ಇಂದು ಐಕ್ಯೂ Z6 ಲೈಟ್ 5G ಫಸ್ಟ್ ಸೇಲ್!..ಕಡಿಮೆ ಬೆಲೆಗೆ 5G ಫೋನ್ ಲಭ್ಯ!
ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ನೂತನ ಐಕ್ಯೂ Z6 ಲೈಟ್ 5G (iQOO Z6 Lite 5G) ಸ್ಮಾರ್ಟ್‌ಫೋನ್ ಇಂದು (ಸೆ. 14) ಭಾರತದಲ್ಲಿ ಮೊದಲ ಮಾರಾಟ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 Gen 1 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಜೊತೆಗೆ 5000mAh ಸಾಮರ್ಥ್ಯದ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ.

ಹೌದು, ಬಜೆಟ್ ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿರುವ ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಇ ಕಾಮರ್ಸ್ ದಿಗ್ಗಜ ಅಮೆಜಾನ್ ಮೂಲಕ ಇಂದು ಫಸ್ಟ್ ಸೇಲ್ ಶುರು ಮಾಡಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB + 64GB ಮತ್ತು 6GB + 128GB ಆಗಿವೆ. ಈ ಫೋನಿನ ಆರಂಭಿಕ ಬೆಲೆಯು 13,999 ರೂ.ಗಳು ಆಗಿದೆ.

ಇನ್ನು ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಈ ಫೋನ್ ಖರೀದಿಸಿದರೆ, 2,500 ರೂ.ಗಳ ಕ್ಯಾಶ್‌ಬ್ಯಾಕ್ ಲಭ್ಯವಾಗಲಿದೆ. ಅಂದಹಾಗೆ ಸೆಪ್ಟೆಂಬರ್ 14 ಮತ್ತು 15 ರಂದು ಮಾತ್ರ ಎಸ್‌ಬಿಐನ ಈ ಕೊಡುಗೆ ಲಭ್ಯವಾಗಲಿದೆ. ಈ ಫೋನ್ ಮಿಸ್ಟರಿ ನೈಟ್ ಹಾಗೂ ಸ್ಟೆಲ್ಲರ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೆ ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ 6.58 ಇಂಚಿನ ಎಲ್‌ಸಿಡಿ ಡಿಸ್ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 401 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್ ಪವರ್ ಯಾವುದು
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 Gen 1 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4 GB + 64 GB ಮತ್ತು 6 GB + 128 GB ಸ್ಟೋರೇಜ್ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಅನ್ನು ಹೊಂದಿದೆ. ಇದರ ಜೊತೆಗೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಬೇಸಿಕ್ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 18W ವೇಗದ ಚಾರ್ಜಿಂಗ್ ಸೌಲಭ್ಯವಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, 5G ನೆಟ್‌ವರ್ಕ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ 4GB + 64GB ಮತ್ತು 6GB + 128GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಆ ಪೈಕಿ 4GB + 64GB ವೇರಿಯಂಟ್ ಫೋನಿನ ಬೆಲೆಯು 13,999 ರೂ. ಆಗಿದೆ. ಅಲ್ಲದೇ 6GB + 128GB ವೇರಿಯಂಟ್ ಫೋನಿನ ಬೆಲೆಯು 15,499 ರೂ. ಆಗಿದೆ. ಇಂದು ಮಧ್ಯಾಹ್ನ 12:15 ಗಂಟೆಗೆ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಗೆ ಲಭ್ಯವಾಗಲಿದೆ. ಎಸ್‌ಬಿಐ ಕ್ರೆಡಿಟ್ ಕಾರ್ಡ್ ಗ್ರಾಹಕರು ಕ್ಯಾಶ್‌ಬ್ಯಾಕ್ ಪಡೆಯಬಹುದು.


Click it and Unblock the Notifications








