ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಮೇಲೆ ಅಮೆಜಾನ್‌ನಲ್ಲಿ ಬಿಗ್ ಆಫರ್!
ಅಮೆಜಾನ್ ತಾಣದಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಡಿಸ್ಕೌಂಟ್ ನೀಡುವುದು ಹೊಸತೇನಲ್ಲ. ಆದರೆ ಇತ್ತೀಚಿಗೆ ಬಿಡುಗಡೆ ಆಗಿರುವ ಸ್ಮಾರ್ಟ್‌ಫೋನ್‌ಗಳ ಮೇಲೂ ಡಿಸ್ಕೌಂಟ್ ನೀಡುತ್ತಿರುವುದು ಅಚ್ಚರಿ ಮೂಡಿಸಿದೆ. ಕೆಲದಿನಗಳ ಹಿಂದೆ ಎಂಟ್ರಿ ನೀಡುವ ಮೂಲಕ ಸಂಚಲನ ಮೂಡಿಸಿದ್ದ ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಭಾರಿ ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ಟೆಕ್ ವಲಯದಲ್ಲಿ ಸದ್ದು ಮಾಡುತ್ತಿರುವ ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್‌ಗೆ (IQOO Z7 Pro 5G) ಅಮೆಜಾನ್‌ನಲ್ಲಿ ರಿಯಾಯಿತಿ ನೀಡಲಾಗಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಗಮನಾರ್ಹ ಬೆಲೆ ಇಳಿಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಐಕ್ಯೂ Z7 ಪ್ರೊ 5G ಮೇಲೆ ನೀಡಲಾಗ್ತಿರುವ ಡಿಸ್ಕೌಂಟ್ ಎಷ್ಟು? ಇದರ ಫೀಚರ್ಸ್ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಕೌಂಟ್ ನಂತರದ ಬೆಲೆ ಎಷ್ಟು?
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ 26,999ರೂ. ಬೆಲೆಗೆ ಪಟ್ಟಿ ಮಾಡಲಾಗಿದೆ. ಪ್ರಸ್ತುತ ಅಮೆಜಾನ್ ಈ ಸ್ಮಾರ್ಟ್‌ಫೋನ್ 11% ಡಿಸ್ಕೌಂಟ್ ಪಡೆದುಕೊಂಡಿರುವುದರಿಂದ ಇದನ್ನು ನೀವು ಕೇವಲ 23,999ರೂ ಬೆಲೆಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಬ್ಯಾಂಕ್ ಆಫರ್ ಹಾಗೂ ಎಕ್ಸ್‌ಚೇಂಜ್ ಆಫರ್ ಕೂಡ ಲಭ್ಯವಾಗುತ್ತಿದ್ದು, ಈ ಫೋನ್ ಬೆಲೆಯಲ್ಲಿ ಇನ್ನಷ್ಟು ಇಳಿಕೆಯನ್ನು ಕಾಣಬಹುದಾಗಿದೆ.
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, 120Hz ರಿಫ್ರೆಶ್ ರೇಟ್ ಮತ್ತು 300Hz ಟಚ್ ಸ್ಯಾಂಪಲಿಂಗ್ ರೇಟ್ ಆಯ್ಕೆ ಪಡೆದುಕೊಂಡಿದೆ. ಜೊತೆಗೆ 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಾಗಿದೆ.

ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಪ್ರೊಸೆಸರ್
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಕ್ಯಾಮೆರಾ
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಫ್ಲಾಶ್, ಪನೋರಮಾ, HDR ಅನ್ನು ಒಳಗೊಂಡಿದೆ.

ಐಕ್ಯೂ Z7 ಪ್ರೊ 5G ಬ್ಯಾಟರಿ ಮತ್ತು ಇತರೆ
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ 4,600mAh ಸಾಮರ್ಥ್ಯವನ್ನು ಹೊಂದಿದೆ. ಇದು 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್ 5.3, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, USB ಟೈಪ್-C 2.0, OTG ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ ಅಕ್ಸೆಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಕಂಪಾಸ್ ಅನ್ನು ಹೊಂದಿದೆ.


Click it and Unblock the Notifications








