ಐಕ್ಯೂ ನಿಯೋ ಪ್ರೊ 5G ಫೋನಿನ ಮೇಲೆ ಭರ್ಜರಿ ಡಿಸ್ಕೌಂಟ್: ಕೂಡಲೇ ಖರೀದಿಸಿ
ಟೆಕ್ ವಲಯದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಐಕ್ಯೂ ನಿಯೋ ಪ್ರೊ 5G ಸ್ಮಾರ್ಟ್‌ಫೋನ್ ಇದೀಗ ಡಿಸ್ಕೌಂಟ್‌ನಲ್ಲಿ ಸೇಲ್ ಆಗುತ್ತಿದೆ. ಅಮೆಜಾನ್ ತಾಣದಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿರುವ ಈ ಸ್ಮಾರ್ಟ್‌ಫೋನ್ ಗ್ರಾಹಕರ ಹುಬ್ಬೇರುವಂತೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, iQOO Neo9 Pro 5G ಸ್ಮಾರ್ಟ್‌ಫೋನ್ ಮೇಲೆ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಡಿಸ್ಕೌಂಟ್ ಘೋಷಣೆಯಾಗಿದೆ. ಇದರಿಂದ ಮೊಬೈಲ್ ಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಂತಾಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 5160 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗಾದ್ರೆ iQOO Neo9 Pro 5G ಫೋನ್ ಮೇಲೆ ನೀಡಲಾಗುತ್ತಿರುವ ಡಿಸ್ಕೌಂಟ್ ಎಷ್ಟಿದೆ? ಇದರಿಂದ ಬೆಲೆಯಲ್ಲಿ ಆಗಿರುವ ಬದಲಾವಣೆಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

iQOO Neo9 Pro 5G ಮೇಲಿನ ಡಿಸ್ಕೌಂಟ್ ಎಷ್ಟು?
iQOO Neo9 Pro 5G ಸ್ಮಾರ್ಟ್‌ಫೋನಿನ 8GB RAM ಮತ್ತು 256 GB ಸ್ಟೋರೇಜ್ ಆಯ್ಕೆಯ ಮೇಲೆ ಅಮೆಜಾನ್‌ನಲ್ಲಿ ಬರೋಬ್ಬರಿ 12% ಡಿಸ್ಕೌಂಟ್ ದೊರೆಯುತ್ತಿದೆ. ಇದರಿಂದ 41,999 ರೂ ಬೆಲೆಗೆ ಪಟ್ಟಿ ಮಾಡಲಾಗಿರುವ ಸ್ಮಾರ್ಟ್‌ಫೋನ್ ಅನ್ನು ನೀವು 36,999ರೂ ಬೆಲೆಗೆ ಖರೀದಿಸಬಹುದಾಗಿದೆ. ಇದಲ್ಲದೆ ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಹೆಚ್ಚುವರಿ 2000ರೂ ರಿಯಾಯಿತಿ ಕೂಡ ಸಿಗಲಿದೆ. ಜೊತೆಗೆ 2,065ರೂ ಪ್ರಾರಂಭವಾಗುವ EMI ಆಯ್ಕೆಯನ್ನು ಸಹ ನೀಡಲಾಗಿದೆ.
iQOO Neo9 Pro 5G ಫೀಚರ್ಸ್ ಹೇಗಿದೆ?
iQOO Neo9 Pro 5G ಸ್ಮಾರ್ಟ್‌ಫೋನ್ 6.78 ಇಂಚಿನ LTPO AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇ 1260 x 2800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಈ ಡಿಸ್‌ಪ್ಲೇಯು 1400 ನಿಟ್ಸ್ ಬ್ರೈಟ್‌ನೆಸ್ ಲೆವೆಲ್ ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 144 Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡಲಿದೆ.
iQOO Neo9 Pro 5G ಪ್ರೊಸೆಸರ್ ಯಾವುದು?
iQOO Neo9 Pro 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಹಾಗೂ 12 GB RAM ಮತ್ತು 256 GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸುವ ಆಯ್ಕೆ ಕೂಡ ನೀಡಲಾಗಿದೆ.
iQOO Neo9 Pro 5G ಕ್ಯಾಮೆರಾ ಸೆಟಪ್ ಹೇಗಿದೆ?
iQOO Neo9 Pro 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX920 ಸೆನ್ಸಾರ್ ಸಪೋರ್ಟ್ ಪಡೆದಿದೆ. ಹಾಗೆಯೇ ಇನ್ನು ಸ್ಮಾರ್ಟ್‌ಫೋನ್ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
iQOO Neo9 Pro 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
iQOO Neo9 Pro 5G ಸ್ಮಾರ್ಟ್‌ಫೋನ್ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 120W FlashCharge ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.


Click it and Unblock the Notifications








