Home
ಸುದ್ದಿಜಾಲ

iQOO Z3 ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

ವಿವೋ ಸಂಸ್ಥೆಯ ಸಬ್‌ ಬ್ರಾಂಡ್‌ ಐಕ್ಯೂಒ ಸಂಸ್ಥೆ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಐಕ್ಯೂಒ ಇದೀಗ ಹೊಸ iQOO Z3 ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಇದು ಕೈ ಗೆಟಕುವ ಬೆಲೆಯಲ್ಲಿ ಲಭ್ಯವಾಗಲಿರುವ 5g ಸ್ಮಾರ್ಟ್‌ಫೋನ್‌ ಆಗಿದೆ. ಇನ್ನು ಗೇಮಿಂಗ್ ಅಭಿಮಾನಿಗಳನ್ನು ಗುರಿಯಾಗಿರಿಸಿಕೊಂಡಿರುವ ಈ ಸ್ಮಾರ್ಟ್‌ಫೋನ್ 1205Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿರುವ ಡಿಸ್‌ಪ್ಲೇ ಹೊಂದಿದೆ.

ಸ್ಮಾರ್ಟ್‌ಫೋನ್‌

ಹೌದು, ಐಕ್ಯೂಒ ಸಂಸ್ಥೆ ಹೊಸ iQOO Z3 ಸ್ಮಾರ್ಟ್‌ಫೋನ್‌ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ವರ್ಧಿತ ಗೇಮಿಂಗ್ ಕಾರ್ಯಕ್ಷಮತೆಗೆ ಹೊಂದುವಂತೆ ಮಾಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಐಕ್ಯೂಒ Z3 2408x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌+ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಮತ್ತು 180Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಅನ್ನು ಪಡೆದುಕೊಂಡಿದೆ. ಜೊತೆಗೆ ಇದು 3D ಬಾಗಿದ ಗಾಜಿನ ಹಿಂಭಾಗವನ್ನು ಹೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಇದು ಮಲ್ಟಿ-ಟರ್ಬೊ 5.0 ಮತ್ತು ಈಗಲ್ ಐ ಮೋಡ್ 2.0, 4 ಡಿ ಗೇಮ್ ಕಂಪನ ಮತ್ತು ಗೇಮ್ ಬಾಕ್ಸ್‌ ಕಾರ್ಯವನ್ನು ಒಳಗೊಂಡಿದೆ.

ಕ್ಯಾಮೆರಾ

ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ಮೋಡ್, ಎಐ ಪೋಲಾರ್ ನೈಟ್ ಸೆಲ್ಫಿಗಳು ಮತ್ತು 10x ಡಿಜಿಟಲ್ ಜೂಮ್ ಬೆಂಬಲವನ್ನು ನೀಡುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಐಕ್ಯೂಒ Z3 ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ವೈ-ಫೈ 5GHz, ಬ್ಲೂಟೂತ್ ವಿ 5.1, 3.5mm ಆಡಿಯೊ ಜ್ಯಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್, ಫೇಸ್ ಅನ್ಲಾಕ್, ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು iQOO Z3 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ ಬೆಲೆ ಸಿಎನ್‌ವೈ 1,699 (ಸುಮಾರು 18,800 ರೂ), iQOO Z3 8GB RAM ಮತ್ತು 128GB ಸ್ಟೋರೇಜ್‌ ಅಯ್ಕೆಗೆ CNY 1,799 (ಸುಮಾರು 20,000 ರೂ) ಹಾಗೂ iQOO Z3 8GB RAM ಮತ್ತು 256GB ಸ್ಟೋರೇಜ್‌ ಸಾಮರ್ಥ್ಯದ ಅಯ್ಕೆಗೆ ಸಿಎನ್‌ವೈ 1,999 (ಸುಮಾರು 22,100 ರೂ)ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡೀಪ್ ಸ್ಪೇಸ್ ಬ್ಲ್ಯಾಕ್, ಕ್ಲೌಡ್ ಆಕ್ಸಿಜನ್ ಬ್ಲೂ ಮತ್ತು ನೆಬ್ಯುಲಾ ಗ್ರೇಡಿಯಂಟ್ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
iQOO Z3 with Snapdragon 768G, 120Hz display, 55W fast charging launched.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+