Home
ಸುದ್ದಿಜಾಲ

ನೂತನ ಆವೃತ್ತಿಯಲ್ಲಿ 'iQoo Z5' ಸ್ಮಾರ್ಟ್‌ಫೋನ್‌ ಬಿಡುಗಡೆ!..ಬೆಲೆ ಎಷ್ಟು?

ಮೊಬೈಲ್ ಮಾರುಕಟ್ಟೆಯಲ್ಲಿ ಪ್ರಮುಖ ಸ್ಮಾರ್ಟ್‌ಫೋನ್‌ ಬ್ರಾಂಡ್‌ಗಳಲ್ಲಿ ಐಕ್ಯೂ (iQoo) ಕಂಪೆನಿ ಕೂಡ ಒಂದಾಗಿದೆ. ಐಕ್ಯೂ ಕಂಪೆನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿರುವ ಐಕ್ಯೂ Z5 ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದಿದೆ. ಇದೀಗ ನೂತನ ಆವೃತ್ತಿಯಲ್ಲಿ 'iQoo Z5' ಸ್ಮಾರ್ಟ್‌ಫೋನ್‌ ಬಿಡುಗಡೆ.

ನೂತನ ಆವೃತ್ತಿಯಲ್ಲಿ 'iQoo Z5' ಸ್ಮಾರ್ಟ್‌ಫೋನ್‌ ಬಿಡುಗಡೆ!..ಬೆಲೆ ಎಷ್ಟು?

ಹೌದು, ಐಕ್ಯೂ ಕಂಪೆನಿ ಭಾರತದಲ್ಲಿ ಸೈಬರ್ ಗ್ರೀಡ್ ಬಣ್ಣ ವೇರಿಯಂಟ್‌ ನಲ್ಲಿ (Cyber Grid Colour) 'iQoo Z5' ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಫೋನ್ 8GB RAM + 128GB ಮತ್ತು 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಜೊತೆಗೆ ಈ ಫೋನ್‌ 5,000mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, 44W ಫ್ಲಾಶ್ ಚಾರ್ಜ್ ಬೆಂಬಲಿಸಲಿದೆ. ಇದರೊಂದಿಗೆ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಸಾಮರ್ಥ್ಯ ವನ್ನು ಪಡೆದಿದೆ. ಇನ್ನುಳಿದಂತೆ 'iQoo Z5' ಸ್ಮಾರ್ಟ್‌ಫೋನ್‌ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಐಕ್ಯೂ Z5 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆ ಅನುಪಾತ, ಡಿಸಿಐ-ಪಿ 3 ಕಲರ್ ಹರವು ಮತ್ತು ಹೆಚ್‌ಡಿಆರ್ 10 ಬೆಂಬಲವನ್ನು ಹೊಂದಿದೆ. ಇದು ಟಿಯುವಿ ರೀನ್ಲ್ಯಾಂಡ್ ನಿಂದ ಪ್ರಮಾಣೀಕರಿಸಲ್ಪಟ್ಟಿದೆ.

ನೂತನ ಆವೃತ್ತಿಯಲ್ಲಿ 'iQoo Z5' ಸ್ಮಾರ್ಟ್‌ಫೋನ್‌ ಬಿಡುಗಡೆ!..ಬೆಲೆ ಎಷ್ಟು?

ಪ್ರೊಸೆಸರ್‌ ಪವರ್ ಯಾವುದು?
ಐಕ್ಯೂ Z5 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒರಿಜಿನ್ ಓಎಸ್ 1.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್ ಏನು
ಐಕ್ಯೂ Z5 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡ್ಯುಯಲ್ ವ್ಯೂ ವೀಡಿಯೋ, ಸೂಪರ್ ನೈಟ್ ಮೋಡ್, ಪೋರ್ಟ್ರೇಟ್ ಮೋಡ್ ಅನ್ನು ಹೊಂದಿವೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ನೂತನ ಆವೃತ್ತಿಯಲ್ಲಿ 'iQoo Z5' ಸ್ಮಾರ್ಟ್‌ಫೋನ್‌ ಬಿಡುಗಡೆ!..ಬೆಲೆ ಎಷ್ಟು?

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಐಕ್ಯೂ Z5 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಬ್ಲೂಟೂತ್ v5.2, ಯುಎಸ್‌ಬಿ ಒಟಿಜಿ, ಟ್ರೈ-ಬ್ಯಾಂಡ್ ವೈ-ಫೈ 2.4GHz, 5.1GHz, ಮತ್ತು 5.8GHz ಬ್ಯಾಂಡ್‌ಗಳು, GPS ಮತ್ತು 3.5mm ಆಡಿಯೋ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಐಕ್ಯೂ Z5 ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 128GB ಸ್ಟೋರೇಜ್‌ಗಾಗಿ 23,990ರೂ ಮತ್ತು 12GB RAM + 256GB ಸ್ಟೋರೇಜ್ ಆಯ್ಕೆಗಳಿಗಾಗಿ 26,990ರೂ ಬೆಲೆಯನ್ನು ಹೊಂದಿದೆ. ಇದು ಆರ್ಕ್ಟಿಕ್ ಡಾನ್ ಮತ್ತು ಮಿಸ್ಟಿಕ್ ಸ್ಪೇಸ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಫೋನ್ iQoo.com ಮತ್ತು Amazon.in ನಲ್ಲಿ ಇಂದಿನಿಂದ (ನ.15) ಖರೀದಿಗೆ ಲಭ್ಯವಾಗಲಿದೆ.

ಹಾಗೆಯೇ ಕಳೆದ ಕೆಲವು ತಿಂಗಳ ಹಿಂದೆ ಬಿಡುಗಡೆ ಮಾಡಿದ್ದ iQOO Z3 ಸ್ಮಾರ್ಟ್‌ಫೋನ್‌ ಗ್ರಾಹಕರನ್ನು ಸೆಳೆದಿತ್ತು. ಈ ಫೋನ್ 2408x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌+ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
iQoo Z5 Cyber Grid Colour Variant Launched in India: Price, Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+