Home
ಸುದ್ದಿಜಾಲ

ಐಕ್ಯೂ Z7 5G ಸ್ಮಾರ್ಟ್‌ಫೋನ್‌ ಎಂಟ್ರಿಗೆ ಮುಹೂರ್ತ ಫಿಕ್ಸ್‌! ಅಬ್ಬರಿಸೋದು ಪಕ್ಕಾ!

ಐಕ್ಯೂ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ತಮ್ಮದೇ ಆದ ಪ್ರಾಬಲ್ಯವನ್ನು ಸಾಧಿಸಿವೆ. ಬಜೆಟ್‌ ಬೆಲೆಯಲ್ಲಿ ಎಂಟ್ರಿ ನೀಡಿದ್ದರೂ ಪ್ರೀಮಿಯಂ ಲುಕ್‌ನಿಂದಾಗಿ ಗಮನಸೆಳೆದಿವೆ. ಸದ್ಯ ಇದೀಗ ಐಕ್ಯೂ ಕಂಪೆನಿ ಹೊಸ ಐಕ್ಯೂ Z7 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್ 21ರಂದು ಭಾರತಕ್ಕೆ ಎಂಟ್ರಿ ನೀಡಲಿದೆ ಎನ್ನಲಾಗಿದೆ.

ಹೌದು, ಐಕ್ಯೂ Z7 5G ಸ್ಮಾರ್ಟ್‌ಫೋನ್‌ ಮಾರ್ಚ್‌ 21ರಂದು ಭಾರತದಲ್ಲಿ ಲಾಂಚ್‌ ಆಗಲಿದೆ ಎಂದು ಐಕ್ಯೂ ಕಂಪೆನಿ ದೃಢಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದು ಚಿಸ್‌ಲೆಡ್‌ ಸೈಡ್‌ ಫ್ರೇಮ್‌ಗಳೊಂದಿಗೆ ಬಾಕ್ಸ್‌ ಡಿಸೈನ್‌ ಅನ್ನು ಒಳಗೊಂಡಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z7 5G ಸ್ಮಾರ್ಟ್‌ಫೋನ್‌ ಎಂಟ್ರಿಗೆ ಮುಹೂರ್ತ ಫಿಕ್ಸ್‌! ಅಬ್ಬರಿಸೋದು ಪಕ್ಕಾ!

ಐಕ್ಯೂ Z7 5G ಡಿಸ್‌ಪ್ಲೇ ವಿನ್ಯಾಸ

ಐಕ್ಯೂ Z7 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿರಬಹುದು. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಐಕ್ಯೂ Z7 5G ಪ್ರೊಸೆಸರ್‌ ಯಾವುದು?

ಐಕ್ಯೂ Z7 5G ಸ್ಮಾರ್ಟ್‌ಫೋನ್‌ ಹೊಸ ಮಾದರಿಯ ಪ್ರೊಸೆಸರ್‌ನಲ್ಲಿ ಬರುವ ಸಾಧ್ಯತೆಯಿದೆ. ಇದು ಡೈಮೆನ್ಸಿಟಿ 920 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ ಎಂದು ನಿರೀಕ್ಷಿಸಲಾಗಿದೆ.

ಐಕ್ಯೂ Z7 5G ಸ್ಮಾರ್ಟ್‌ಫೋನ್‌ ಎಂಟ್ರಿಗೆ ಮುಹೂರ್ತ ಫಿಕ್ಸ್‌! ಅಬ್ಬರಿಸೋದು ಪಕ್ಕಾ!

ಐಕ್ಯೂ Z7 5G ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಐಕ್ಯೂ Z7 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಐಕ್ಯೂ Z7 5G ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿರಬಹುದು?

ಐಕ್ಯೂ Z7 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 44W ವೇಗದ ಚಾರ್ಜಿಂಗ್ ತಂತ್ರಜ್ಞಾನಕ್ಕೆ ಬೆಂಬಲವನ್ನು ನೀಡಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ನೀವು ಕೇವಲ 25 ನಿಮಿಷಗಳಲ್ಲಿ 1 ರಿಂದ 50% ಚಾರ್ಜ್‌ ಮಾಡಬಹುದಾಗಿದೆ ಎಂದು ಐಕ್ಯೂ ಕಂಪೆನಿ ಹೇಳಿಕೊಂಡಿದೆ.

ಐಕ್ಯೂ Z7 5G ಸ್ಮಾರ್ಟ್‌ಫೋನ್‌ ಎಂಟ್ರಿಗೆ ಮುಹೂರ್ತ ಫಿಕ್ಸ್‌! ಅಬ್ಬರಿಸೋದು ಪಕ್ಕಾ!

ಐಕ್ಯೂ Z7 5G ಬೆಲೆ ಮತ್ತು ಲಭ್ಯತೆ

ಐಕ್ಯೂ Z7 5G ಸ್ಮಾರ್ಟ್‌ಫೋನ್‌ ಬೆಲೆ 20,000ರೂ.ಗಿಂತ ಕಡಿಮೆ ಇರಲಿದೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್ ನೀಲಿ ಗ್ರೇಡಿಯಂಟ್ ಫಿನಿಶ್‌ನಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್ 21 ರಂದು ಬಿಡುಗಡೆಯಾಗುವುದರಿಂದ ಇನ್ನುಳಿದ ವಿವರಗಳು ಶೀಘ್ರದಲ್ಲೇ ಬಹಿರಂಗವಾಗುವ ಸಾದ್ಯತೆಯಿದೆ.

ಇದಲ್ಲದೆ ಐಕ್ಯೂ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 120W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
iQOO Z7 will come with a 64-megapixel primary camera with OIS support.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+