲಿದೆ. ಜೊತೆಗೆ ಸ್ಮಾರ್ಟ್‌ಫೋನ್ ಫ್ಲಾಟ್ ಡಿಸ್‌ಪ್ಲೇ ಮತ್ತು ಕೆಂಪು ಅಂಚುಗಳನ್ನು ಹೊಂದಿರುತ್ತದೆ ಎನ್ನಲಾಗಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ನಲ್ಲಿನ ರಿಯರ್ ಕ್ಯಾಮೆರಾಗಳು ಚೌಕಾಕಾರದ ವೃತ್ತದ ವಿನ್ಯಾಸವನ್ನು ಹೊಂದಿರುತ್ತದೆ ಎಂದು ವರದಿಯಾಗಿದೆ.
ಐಕ್ಯೂ ನಿಯೋ 9 ಪ್ರೊ ಫೀಚರ್ಸ್ ನಿರೀಕ್ಷೆ ಏನು?
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ LTPO AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು 1260 x 2800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿರಲಿದೆ. ಇನ್ನು ಡಿಸ್‌ಪ್ಲೇ 453 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, HDR10+ ನೊಂದಿಗೆ ಬರಲಿದೆ. ಇದಲ್ಲದೆ ಡಿಸ್‌ಪ್ಲೇಯು 1400 ನಿಟ್ಸ್ ಬ್ರೈಟ್‌ನೆಸ್ ಲೆವೆಲ್ ಪಡೆದುಕೊಂಡಿರಲಿದೆ. ಜೊತೆಗೆ ಡಿಸ್‌ಪ್ಲೇಯು 144 Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎಂದು ವರದಿಯಾಗಿದೆ.

ಐಕ್ಯೂ ನಿಯೋ 9 ಪ್ರೊ ಪ್ರೊಸೆಸರ್ ಯಾವುದು?
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ v14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಹಾಗೂ 12GB RAM ಮತ್ತು 256 GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸಬಹುದಾಗಿದೆ.
ಐಕ್ಯೂ ನಿಯೋ 9 ಪ್ರೊ ಕ್ಯಾಮೆರಾ ಸೆಟಪ್ ಏನಿದೆ?
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ Sony IMX920 ಸೆನ್ಸಾರ್‌ನೊಂದಿಗೆ ಬರಲಿದೆ. ಇನ್ನು ಸ್ಮಾರ್ಟ್‌ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎನ್ನಲಾಗಿದೆ.
ಐಕ್ಯೂ ನಿಯೋ 9 ಪ್ರೊ ಬ್ಯಾಟರಿ ಮತ್ತು ಇತರೆ
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ 5160 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W FlashCharge ಬೆಂಬಲದೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದು ಉತ್ತಮ ಗೇಮಿಂಗ್ ಅನುಭವಕ್ಕಾಗಿ 144 fps ಗೇಮಿಂಗ್ ಮತ್ತು 900 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒದಗಿಸುತ್ತದೆ. ನೆಟ್‌ಫ್ಲಿಕ್ಸ್, ಯೂಟ್ಯೂಬ್ ಮತ್ತು ಪ್ರೈಮ್ ವಿಡಿಯೋದಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಫ್ರೇಮ್‌ಗಳನ್ನು ಸೇರಿಸುವ ಮೂಲಕ ವೀಡಿಯೊ ವಿಷಯವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ MEMC ತಂತ್ರಜ್ಞಾನವನ್ನು ಒಳಗೊಂಡಿದೆ ಎಂದು iQoo ಬಹಿರಂಗಪಡಿಸಿದೆ.

ಐಕ್ಯೂ ನಿಯೋ 9 ಪ್ರೊ ಬೆಲೆ ಮತ್ತು ಲಭ್ಯತೆ
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಇದು ಇದೇ ಫೆಬ್ರವರಿ 22 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರು 40,000 ರೂಪಾಯಿಗಳ Amazon Pay ಕ್ಯಾಶ್‌ಬ್ಯಾಕ್ ಗೆಲ್ಲಲು ಅರ್ಹರಾಗಿರುತ್ತಾರೆ ಎನ್ನಲಾಗಿದೆ.


Click it and Unblock the Notifications








