ಐಕ್ಯೂ ನಿಯೋ 9ಪ್ರೊ ಫೋನ್‌ನ ಫೀಚರ್ಸ್ ಬಹಿರಂಗ! ಸದ್ದು ಮಾಡುವುದು ಗ್ಯಾರಂಟಿ!
ಐಕ್ಯೂ ನಿಯೋ 9 ಸ್ಮಾರ್ಟ್‌ಫೋನ್ ಸರಣಿಯು ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡುವುದಕ್ಕೆ ತಯಾರಿ ನಡೆಸಿದೆ. ಈ ಸರಣಿಯಲ್ಲಿ ಐಕ್ಯೂ ನಿಯೋ 9 ಮತ್ತು ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಿದೆ. ಇದರಲ್ಲಿ ಪ್ರಮುಖವಾಗಿ ಐಕ್ಯೂ ನಿಯೋ 9ಪ್ರೊ ಸ್ಮಾರ್ಟ್‌ಫೋನ್ ಗಮನಸೆಳೆಯುವ ಸೂಚನೆ ನೀಡಿದೆ. ಇದರಲ್ಲಿ ಅತ್ಯಾಕರ್ಷಕ ಫೀಚರ್ಸ್‌ಗಳನ್ನು ನಿರೀಕ್ಷಿಸಲಾಗಿದೆ.
ಹೌದು, ಐಕ್ಯೂ ನಿಯೋ 9ಪ್ರೊ ಸ್ಮಾರ್ಟ್‌ಫೋನ್ ಸಾಕಷ್ಟು ಸದ್ದು ಮಾಡುವ ಸೂಚನೆ ನೀಡಿದೆ. ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಇದೀಗ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾಗಳೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ ನಿಯೋ 9ಪ್ರೊ ನಿರೀಕ್ಷಿತ ಫೀಚರ್ಸ್ ಏನು?
ಐಕ್ಯೂ ನಿಯೋ 9 ಸ್ಮಾರ್ಟ್‌ಫೋನ್ 6.78 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್‌ನೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 388 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, HDR10+, 600 ನಿಟ್ಸ್ ಬೆಂಬಲಿಸಲಿದೆ ಎನ್ನಲಾಗಿದೆ. ಇದರೊಂದಿಗೆ 1000 ನಿಟ್ಸ್ (HBM), 2000 ನಿಟ್ಸ್ (ಗರಿಷ್ಠ) ಬೆಂಬಲದೊಂದಿಗೆ ಬರಲಿದೆ.
ಐಕ್ಯೂ ನಿಯೋ 9ಪ್ರೊ ಪ್ರೊಸೆಸರ್ ಯಾವುದು?
ಐಕ್ಯೂ ನಿಯೋ 9ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಮಾಲಿ-G720 ಇಮ್ಮಾರ್ಟಲಿಸ್ MP12 GPU ಅನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಔಟ್ ಆಫ್ ದಿ ಬಾಕ್ಸ್ ಆಧಾರಿತ ಒರಿಜಿನ್ ಓಎಸ್ 4 ನಲ್ಲಿ ರನ್ ಆಗಲಿದೆ. ಹಾಗೆಯೇ 12 GB RAM + 256 GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ. ಇದಲ್ಲದೆ 8 GB ವರ್ಚುವಲ್ RAM ಅನ್ನು ಸಹ ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ.

ಐಕ್ಯೂ ನಿಯೋ 9ಪ್ರೊ ಕ್ಯಾಮೆರಾ ಸೆಟ್‌ಅಪ್ ಏನಿರಲಿದೆ?
ಐಕ್ಯೂ ನಿಯೋ 9 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹಾಗೂ ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ನಿರೀಕ್ಷೆಯಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿರಲಿದೆ.

ಐಕ್ಯೂ ನಿಯೋ 9ಪ್ರೊ ಬ್ಯಾಟರಿ ಸಾಮರ್ಥ್ಯವೇನು?
ಐಕ್ಯೂ ನಿಯೋ 9ಪ್ರೊ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇನ್ನು ಯುಎಸ್‌ಬಿ ಟೈಪ್-ಸಿ ಪೋರ್ಟ್, ಸ್ಪೀಕರ್ ಗ್ರಿಲ್, ಪ್ರೈಮರಿ ಮೈಕ್ರೊಫೋನ್ ಮತ್ತು ಸಿಮ್ ಕಾರ್ಡ್ ಟ್ರೇ ಅನ್ನು ಕೆಳಭಾಗದಲ್ಲಿ ಕಾಣಬಹುದು.
ಇದಲ್ಲದೆ ಇದೇ ಸಮಯದಲ್ಲಿ ಐಕ್ಯೂ ಕಂಪೆನಿ ತನ್ನ ಹೊಸ ಐಕ್ಯೂ 12 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಡಿಸೆಂಬರ್ 12 ರಂದು ಪರಿಚಯಿಸುವುದಾಗಿ ಅಧಿಕೃತ ಘೋಷಣೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಸೂಪರ್ ಫಾಸ್ಟ್ 120W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








