Home
ಸುದ್ದಿಜಾಲ

iQOO ಸಂಸ್ಥೆಯ ಈ ಸ್ಟೈಲಿಶ್‌ ಫೋನಿಗೆ ಭಾರೀ ಡಿಸ್ಕೌಂಟ್‌; ಈ ಆಫರ್‌ ಬಿಡಬೇಡಿ!

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಪ್ಲಾಟ್‌ಫಾರ್ಮ್‌ ಒಂದಿಲ್ಲೊಂದು ಸ್ಪೆಷಲ್‌ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡುತ್ತದೆ. ಇದೀಗ ಅಮೆಜಾನ್‌ ಐಕ್ಯೂ ಕ್ವೆಸ್ಟ್‌ ಡೇಸ್‌ (iQOO QUEST DAYS) ಆಯೋಜಿಸಿದ್ದು, ಈ ಮಾರಾಟದಲ್ಲಿ ಐಕ್ಯೂ ಸಂಸ್ಥೆಯ ಆಯ್ದ ಫೋನ್‌ಗಳು ಬೊಂಬಾಟ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಐಕ್ಯೂ ನಿಯೋ 9 ಪ್ರೊ ಫೋನ್‌ ಭರ್ಜರಿ ಇಳಿಕೆಯ ದರದಲ್ಲಿ ಲಭ್ಯ ಇದೆ.

ಹೌದು, ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಇದೀಗ ಐಕ್ಯೂ ಕ್ವೆಸ್ಟ್‌ ಡೇಸ್‌ ಸೇಲ್‌ ಚಾಲ್ತಿ ಇದ್ದು, ಈ ಮೇಳವು ಇದೇ ಜೂನ್ 10 ರ ವರೆಗೂ ಮುಂದುವರಿಯಲಿದೆ. ಈ ಮಾರಾಟದಲ್ಲಿ ಐಕ್ಯೂ ಕಂಪನಿಯ ಐಕ್ಯೂ ನಿಯೋ 9 ಪ್ರೊ ಮೊಬೈಲ್‌ 32,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಆಯ್ದ ಬ್ಯಾಂಕ್‌ ಕಾರ್ಡ್ ಕೊಡುಗೆ ಹಾಗೂ ಎಕ್ಸ್‌ಚೇಂಜ್ ರಿಯಾಯಿತಿ ಸಹ ಲಭ್ಯ ಇದೆ.

iQOO ಸಂಸ್ಥೆಯ ಈ ಸ್ಟೈಲಿಶ್‌ ಫೋನಿಗೆ ಭಾರೀ ಡಿಸ್ಕೌಂಟ್‌; ಈ ಆಫರ್‌ ಬಿಡಬೇಡಿ!

ಅಂದಹಾಗೆ ಈ ಫೋನ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಅನ್ನು ಪಡೆದಿದ್ದು, ಅಲ್ಲದೇ 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಇದು 8 GB RAM ಮತ್ತು 256 GB ಹಾಗೂ 12 GB RAM ಮತ್ತು 256 GB ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೇ ಐಕ್ಯೂ ನಿಯೋ 9 ಪ್ರೊ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ ನಿಯೋ 9 ಪ್ರೊ - ಫೀಚರ್ಸ್

ಐಕ್ಯೂ ನಿಯೋ 9 ಪ್ರೊ ಮೊಬೈಲ್‌ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಇದು 1260 x 2800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಡಿಸ್‌ಪ್ಲೇ 453 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದಿದ್ದು, ಇದಲ್ಲದೆ ಡಿಸ್‌ಪ್ಲೇಯು 1400 ನಿಟ್ಸ್‌ ಬ್ರೈಟ್‌ನೆಸ್‌ ಲೆವೆಲ್‌ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ ಡಿಸ್‌ಪ್ಲೇಯು 144 Hz ರಿಫ್ರೆಶ್ ರೇಟ್‌ ಸಪೋರ್ಟ್‌ ಮಾಡಲಿದೆ.

ಐಕ್ಯೂ ನಿಯೋ 9 ಪ್ರೊ ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 8 GB RAM ಮತ್ತು 256 GB ಹಾಗೂ 12 GB RAM ಮತ್ತು 256 GB ಸ್ಟೋರೇಜ್ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯ. ಇದಲ್ಲದೆ ಮೆಮೊರಿ ಕಾರ್ಡ್‌ ಸಪೋರ್ಟ್‌ ಜೊತೆಗೆ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸುವ ಆಯ್ಕೆ ಲಭ್ಯ.

ಐಕ್ಯೂ ನಿಯೋ 9 ಪ್ರೊ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX920 ಸೆನ್ಸಾರ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಇನ್ನು ಮೊಬೈಲ್‌ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಐಕ್ಯೂ ನಿಯೋ 9 ಪ್ರೊ ಮೊಬೈಲ್‌ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 120W FlashCharge ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

Best Mobiles in India

English summary
iQOO Quest Days sale: Huge Discount on iQOO Neo 9 Pro 5G. Check offer price, specifications and more info.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+