ಸ್ಪರ್ಧಾತ್ಮಕ ಬೆಲೆಯೊಂದಿಗೆ ಭಾರತದಲ್ಲಿ ಐಕ್ಯೂ Z6 5G ಫೋನ್ ಲಾಂಚ್!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಐಕ್ಯೂ ಕಂಪೆನಿ ವಿವಿಧ ಮಾದರಿಯ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಐಕ್ಯೂ Z6 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಸೂಪರ್ ನೈಟ್ ಮೋಡ್ ಮತ್ತು ಬೊಕೆ ಮೋಡ್ ಸೇರಿದಂತೆ ಹಲವು ಕ್ಯಾಮೆರಾ ಮೋಡ್‌ಗಳು ಪ್ರಿಲೋಡ್ ಆಗಿವೆ.

ಹೌದು, ಐಕ್ಯೂ ಕಂಪೆನಿ ಭಾರತದಲ್ಲಿ ಹೊಸ ಐಕ್ಯೂ Z6 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು 6.58 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಪಡೆದುಕೊಂಡಿದೆ. ಈ ಫೋನ್ ಕ್ರೋಮ್ಯಾಟಿಕ್ ಬ್ಲೂ ಮತ್ತು ಡೈನಮೋ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಐಕ್ಯೂ Z6 5G ಸ್ಮಾರ್ಟ್‌ಫೋನ್ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಐಕ್ಯೂ Z6 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ 3P9 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಐಕ್ಯೂ Z6 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಐಕ್ಯೂ Z6 5G ಸ್ಮಾರ್ಟ್‌ಫೋನ್ 4GB RAM ಶೇಖರಣಾ ರೂಪಾಂತರದ ಆಯ್ಕೆಗೆ 15,999ರೂ.ಬೆಲೆ ಹೊಂದಿದೆ. ಇನ್ನು ಈ ಫೋನ್ 6GB ಮಾದರಿಗೆ 16,999ರೂ. ಬೆಲೆ ಹೊಂದಿದೆ. ಹಾಗೆಯೇ ಇದರ ಟಾಪ್-ಆಫ್-ಲೈನ್ 8GB ಆಯ್ಕೆಯು 17,999ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ರೋಮ್ಯಾಟಿಕ್ ಬ್ಲೂ ಮತ್ತು ಡೈನಮೋ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಇದು ಮಾರ್ಚ್ 22 ರಿಂದ ಅಮೆಜಾನ್ ಮತ್ತು ಐಕ್ಯೂ ಇಂಡಿಯಾ ಇ-ಸ್ಟೋರ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.

ಲಾಂಚ್ ಆಫರ್
ಐಕ್ಯೂ Z6 5G ಸ್ಮಾರ್ಟ್‌ಫೋನ್ ಅನ್ನು HDFC ಬ್ಯಾಂಕ್ ಕಾರ್ಡ್ ಅಥವಾ EMI ವಹಿವಾಟುಗಳ ಮೂಲಕ ಖರೀದಿಸಿದರೆ 2,000ರೂ. ಕ್ಯಾಶ್‌ಬ್ಯಾಕ್ ಸಿಗಲಿದೆ. ಇದಲ್ಲದೆ ನೋ ಕಾಸ್ಟ್ EMI ಆಯ್ಕೆಗಳು ಮತ್ತು ಎಕ್ಸ್‌ಚೇಂಜ್ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








