ಈ ಸ್ಟೈಲಿಶ್ ಫೋನಿಗೆ ಲಭ್ಯವಿರುವ ಹಬ್ಬದ ಆಫರ್ ಬೆಲೆಗೆ ಗ್ರಾಹಕರು ಫಿದಾ!
ಅಮೆಜಾನ್ ಸಂಸ್ಥೆಯು ಆಯೋಜಿಸಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2023 (amazon great indian festival sale 2023) ಈಗ ಚಾಲ್ತಿ ಆಗಿದೆ. ಈ ಮಾರಾಟದಲ್ಲಿ ಬಹುತೇಕ ಎಲ್ಲ ಸಂಸ್ಥೆಗಳ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ಆ ಪೈಕಿ ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಆಫರ್ ಗ್ರಾಹಕರ ಗಮನ ಸೆಳೆದಿದೆ.
ಹೌದು, ಇ ಕಾಮರ್ಸ್ ದೈತ್ಯ ಅಮೆಜಾನ್ ಸಂಸ್ಥೆಯ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2023 ಕೊಡುಗೆಗಳು ಗ್ರಾಹಕರನ್ನು ಆಕರ್ಷಿಸಿವೆ. ಅದರಲ್ಲಿ ಐಕ್ಯೂ Z6 ಲೈಟ್ 5G ಮೊಬೈಲ್ 6GB RAM + 128GB ವೇರಿಯಂಟ್ 12,999ರೂ. ಗಳ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಎಜ್ಸ್‌ಚೇಂಜ್ ಕೊಡುಗೆ, ಆಯ್ದ ಬ್ಯಾಂಕ್ ರಿಯಾಯಿತಿ ಒಳಗೊಂಡಂತೆ ಈ ಮೊಬೈಲ್ ಆಫರ್‌ನಲ್ಲಿ 11,749ರೂ. ಗಳಿಗೆ ಖರೀದಿ ಮಾಡಲು ಅವಕಾಶ ಇದೆ.

ಅಂದಹಾಗೆ ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 ಜೆನ್ 1 ಪ್ರೊಸೆಸರ್ ಪವರ್ ಪಡೆದಿದ್ದು, ಇದರ ಜೊತೆಗೆ 50 ಮೆಗಾ ಪಿಕ್ಸಲ್ ಸೆನ್ಸಾರ್ ಮುಖ್ಯ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಹಾಗೆಯೇ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗಾದರೇ ಐಕ್ಯೂ Z6 ಲೈಟ್ 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ಐಕ್ಯೂ ಸಂಸ್ಥೆಯ ಈ ಸ್ಮಾರ್ಟ್‌ಫೋನ್ 6.58 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 401 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ.
ಪ್ರೊಸೆಸರ್ ಪವರ್ ಹೇಗಿದೆ
ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 ಜೆನ್ 1 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4 GB + 64 GB ಮತ್ತು 6 GB + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.
ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ
ಐಕ್ಯೂ ಕಂಪನಿಯ ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಅನ್ನು ಪಡೆದಿದ್ದು, ಇದರ ಜೊತೆಗೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಕೆಲವು ಬೇಸಿಕ್ ಎಡಿಟಿಂಗ್ ಆಯ್ಕೆಗಳನ್ನು ಹೊಂದಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಆಯ್ಕೆಗಳು
ಐಕ್ಯೂ Z6 ಲೈಟ್ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 18W ವೇಗದ ಚಾರ್ಜಿಂಗ್ ಸೌಲಭ್ಯವಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, 5G ನೆಟ್‌ವರ್ಕ್ ಅನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್ ಸೆನ್ಸಾರ್ ಅನ್ನು ಪಡೆದಿದೆ.


Click it and Unblock the Notifications








