ಭಾರತದಲ್ಲಿ ಐಕ್ಯೂ Z7 5G ಸ್ಮಾರ್ಟ್‌ಫೋನ್ ಲಾಂಚ್: ಮಾರುಕಟ್ಟೆಯಲ್ಲಿ ಹೊಸ ಅಲೆ!
ಸ್ಮಾರ್ಟ್‌ಫೋನ್ ತಯಾರಿಕಾ ಸಂಸ್ಥೆಗಳಲ್ಲಿ ಪ್ರಮುಖವಾಗಿರುವ ಐಕ್ಯೂ ಇದೀಗ ಅತ್ಯುತ್ತಮ ಫೀಚರ್ಸ್ ಇರುವ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಮಿಡ್‌ರೇಂಜ್ ಫೋನ್ ಆಗಿದ್ದು, ಆಕರ್ಷಕ ಕ್ಯಾಮೆರಾ ರಚನೆ ಹಾಗೂ ಹಲವು ಸುಧಾರಿತ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.
ಹೌದು, ಐಕ್ಯೂ ಸಂಸ್ಥೆಯು ಬಹುನಿರೀಕ್ಷಿತ ಐಕ್ಯೂ Z7 5G (iQOO Z7 5G ) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಲಾಗಿದ್ದು, ಈ ಫೋನ್ 44W ವೇಗದ ಚಾರ್ಜಿಂಗ್ ಬೆಂಬಲ ಹೊಂದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 920 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗಿದ್ರೆ, ಇದರ ಇನ್ನಿತರೆ ಪ್ರಮುಖ ಫೀಚರ್ಸ್ ಹಾಗೂ ಭಾರತದಲ್ಲಿ ಇದರ ಬೆಲೆ ಎಷ್ಟು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಐಕ್ಯೂ Z7 5G ಡಿಸ್‌ಪ್ಲೇ ವಿವರ: ಈ ಹೊಸ ಸ್ಮಾರ್ಟ್‌ಫೋನ್ 6.28 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, ಇದು 90hz ಸ್ಕ್ರೀನ್ ರಿಫ್ರೆಶ್ ರೇಟ್ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನೂ ಸಹ ಹೊಂದಿದ್ದು, ಸೆಲ್ಫಿ ಕ್ಯಾಮೆರಾ ಉದ್ದೇಶಕ್ಕಾಗಿ ಈ ನಾಚ್ ಅನ್ನು ಪಡೆದುಕೊಂಡಿದೆ.
ಐಕ್ಯೂ Z7 5G ಪ್ರೊಸೆಸರ್ ಮಾಹಿತಿ : ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಿಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ ಓಎಸ್13 ನಲ್ಲಿ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ನಲ್ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಹೆಚ್ಚುವರಿ ಸ್ಟೋರೇಜ್‌ಗಾಗಿ ಮೈಕ್ರೋ ಎಸ್‌ಡಿ ಕಾರ್ಡ್ ಸ್ಲಾಟ್ ನೀಡಲಾಗಿದೆ.

ಐಕ್ಯೂ Z7 5G ಕ್ಯಾಮೆರಾ ರಚನೆ: ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ OIS ಬೆಂಬಲದ 64 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹಾಗೂ 2 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ಸೆನ್ಸರ್ ಹೊಂದಿದೆ. ಇನ್ನುಳಿದಂತೆ ಸೆಲ್ಫಿ ಫೋಟೊ ಹಾಗೂ ವಿಡಿಯೋ ಉದ್ದೇಶಕ್ಕೆ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
ಐಕ್ಯೂ Z7 5G ಬ್ಯಾಟರಿ: ಈ ಐಕ್ಯೂ Z7 5G ಫೋನ್ 4500mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಹೊಂದಿದ್ದು, ಇದು 44W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಚಾರ್ಜಿಂಗ್ ಉದ್ದೇಶಕ್ಕೆ ಈ ಫೋನ್ ಯುಎಸ್‌ಬಿ ಟೈಪ್ - ಸಿ ಪೋರ್ಟ್ ಆಯ್ಕೆ ಹೊಂದಿದೆ.
ಐಕ್ಯೂ Z7 5G ಬೆಲೆ ಹಾಗೂ ಲಭ್ಯತೆ: ಈ ಫೋನ್ ವಿವಿಧ ವೇರಿಯಂಟ್‌ನಲ್ಲಿ ಕಂಡುಬರುತ್ತಿದ್ದು, 6GB RAM ಮತ್ತು 128GB ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯದ ಫೋನ್‌ಗೆ 18,999 ರೂ. ಗಳ ಬೆಲೆ ನಿಗದಿ ಮಾಡಲಾಗಿದ್ದು, 8GB RAM ಮತ್ತು 128GB ಸ್ಟೋರೇಜ್ ಆಯ್ಕೆ ಹೊಂದಿರುವ ಫೋನ್‌ಗೆ 19,999ರೂ. ಗಳ ಬೆಲೆ ನಿಗದಿ ಮಾಡಲಾಗಿದೆ. ಅದಾಗ್ಯೂ ನೀವು ಸಾಮಾನ್ಯ ವೇರಿಯಂಟ್ ಫೋನ್ ಅನ್ನು ಪರಿಚಯಾತ್ಮಕ ಬೆಲೆಯಾಗಿ 17,499ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಈ ಫೋನ್ ಡ್ಯುಯಲ್ ಟೋನ್ ವಿನ್ಯಾಸದೊಂದಿಗೆ ಕಾಣಿಸಿಕೊಂಡಿದ್ದು, ಪೆಸಿಫಿಕ್ ನೈಟ್ ಮತ್ತು ನಾರ್ವೆ ಬ್ಲೂ ಬಣ್ಣವನ್ನು ಹೊಂದಿದೆ. ಇನ್ನುಳಿದಂತೆ ಇದನ್ನು ಐಕ್ಯೂನ ಅಧಿಕೃತ ವೆಬ್‌ಸೈಟ್ ಹಾಗೂ ಪ್ರಮುಖ ಇ - ಕಾಮರ್ಸ್ ಸೈಟ್ ಮೂಲಕ ಖರೀದಿ ಮಾಡಬಹುದಾಗಿದೆ. ಜೊತೆಗೆ ಹೆಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್ ಬಳಕೆ ಮಾಡಿಕೊಂಡು ಖರೀದಿ ಮಾಡಿದರೆ 1,500 ರೂ. ಗಳ ತ್ವರಿತ ರಿಯಾಯಿತಿ ಸಹ ಸಿಗಲಿದೆ.


Click it and Unblock the Notifications








