iQOO: ಐಕ್ಯೂ ಬ್ರ್ಯಾಂಡ್‌ನ ಈ ಪೋನ್ ಬೆಲೆಯಲ್ಲಿ 7,000ರೂ ಗಳಷ್ಟು ಕಡಿಮೆ ಆಗಿದೆ!..50MP ಕ್ಯಾಮೆರಾ!
ಭಾರತದ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದ್ದ ಫೋನ್‌ಗಳಲ್ಲಿ ಐಕ್ಯೂ Z6 ಲೈಟ್ 5G ಕೂಡ ಒಂದಾಗಿದೆ. ಇದು ಸ್ನಾಪ್‌ಡ್ರಾಗನ್ 4 Gen 1 ನಲ್ಲಿ ಕಾರ್ಯನಿರ್ವಹಿಸುವ ವಿಶ್ವದ ಮೊದಲ ಫೋನ್ ಎಂಬ ಖ್ಯಾತಿ ಪಡೆದುಕೊಂಡಿತ್ತು. ಇದೇ iqoo ಸ್ಮಾರ್ಟ್‌ಫೋನ್ ಇದೀಗ ಅಮೆಜಾನ್ ತಾಣದಲ್ಲಿ ಭಾರಿ ಆಫರ್‌ನಲ್ಲಿ ಖರೀದಿಗೆ ಲಭ್ಯವಾಗುತ್ತಿದೆ.
ಹೌದು, ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಅಮೆಜಾನ್ ನಲ್ಲಿ ಬಿಗ್ ಡಿಸ್ಕೌಂಟ್ ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆಯಲ್ಲಿ 7,000ರೂ ಗಳಷ್ಟು ಬೆಲೆ ಕಡಿತವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗಾದ್ರೆ ಸ್ಮಾರ್ಟ್‌ಫೋನ್ ಮೇಲೆ ಅಮೆಜಾನ್‌ನಲ್ಲಿ ಲಭ್ಯವಾಗುತ್ತಿರುವ ಡಿಸ್ಕೌಂಟ್ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಕೌಂಟ್ ಏನಿದೆ?
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 19,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಇದು 35% ಡಿಸ್ಕೌಂಟ್ ಪಡೆದುಕೊಂಡಿರುವುದರಿಂದ 12,999ರೂ ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೇಲೆ ವಿವಿಧ ಭ್ಯಾಂಕ್ ಆಫರ್‌ಗಳು ಕೂಡ ದೊರೆಯುತ್ತಿವೆ. ಇದರಿಂದ ಇದರ ಬೆಲೆ ಇನ್ನಷ್ಟು ಪರಿಣಾಮಕಾರಿಯಾಗಿ ಕಡಿಮೆ ಆಗಲಿದೆ. ಈ ಫೋನ್ ಗ್ರೀನ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಲಭ್ಯವಿದೆ.
ಐಕ್ಯೂ Z6 ಲೈಟ್ 5G ಫೀಚರ್ಸ್ ಹೇಗಿದೆ?
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ 6.58 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 401 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ.

ಐಕ್ಯೂ Z6 ಲೈಟ್ 5G ಪ್ರೊಸೆಸರ್ ಪವರ್ ಏನು?
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 ಜೆನ್ 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೇ 4 GB + 64 GB ಮತ್ತು 6 GB + 128 GB ಸ್ಟೋರೇಜ್ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶವಿದೆ.
ಐಕ್ಯೂ Z6 ಲೈಟ್ 5G ಕ್ಯಾಮೆರಾ ಸೆಟ್‌ಅಪ್ ಏನಿದೆ?
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿದೆ. ಇದರ ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಜೊತೆಗೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನ ಸಹ ನೀಡಲಾಗಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬೇಸಿಕ್ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಐಕ್ಯೂ Z6 ಲೈಟ್ 5G ಬ್ಯಾಟರಿ ಮತ್ತು ಇತರೆ
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, 5G ನೆಟ್‌ವರ್ಕ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್ ಸೆನ್ಸಾರ್ ಅನ್ನು ಹೊಂದಿದೆ.


Click it and Unblock the Notifications








