Home
ಸುದ್ದಿಜಾಲ

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಐಕ್ಯೂ ನಿಯೋ 9 ಪ್ರೊ! ಫೀಚರ್ಸ್‌ ನಿರೀಕ್ಷೆ ಏನು?

ಐಕ್ಯೂ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಡಿಮ್ಯಾಂಡ್‌ ಇದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳಿಂದಾಗಿ ಮೊಬೈಲ್‌ ಪ್ರಿಯರ ಮನಗೆದ್ದಿದೆ. ಸದ್ಯ ಶೀಘ್ರದಲ್ಲೇ ಐಕ್ಯೂ ನಿಯೋ 9 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ನಿರೀಕ್ಷೆಯಿದೆ. ಈ ಸರಣಿಯಲ್ಲಿ ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್‌ ಅತ್ಯಾಕರ್ಷಕ ಫೀಚರ್ಸ್‌ಗಳನ್ನು ಹೊಂದಿರಲಿದೆ.

ಹೌದು, ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಐಕ್ಯೂ ನಿಯೋ 9 ಪ್ರೊ! ಫೀಚರ್ಸ್‌ ನಿರೀಕ್ಷೆ ಏನು?

ಐಕ್ಯೂ ನಿಯೋ 9 ಪ್ರೊ ಡಿಸ್‌ಪ್ಲೇ ರಚನೆ
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್‌ 6.8 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿರಬಹುದು. ಜೊತೆಗೆ ಡಿಸ್‌ಪ್ಲೇ 388 ಪಿಪಿಐ ಪಿಕ್ಸೆಲ್‌ ಸಾಂದ್ರತೆತನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ HDR10+, 600 ನೀಟ್ಸ್‌ ಹಾಗೂ 144 Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ.

ಐಕ್ಯೂ ನಿಯೋ 9 ಪ್ರೊ ಪ್ರೊಸೆಸರ್‌ ಯಾವುದು?
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 12 GB RAM ಮತ್ತು 256 GB ಇಂಟರ್‌ ಸ್ಟೊರೇಜ್‌ ಆಯ್ಕೆಯಲ್ಲಿ ಬರಬಹುದು ಎನ್ನಲಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡುವ ಸಾಧ್ಯತೆಯಿದೆ.

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಐಕ್ಯೂ ನಿಯೋ 9 ಪ್ರೊ! ಫೀಚರ್ಸ್‌ ನಿರೀಕ್ಷೆ ಏನು?

ಐಕ್ಯೂ ನಿಯೋ 9 ಪ್ರೊ ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎನ್ನಲಾಗಿದೆ.

ಐಕ್ಯೂ ನಿಯೋ 9 ಪ್ರೊ ಬ್ಯಾಟರಿ ಮತ್ತು ಇತರೆ
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 150W ಫ್ಲ್ಯಾಶ್‌ಚಾರ್ಜ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, VoLTE, ಬ್ಲೂಟೂತ್ v5.3, ವೈಫೈ, USB-C v2.0, ಐಆರ್ ಬ್ಲಾಸ್ಟರ್ ಅನ್ನು ಹೊಂದಿರುವ ನಿರೀಕ್ಷೆಯಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌ ಅನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಐಕ್ಯೂ ನಿಯೋ 9 ಪ್ರೊ! ಫೀಚರ್ಸ್‌ ನಿರೀಕ್ಷೆ ಏನು?

ಐಕ್ಯೂ ನಿಯೋ 9 ಪ್ರೊ ಬೆಲೆ ಮತ್ತು ಲಭ್ಯತೆ
ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಮುಂದಿನ ತಿಂಗಳು ಭಾರತದಲ್ಲಿ ಲಾಂಚ್‌ ಆಗುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಇದರ ನಿಖರವಾದ ಬೆಲೆ ವಿವರಗಳು ಬಹಿರಂಗವಾಗಲಿದೆ.

ಇತ್ತೀಚಿಗೆ ಐಕ್ಯೂ ಕಂಪೆನಿ ಭಾರತದಲ್ಲಿ ಹೊಸ ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಾಂಚ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 120W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
iQOO Neo 9 Pro tipped to to feature 50MP Sony IMX920 Main camera: Expected Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+