ಇಂದು ಈ ಸ್ಟೈಲಿಶ್ ಫೋನಿನ ಫಸ್ಟ್ ಸೇಲ್!..ಗ್ರಾಹಕರಿಗೆ ಭರ್ಜರಿ ಆಫರ್ ಇದೆ!
ಇತ್ತೀಚಿಗಷ್ಟೆ ಭಾರತದಲ್ಲಿ ಬಿಡುಗಡೆ ಆಗಿರುವ ನೂತನ ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಇಂದು (ಸೆ. 05) ಭಾರತದಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ. ಈ ಫೋನ್ ತನ್ನ ವರ್ಗದಲ್ಲೇ ಹಗುರವಾಗದ ಹಾಗೂ ತೆಳುವಾದ ಜೊತೆಗೆ ಸ್ಟೈಲಿಶ್ ಲುಕ್ ಪಡೆದಿದೆ. ಅಲ್ಲದೇ ಇದು ಮೀಡಿಯಾಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ.
ಹೌದು, ಅಮೆಜಾನ್ ತಾಣದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಐಕ್ಯೂ Z7 ಪ್ರೊ 5G (iQOO Z7 Pro) ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಪ್ರಾರಂಭವಾಗಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8GB + 128GB ಮತ್ತು 8GB + 256GB ವೇರಿಯಂಟ್ ಆಗಿವೆ.

ಇನ್ನು ಈ ಎರಡು ವೇರಿಯಂಟ್‌ಗಳಿಗೂ ಬ್ಯಾಂಕ್ ಆಫರ್ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಕೂಡಾ ಸಿಗಲಿದೆ. ಆಫರ್ ನಲ್ಲಿ 8GB + 128GB ಫೋನ್ ಅನ್ನು 21,999ರೂ ಮತ್ತು 8GB + 256GB ಸ್ಟೋರೇಜ್ ಅನ್ನು 22,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಹಾಗಾದರೆ ಐಕ್ಯೂ Z7 ಪ್ರೊ 5G ಫೋನಿನ ಇತರೆ ಆಕರ್ಷಕ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಕ್ಯೂ Z7 ಪ್ರೊ ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ :
ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸೌಲಭ್ಯವನ್ನು ಕೂಡಾ ಹೊಂದಿದೆ. ಹಾಗೆಯೇ ಡಿಸ್‌ಪ್ಲೇ 388 PPI ಪಿಕ್ಸೆಲ್ ಸಾಂದ್ರತೆಯನ್ನು ಪಡೆದುಕೊಂಡಿದ್ದು, 120Hz ರಿಫ್ರೆಶ್ ರೇಟ್ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.
ಐಕ್ಯೂ Z7 ಪ್ರೊ ಪ್ರೊಸೆಸರ್ ಪವರ್ ಯಾವುದು :
ಐಕ್ಯೂ Z7 ಪ್ರೊ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ Funtouch OS 13 ಸಪೋರ್ಟ್ ಕೂಡಾ ಇದೆ. ಅಲ್ಲದೇ ಇದು 8GB RAM + 128GB ಮತ್ತು 8GB RAM + 256GB ಆಂತರೀಕ ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ವರ್ಚುವಲ್ RAM ಸೌಲಭ್ಯ ಕೂಡಾ ಇದೆ.
ಐಕ್ಯೂ Z7 ಪ್ರೊ ಕ್ಯಾಮೆರಾ ರಚನೆ ಮಾಹಿತಿ :
ಐಕ್ಯೂ Z7 ಪ್ರೊ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಸೆಕೆಂಡರಿ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಸೆಲ್ಫಿ ಹಾಗೂ ವೀಡಿಯೊ ಕರೆಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸಹ ಒದಗಿಸಲಾಗಿದೆ.
ಐಕ್ಯೂ Z7 ಪ್ರೊ ಬ್ಯಾಟರಿ ಮತ್ತು ಇತರೆ ಆಯ್ಕೆ :
ಐಕ್ಯೂ Z7 ಪ್ರೊ ಮೊಬೈಲ್ 4,600mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 66W ವೈರ್ಡ್ ಚಾರ್ಜಿಂಗ್ ಸೌಲಭ್ಯ ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್, 5G, ವೈಫೈ 6, ಬ್ಲೂಟೂತ್ 5.3, ಜಿಎನ್‌ಎಸ್‌ಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಯನ್ನು ಪಡೆದುಕೊಂಡಿದೆ. ಇತರೆ ಕೆಲವು ಅಗತ್ಯ ಸೆನ್ಸಾರ್ ಸಪೋರ್ಟ್ ಕೂಡಾ ಪಡೆದಿದೆ.


Click it and Unblock the Notifications








