Home
ಸುದ್ದಿಜಾಲ

ಬಜೆಟ್‌ ದರದ ಈ ಐಕ್ಯೂ ಫೋನಿಗೆ ಬಿಗ್ ರಿಯಯಾತಿ ಲಭ್ಯ!

ಐಕ್ಯೂ ಮೊಬೈಲ್‌ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಐಕ್ಯೂ Z6 ಲೈಟ್‌ 5G ಮೊಬೈಲ್‌ ಕೂಡಾ ಒಂದಾಗಿದೆ. ಈ ಮೊಬೈಲ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಪಡೆದಿದ್ದು, ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ಪಡೆದುಕೊಂಡಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಐಕ್ಯೂ Z6 ಲೈಟ್‌ 5G ಮೊಬೈಲ್‌ ಶೇ. 35% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿದೆ. ಈ ಫೋನಿನ 6GB RAM + 128GB ವೇರಿಯಂಟ್‌ ಬೆಲೆಯು 19,999ರೂ, ಆಗಿದ್ದು, ಆಫರ್‌ನಲ್ಲಿ ಗ್ರಾಹಕರು 12,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆಗಳು ಸಹ ಲಭ್ಯವಾಗಲಿವೆ.

ಬಜೆಟ್‌ ದರದ ಈ ಐಕ್ಯೂ ಫೋನಿಗೆ ಬಿಗ್ ರಿಯಯಾತಿ ಲಭ್ಯ!

ಅಂದಹಾಗೆ ಈ ಮೊಬೈಲ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 4 ಜೆನ್‌ 1 ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, 18W ವೇಗದ ಚಾರ್ಜಿಂಗ್‌ ಸೌಲಭ್ಯ ಕೂಡಾ ಪಡೆದುಕೊಂಡಿದೆ. ಹಾಗಾದರೆ ಐಕ್ಯೂ Z6 ಲೈಟ್‌ 5G ಫೋನಿನ ಇತರೆ ಫೀಚರ್ಸ್ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ Z6 ಲೈಟ್‌ 5G - ಫೀಚರ್ಸ್‌

ಐಕ್ಯೂ Z6 ಲೈಟ್‌ 5G ಸ್ಮಾರ್ಟ್‌ಫೋನ್ 6.58 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 401 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಐಕ್ಯೂ Z6 ಲೈಟ್‌ 5G ಮೊಬೈಲ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 4 ಜೆನ್‌ 1 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಸಪೋರ್ಟ್‌ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4 GB + 64 GB ಮತ್ತು 6 GB + 128 GB ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಐಕ್ಯೂ Z6 ಲೈಟ್‌ 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಅನ್ನು ಪಡೆದಿದೆ. ಇದರ ಜೊತೆಗೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಬೇಸಿಕ್ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಐಕ್ಯೂ Z6 ಲೈಟ್‌ 5G ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, 5G ನೆಟ್‌ವರ್ಕ್‌ ಅನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೊಮೀಟರ್ ಸೆನ್ಸಾರ್‌ ಅನ್ನು ಪಡೆದಿದೆ.

ಐಕ್ಯೂ Z6 ಲೈಟ್‌ 5G ಮೊಬೈಲ್‌ 4GB + 64GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಇದಲ್ಲದೇ ಈ ಫೋನ್ ಗ್ರೀನ್‌ ಹಾಗೂ ಬ್ಲ್ಯಾಕ್‌ ಕಲರ್ ಆಯ್ಕೆ ಪಡೆದಿದೆ.

Best Mobiles in India

English summary
iQOO Z6 Lite 5G available at discount price on amazon. offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+