128GB ಸ್ಟೋರೇಜ್‌ನ ಈ 5G ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!..ಬಿಗ್ ಬ್ಯಾಟರಿ ಸೌಲಭ್ಯ!
ಅಗ್ಗದ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾಗಿರುವ ಐಕ್ಯೂ Z6 ಲೈಟ್ 5G ಮೊಬೈಲ್ ಈಗ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಕಡಿಮೆ ಬೆಲೆಯಲ್ಲಿ 5G ಫೋನ್ ಖರೀದಿ ಮಾಡಬೇಕು ಎಂದುಕೊಂಡ ಗ್ರಾಹಕರಿಗೆ ಇದು ಆಕರ್ಷಕ ಎನಿಸಲಿದೆ. ಅಂದಹಾಗೆ ಈ ಫೋನ್ 50 ಮೆಗಾಪಿಕ್ಸಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ರಚನೆ ಪಡೆದಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಐಕ್ಯೂ Z6 ಲೈಟ್ 5G ಮೊಬೈಲ್ ಈಗ ಶೇ. 45% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿದೆ. ಈ ಫೋನಿನ 6GB RAM + 128GB ವೇರಿಯಂಟ್ ಆಫರ್‌ನಲ್ಲಿ 10,999ರೂ, ಗಳಿಗೆ ಖರೀದಿಗೆ ಲಭ್ಯ ಇದೆ. ಇದಲ್ಲದೇ ಅಮೆಜಾನ್‌ನಲ್ಲಿ ಲಭ್ಯ ಇರುವ ಇತರೆ ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆಗಳು ಸಹ ಸಿಗಲಿವೆ.

ಇನ್ನು ಈ ಫೋನ್ ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 ಜೆನ್ 1 ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದರೊಂದಿಗೆ 4 GB + 64 GB ಮತ್ತು 6 GB + 128 GB ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಹಾಗಾದರೆ ಐಕ್ಯೂ Z6 ಲೈಟ್ 5G ಫೋನಿನ ಇತರೆ ಫೀಚರ್ಸ್ ಮುಂದೆ ತಿಳಿಯೋಣ ಬನ್ನಿರಿ.
ಐಕ್ಯೂ Z6 ಲೈಟ್ 5G - ಫೀಚರ್ಸ್
ಐಕ್ಯೂ Z6 ಲೈಟ್ 5G ಮೊಬೈಲ್ 6.58 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 401 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಪಡೆದುಕೊಂಡಿದೆ. ಇದರ ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ.

ಐಕ್ಯೂ Z6 ಲೈಟ್ 5G ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 ಜೆನ್ 1 ಪ್ರೊಸೆಸರ್ ಬಲವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಈ ಫೋನ್ 4 GB + 64 GB ಮತ್ತು 6 GB + 128 GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದ್ದು, ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವ ಆಯ್ಕೆ ಇದೆ.
ಐಕ್ಯೂ Z6 ಲೈಟ್ 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಇನ್ನು ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಅನ್ನು ಪಡೆದಿದೆ. ಇದಲ್ಲದೇ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದಿದ್ದು, ಬೇಸಿಕ್ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.
ಐಕ್ಯೂ Z6 ಲೈಟ್ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 18W ಫಾಸ್ಟ್ ಚಾರ್ಜಿಂಗ್ ಆಯ್ಕೆ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, 5G ನೆಟ್‌ವರ್ಕ್ ಅನ್ನು ಸಪೋರ್ಟ್ ಮಾಡುತ್ತರದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್ ಸೆನ್ಸಾರ್ ಅನ್ನು ಸಹ ಪಡೆದಿದೆ.
ಅಂದಹಾಗೆ ಈ ಐಕ್ಯೂ Z6 ಲೈಟ್ 5G ಮೊಬೈಲ್ 4GB + 64GB ಮತ್ತು 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ ಗ್ರೀನ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆ ಪಡೆದಿದೆ.


Click it and Unblock the Notifications








