ಭಾರತದಲ್ಲಿ ಐಕ್ಯೂ Z7 ಪ್ರೊ ಲಾಂಚ್.. ಎಲ್ಲಾ ಮೊಬೈಲ್‌ಗಳಿಗಿಂತ ಭಿನ್ನವಾಗಿದೆ ಯಾಕೆ?
ಮೊಬೈಲ್ ಮಾರುಕಟ್ಟೆಯಲ್ಲಿ ಕೆಲವು ದಿನಗಳಿಂದ ಭಾರಿ ಸಂಚಲನ ಸೃಷ್ಟಿಸಿದ್ದ ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಇದೀಗ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ ಇದುವರೆಗೆ ಬಿಡುಗಡೆ ಆಗಿರುವ ಐಕ್ಯೂ ಬ್ರ್ಯಾಅಂಡ್ ಫೋನ್‌ಗಳಿಗಿಂತ ಸಾಕಷ್ಟು ವಿಭಿನ್ನವಾಗಿದೆ. ಇದು ಹಿಂಭಾಗದಲ್ಲಿ ಐಕಾನಿಕ್ ರಿಂಗ್ ಎಲ್‌ಇಡಿ ಫ್ಲ್ಯಾಷ್ ಅನ್ನು ಹೊಂದಿದೆ.
ಹೌದು, ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಜೊತೆಗೆ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ
ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 388 PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ ಶಾಟ್ ಕ್ಸೆನ್ಸೇಶನ್ ಗ್ಲಾಸ್ ಪ್ರೊಟೆಕ್ಷನ್ ಪಡೆದುಕೊಂಡಿದೆ.
ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ Funtouch OS 13ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಮತ್ತು 8GB RAM + 256GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದರಲ್ಲಿ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಅವಕಾಶವಿಲ್ಲ ಎನ್ನಲಾಗಿದೆ.
ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್
ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ ಫೀಚರ್ಸ್
ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 66W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ವೈಫೈ 6, ಬ್ಲೂಟೂತ್ 5.3, ಜಿಎನ್‌ಎಸ್‌ಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಯನ್ನು ನೀಡಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ, ಕಂಪಾಸ್ ಅನ್ನು ಬೆಂಬಲಿಸಲಿದೆ.
ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ 8GB RAM + 128GB ಸ್ಟೋರೇಜ್ ಆಯ್ಕೆಗೆ 23,999ರೂ ಬೆಲೆಯನ್ನು ಹೊಂದಿದೆ. ಇನ್ನು ಇದರ 8GB RAM+ 256GB ಸ್ಟೋರೇಜ್ ಆಯ್ಕೆಗೆ 24,999ರೂ ಬೆಲೆಯನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಗ್ರ್ಯಾಫೈಟ್ ಮ್ಯಾಟ್ ಅಥವಾ ಬ್ಲೂ ಲಗೂನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಖರೀದಿದಾರರು SBI ಮತ್ತು HDFC ಬ್ಯಾಂಕ್ ಕಾರ್ಡ್‌ಗಳ ಮೂಲಕ ನಡೆಸುವ ವಹಿವಾಟುಗಳಿಗೆ 2,000ರೂ. ತ್ವರಿತ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಅಮೆಜಾನ್ ಇಂಡಿಯಾ ಮತ್ತು iQOO.com ಮೂಲಕ ಸೆಪ್ಟೆಂಬರ್ 5 ರಂದು ಸೇಲ್ ಆಗಲಿದೆ.


Click it and Unblock the Notifications