ಐಕ್ಯೂ Z7i ಸ್ಮಾರ್ಟ್‌ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ? ಪ್ರೊಸೆಸರ್ ಯಾವುದು?
ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳಲ್ಲಿ ಐಕ್ಯೂ ಕಂಪೆನಿ ಕೂಡ ಒಂದಾಗಿದೆ. ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಹೊಸ ಐಕ್ಯೂ Z7i ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ.
ಹೌದು, ಐಕ್ಯೂ Z7i ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z7i ಡಿಸ್‌ಪ್ಲೇ ಹೇಗಿದೆ?
ಐಕ್ಯೂ Z7i ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 88.99 ಸ್ಕ್ರೀನ್-ಟು-ಬಾಡಿ ಅನುಪಾತವನ್ನು ನೀಡಲಿದೆ.
ಐಕ್ಯೂ Z7i ಪ್ರೊಸೆಸರ್ ಯಾವುದು?
ಐಕ್ಯೂ Z7i ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ನಲ್ಲಿ OriginOS ಓಷನ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಐಕ್ಯೂ Z7i ಕ್ಯಾಮೆರಾ ಸೆಟ್‌ಅಪ್ ಏನಿದೆ?
ಐಕ್ಯೂ Z7i ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಐಕ್ಯೂ Z7i ಬ್ಯಾಟರಿ ಯಾವುದು?
ಐಕ್ಯೂ Z7i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 15W ವೇಗದ ಚಾರ್ಜಿಂಗ್ ಬೆಂಬಲಿಸಲಿದ್ದು, 29 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈ-ಫೈ, ಬ್ಲೂಟೂತ್ 5.1, ಜಿಪಿಎಸ್, ಎನ್‌ಎಫ್‌ಸಿ, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಇ-ದಿಕ್ಸೂಚಿ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಸೇರಿದೆ.

ಐಕ್ಯೂ Z7i ಬೆಲೆ ಮತ್ತು ಲಭ್ಯತೆ
ಐಕ್ಯೂ Z7i ಸ್ಮಾರ್ಟ್‌ಫೋನ್ 4GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 949 (ಸುಮಾರು 24,000ರೂ)ಬೆಲೆಯನ್ನು ಹೊಂದಿದೆ. ಇನ್ನು 6GB + 128GB ಕಾನ್ಫಿಗರೇಶನ್ ಆಯ್ಕೆಗೆ CNY 999 (ಸುಮಾರು 11,800ರೂ) ಬೆಲೆ ಪಡೆದಿದೆ. ಈ ಸ್ಮಾರ್ಟ್‌ಫೋನ್ ಐಸ್ ಲೇಕ್ ಬ್ಲೂ ಮತ್ತು ಮೂನ್ ಶ್ಯಾಡೋ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ಇದಲ್ಲದೆ ಐಕ್ಯೂ ಕಂಪೆನಿ ಹೊಸದಾಗಿ ಐಕ್ಯೂ Z7 5G ಸ್ಮಾರ್ಟ್‌ಫೋನ್ ಮಾರ್ಚ್ 21ರಂದು ಭಾರತದಲ್ಲಿ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇದು ಚಿಸ್‌ಲೆಡ್ ಸೈಡ್ ಫ್ರೇಮ್‌ಗಳೊಂದಿಗೆ ಬಾಕ್ಸ್ ಡಿಸೈನ್ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ.


Click it and Unblock the Notifications