ಬಜೆಟ್ ಬೆಲೆಯಲ್ಲಿ ಫೋನ್ ಖರೀದಿಸಬೇಕೆ?..ಹಾಗಿದ್ರೆ, ಇದು ಭರ್ಜರಿ ಆಫರ್!
ಜನಪ್ರಿಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಕೆಲವು ಫೋನ್‌ಗಳು ಬೊಂಬಾಟ್ ಡಿಸ್ಕೌಂಟ್ ಪಡೆದಿವೆ. ಈ ಪ್ಲಾಟ್‌ಫಾರ್ಮ್ ನಲ್ಲಿ ಐಕ್ಯೂ ಸಂಸ್ಥೆಯ ಐಕ್ಯೂ Z6 ಲೈಟ್ 5G ಮೊಬೈಲ್ ಸಹ ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಖರೀದಿದಾರರ ಗಮನ ಸೆಳೆದಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಐಕ್ಯೂ Z6 ಲೈಟ್ 5G ಮೊಬೈಲ್ ಶೇ. 40% ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 6GB RAM + 128GB ಸ್ಟೋರೇಜ್ ವೇರಿಯಂಟ್‌ನ ಆಫರ್ ದರವು 11,999ರೂ. ಗಳು ಆಗಿದೆ. ಹಾಗೆಯೇ ಖರೀದಿದಾರರು ಲಭ್ಯ ಇರುವ ಎಕ್ಸ್‌ಚೆಂಜ್ ಆಫರ್ ಹಾಗೂ ಇತರೆ ರಿಯಾಯಿತಿ ಪಡೆದುಕೊಂಡರೆ, ಈ ಮೊಬೈಲ್ ಮತ್ತಷ್ಟು ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ.

ಇನ್ನು ಐಕ್ಯೂದ ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 ಜೆನ್ 1 ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಒಳಗೊಂಡಿದೆ. ಇನ್ನುಳಿದಂತೆ ಐಕ್ಯೂ Z6 ಲೈಟ್ 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ
ಐಕ್ಯೂ Z6 ಲೈಟ್ 5G ಮೊಬೈಲ್ 6.58 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 401 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಐಕ್ಯೂ Z6 ಲೈಟ್ 5G ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 ಜೆನ್ 1 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4 GB + 64 GB ಮತ್ತು 6 GB + 128 GB ಸ್ಟೋರೇಜ್ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.
ಡ್ಯುಯಲ್ ಕ್ಯಾಮೆರಾ
ಐಕ್ಯೂ Z6 ಲೈಟ್ 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಅನ್ನು ಹೊಂದಿದೆ. ಇದರ ಜೊತೆಗೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಬೇಸಿಕ್ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.
ಬ್ಯಾಟರಿ ಮತ್ತು ಇತರೆ
ಐಕ್ಯೂ Z6 ಲೈಟ್ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 18W ವೇಗದ ಚಾರ್ಜಿಂಗ್ ಸೌಲಭ್ಯವಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, 5G ನೆಟ್‌ವರ್ಕ್ ಅನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್ ಸೆನ್ಸಾರ್ ಅನ್ನು ಪಡೆದಿದೆ.
ಮೆಮೊರಿ ಮತ್ತು ಕಲರ್ ಆಯ್ಕೆ
ದೇಶಿಯ ಮಾರುಕಟ್ಟೆಯಲ್ಲಿ ಐಕ್ಯೂ Z6 ಲೈಟ್ 5G ಮೊಬೈಲ್ 4GB + 64GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಗ್ರಾಹಕರು ಈ ಫೋನ್ ಅನ್ನು ಗ್ರೀನ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿ ಮಾಡಬಹುದು.


Click it and Unblock the Notifications







