Home
ಸುದ್ದಿಜಾಲ

ಕರ್ವ್‌ ಡಿಸ್‌ಪ್ಲೇ ಇರುವ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!..64ಎಂಪಿ ಕ್ಯಾಮೆರಾ ಇದೆ!

ಮೊಬೈಲ್‌ ಮಾರುಕಟ್ಟೆಯಲ್ಲಿ ಐಕ್ಯೂ ಸಂಸ್ಥೆಯು ಈಗಾಗಲೇ ತನ್ನದೇ ಸ್ಥಾನ ಖಚಿತಪಡಿಸಿಕೊಂಡಿದೆ. ಕಂಪನಿಯ ಬಹುತೇಕ ಫೋನ್‌ಗಳು ಗ್ರಾಹಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ಆ ಪೈಕಿ ಐಕ್ಯೂ Z7 ಪ್ರೊ 5G ಮೊಬೈಲ್‌ ಸಹ ಒಂದಾಗಿದ್ದು, ಈ ಫೋನ್‌ ಇದೀಗ ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ಭಾರೀ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಅಮೆಜಾನ್‌ ತಾಣದಲ್ಲಿ ಐಕ್ಯೂ Z7 ಪ್ರೊ 5G ಮೊಬೈಲ್‌ ಬೆಲೆಯಲ್ಲಿ ಈಗ ಶೇ. 11% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಈಗ 24,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಇದು ಅಲ್ಲದೇ ಅಮೆಜಾನ್‌ ಇ ಕಾಮರ್ಸ್‌ನಲ್ಲಿ ಲಭ್ಯ ಇರುವ ಇತರೆ ಬ್ಯಾಂಕ್‌ ಕೊಡುಗೆ, ಇಎಮ್‌ಐ ಸೌಲಭ್ಯಗಳನ್ನು ಪಡೆದುಕೊಂಡರೆ ಇನ್ನಷ್ಟು ಡಿಸ್ಕೌಂಟ್‌ ಸಿಗಲಿದೆ.

ಕರ್ವ್‌ ಡಿಸ್‌ಪ್ಲೇ ಇರುವ ಈ ಫೋನ್‌ ಬೆಲೆಯಲ್ಲಿ ಇಳಿಕೆ!..64ಎಂಪಿ ಕ್ಯಾಮೆರಾ ಇದೆ!

ಅಂದಹಾಗೆ ಐಕ್ಯೂ ಸಂಸ್ಥೆಯ ಈ 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ಪಡೆದುಕೊಂಡಿದೆ. ಅಲ್ಲದೇ ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಪಡೆದುಕೊಂಡಿದೆ. ಹಾಗಾದರೇ ಐಕ್ಯೂ Z7 ಪ್ರೊ 5G ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಐಕ್ಯೂ Z7 ಪ್ರೊ 5G ಫೋನ್‌ - ಫೀಚರ್ಸ್‌

ಐಕ್ಯೂ Z7 ಪ್ರೊ 5G ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ದಲ್ಲಿ ಇದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್‌ ಸ್ಯಾಂಪಲಿಂಗ್‌ ರೇಟ್‌ ಆಯ್ಕೆ ಪಡೆದುಕೊಂಡಿದೆ. ಜೊತೆಗೆ 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ಒದಗಿಸಲಾಗಿದೆ.

ಕರ್ವ್‌ ಡಿಸ್‌ಪ್ಲೇ ಇರುವ ಈ ಫೋನ್‌ ಬೆಲೆಯಲ್ಲಿ ಇಳಿಕೆ!..64ಎಂಪಿ ಕ್ಯಾಮೆರಾ ಇದೆ!

ಹಾಗೆಯೇ ಐಕ್ಯೂ Z7 ಪ್ರೊ 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್‌ ಪವರ್‌ ಸಾಮರ್ಥ್ಯದಲ್ಲಿ ಕಾರ್ಯ ಮಾಡಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಐಕ್ಯೂ Z7 ಪ್ರೊ 5G ಮೊಬೈಲ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸರ್‌ ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಪಡೆದಿದೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಫ್ಲಾಶ್, ಪನೋರಮಾ, HDR ಅನ್ನು ಪಡೆದುಕೊಂಡಿದೆ.

ಅಲ್ಲದೇ ಈ ಐಕ್ಯೂ Z7 ಪ್ರೊ 5G ಮೊಬೈಲ್‌ 4,600mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 66W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈಫೈ, ಬ್ಲೂಟೂತ್ 5.3, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, USB ಟೈಪ್-C 2.0, OTG ಆಯ್ಕೆಗಳನ್ನು ಒಳಗೊಂಡಿದೆ.

ಇದಲ್ಲದೆ ಐಕ್ಯೂ Z7 ಪ್ರೊ 5G ಮೊಬೈಲ್‌ ಅಂಡರ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ ಅಕ್ಸೆಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಕಂಪಾಸ್‌ ಸೌಲಭ್ಯಗಳನ್ನು ಕೂಡಾ ಹೊಂದಿದೆ.

Best Mobiles in India

English summary
iQOO Z7 Pro 5G Received big price cut in India. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+