ಭಾರತದಲ್ಲಿ ಐಕ್ಯೂ Z6 ಪ್ರೊ 5G ಮತ್ತು ಐಕ್ಯೂ Z6 4G ಬಿಡುಗಡೆ! ಬೆಲೆ ಎಷ್ಟು?
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಐಕ್ಯೂ ಕಂಪೆನಿಗೆ ವಿಶೇಷ ಸ್ಥಾನವಿದೆ. ಐಕ್ಯೂ ಕಂಪೆನಿ ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಗಮನಸೆಳೆದಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಐಕ್ಯೂ Z ಸರಣಿಯಲ್ಲಿ ಐಕ್ಯೂ Z6 ಪ್ರೊ 5G ಮತ್ತು ಐಕ್ಯೂ Z6 4G ಫೋನ್‌ಗಳನ್ನು ಲಾಂಚ್ ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸಟಪ್ ಅನ್ನು ಹೊಂದಿವೆ. ಅಲ್ಲದೆ ಈ ಫೋನ್‌ಗಳು 6.44-ಇಂಚಿನ ಅಮೋಲೆಡ್ ಡಿಸ್‌ಪ್ಲೇ ಪಡೆದುಕೊಂಡಿವೆ.

ಹೌದು, ಐಕ್ಯೂ ಕಂಪೆನಿ ಭಾರತದಲ್ಲಿ ಐಕ್ಯೂ Z6 ಪ್ರೊ 5G ಮತ್ತು ಐಕ್ಯೂ Z6 4G ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಐಕ್ಯೂ Z6 ಪ್ರೊ 5G ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದೆ. ಆದರೆ ಐಕ್ಯೂ Z6 4G ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಐಕ್ಯೂ Z6 ಪ್ರೊ 5G ಸ್ಮಾರ್ಟ್‌ಫೋನ್
ಐಕ್ಯೂ Z6 ಪ್ರೊ 5G ಸ್ಮಾರ್ಟ್‌ಫೋನ್ 1,080x2,404 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಕೂಡ ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮರಾ ಒಳಗೊಂಡಿದೆ. ಇನ್ನು ಈ ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಐಕ್ಯೂ Z6 4G ಸ್ಮಾರ್ಟ್‌ಫೋನ್
ಐಕ್ಯೂ Z6 4G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್ OS 12 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಬೊಕೆ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್‌ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಐಕ್ಯೂ Z6 ಪ್ರೊ 5G ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ರೂಪಾಂತರಕ್ಕೆ 23,999ರೂ.ಬೆಲೆ ಹೊಂದಿದೆ. ಆದರೆ 8GB + 128GB ರೂಪಾಂತರದ ಬೆಲೆ 24,999ರೂ.ಆಗಿದೆ ಇದರ ಟಾಪ್-ಆಫ್-ಲೈನ್ 12GB + 256GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ 28,999ರೂ.ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್ ಸಮ್ಮರ್ ಸೇಲ್ ಸಮಯದಲ್ಲಿ ಅಮೆಜಾನ್ ಮತ್ತು ಐಕ್ಯೂ ಇಂಡಿಯಾ ಇ-ಸ್ಟೋರ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.
ಇನ್ನು ಐಕ್ಯೂ Z6 4G ಸ್ಮಾರ್ಟ್‌ಫೋನ್ 4GB + 128GB ಮಾದರಿಗೆ 14,499ರೂ. ಬೆಲೆ ಹೊಂದಿದೆ. ಇದರ 6GB + 128GB ರೂಪಾಂತರದ ಆಯ್ಕೆಗೆ 15,999ರೂ. ಬೆಲೆ ಹೊಂದಿದೆ. ಇದರ ಟಾಪ್-ಆಫ್-ಲೈನ್ 8GB + 128GB ಮಾದರಿಯ ಬೆಲೆ 16,999ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್ ಸಮ್ಮರ್ ಸೇಲ್‌ನಲ್ಲಿ ಅಮೆಜಾನ್ ಮತ್ತು ಐಕ್ಯೂ ಇಂಡಿಯಾ ಇ-ಸ್ಟೋರ್ ಮೂಲಕ ಖರೀದಿಗೆ ಲಭ್ಯವಿರುತ್ತದೆ ಎಂದು ಕಂಪನಿ ತಿಳಿಸಿದೆ.


Click it and Unblock the Notifications








