ಐಕ್ಯೂ Z1 5G ಸ್ಮಾರ್ಟ್‌ಫೋನ್ ಬಿಡುಗಡೆ!..ಆತ್ಯಾಕರ್ಷಕ ಫೀಚರ್ಸ್!
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ವಿವೋ ಕಂಪೆನಿಯ ಸಬ್ ಬ್ರಾಂಡ್ ಐಕ್ಯೂ ತನ್ನ ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಈಗಾಗಲೇ ಹಲವು ವಿಭಿನ್ನ ಸ್ಮಾರ್ಟ್‌ಫೋನ್‌ಗಲ ಮೂಲಕ ಸಂಚಲನ ಸೃಷ್ಟಿಸಿರುವ ಐಕ್ಯೂ ಇದೀಗ ಹೊಸ ಮಾದರಿಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹೊಸ ಮಾದರಿಯ ಮೀಡಿಯಾಟೆಕ್ ಡೈಮೆನ್ಸಿಟಿ 1000+ SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ.

ಹೌದು, ವಿವೋ ಸಬ್ ಬ್ರಾಂಡ್ ಐಕ್ಯೂ ತನ್ನ ಹೊಸ ಐಕ್ಯೂ Z1 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಪಂಚ್ ಹೋಲ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, 144Hz ರಿಫ್ರೆಶ್ ರೇಟ್ ಒಳಗೊಂಡಿರುವ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಬನ್ನಿರಿ.

ಡಿಸ್‌ಪ್ಲೇ
ಐಕ್ಯೂ Z1 ಸ್ಮಾರ್ಟ್‌ಫೊನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಮದಿರುವ 6.57-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಆಗಿದ್ದು, ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇಯು 400 ಪಿಪಿ ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್ 144Hz ವರೆಗಿನ ರಿಫ್ರೆಶ್ ರೇಟ್‌ಅನ್ನು ಒಳಗೊಂಡಿದೆ.

ಪ್ರೊಸೆಸರ್
ಇದಲ್ಲದೆ, ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 1000+ SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ARM ಮಾಲಿ-ಜಿ 77 ಜಿಪಿಯು ಅನ್ನು ಒಳಗೊಂಡಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿದೆ.

ಕ್ಯಾಮೆರಾ ವಿನ್ಯಾಸ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನಿಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಐಕ್ಯೂ Z1 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE , ವೈ-ಫೈ, ಬ್ಲೂಟೂತ್ ವಿ 4.0, ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದರ ಜೊತೆಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್,ಅನ್ನು ಸಹ ಒಳಗೊಂಡಿದೆ. ಇದರ ಜೊತೆಗೆ ಸೈಡ್-ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಐಕ್ಯೂ Z1 5G ಸ್ಮಾರ್ಟ್‌ಫೋನ್ ಬೆಲೆ CNY 2,198 (ಸುಮಾರು ರೂ. 23,400)ಗೆ ನಿಗದಿಪಡಿಸಲಾಗಿದೆ,ಇನ್ನು ಈ ಫೋನ್ ಗ್ಯಾಲಕ್ಸಿ ಸಿಲ್ವರ್ ಮತ್ತು ಸ್ಪೇಸ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸದ್ಯ ಚೀನಾದಲ್ಲಿ ವಿವೋ ಆನ್‌ಲೈನ್ ತಾಣಗಳಲ್ಲಿ ಪ್ರೀ ಬುಕಿಂಗ್‌ಗೆ ಲಭ್ಯವಿದೆ. ಇನ್ನು ಇದರ ಮೊದಲ ಮಾರಾಟವನ್ನು ಜೂನ್ 1 ರಿಂದ ನಿಗದಿಪಡಿಸಲಾಗಿದೆ.


Click it and Unblock the Notifications