ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಐಕ್ಯೂ Z7 ಪ್ರೊ 5G; ಇದರ ಪ್ರೊಸೆಸರ್ ಬಲವೇನು ಗೊತ್ತಾ?
ಐಕ್ಯೂ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಕ್ರೇಜ್ ಇದೆ. ಅದಕ್ಕೆ ಅನುಗುಣವಾಗಿ ಹೊಸ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ನಡೆಯುತ್ತಲೇ ಇದೆ. ಇದೀಗ ತನ್ನ ಹೊಸ ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ತಿಂಗಳ ಎರಡನೇ ವಾರದಲ್ಲಿ ಬಿಡುಗಡೆ ಆಗಲಿದೆ ಎನ್ನುವ ಸುದ್ದಿ ಇದೀಗ ಬಹಿರಂಗವಾಗಿದೆ.
ಹೌದು, ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಬಗ್ಗೆ ಸಾಕಷ್ಟು ಕುತೂಹಲ ಗರಿಗೆದರಿದೆ. ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸುವ ಸೂಚನೆ ನೀಡಿದ್ದು, ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು? ಇದರ ಫೀಚರ್ಸ್ ಹೇಗಿರಲಿದೆ? ಇದರ ಬಗ್ಗೆ ಏನೆಲ್ಲಾ ನಿರೀಕ್ಷೆ ಇಡಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z7 ಪ್ರೊ 5G ವಿಶೇಷತೆ ಏನಿರಬಹುದು?
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ 6.78 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತದಲ್ಲಿ ಬರಲಿದ್ದು, 388 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇದು ಬೆಜೆಲ್ ಲೆಸ್ ಡಿಸ್‌ಪ್ಲೇ ಎಂದು ಹೇಳಲಾಗಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟಟ್ ಬೆಂಬಲಿಸಲಿದೆ.
ಐಕ್ಯೂ Z7 ಪ್ರೊ 5G ಪ್ರೊಸೆಸರ್ ಸಾಮರ್ಥ್ಯ ಎಷ್ಟಿದೆ?
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲಿಸುವ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.
ಐಕ್ಯೂ Z7 ಪ್ರೊ 5G ಕ್ಯಾಮೆರಾ ಸೆಟ್‌ಅಪ್ ಏನಿರಬಹುದು?
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿ ಬರಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿ ಇರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರುವ ನಿರೀಕ್ಷೆ ಇಡಲಾಗಿದೆ.
ಐಕ್ಯೂ Z7 ಪ್ರೊ 5G ಬ್ಯಾಟರಿ ಬ್ಯಾಕ್‌ಅಪ್
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್ ಅನ್ನು ಹೊಂದಿರಲಿದೆ.
ಐಕ್ಯೂ Z7 ಪ್ರೊ 5G ಬೆಲೆ ಮತ್ತು ಲಭ್ಯತೆ
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಭಾರತದಲ್ಲಿ 25,000 ಮತ್ತು 30000ರೂ. ಬೆಲೆ ಶ್ರೇಣಿಯ ನಡುವೆ ಇರಲಿದೆ ಎಂದು ವರದಿಯಾಗಿದೆ.
ಇನ್ನು ಐಕ್ಯೂ ಕಂಪೆನಿ ಕಳೆದ ತಿಂಗಳಷ್ಟೇ ಹೊಸ ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








