ಐಕ್ಯೂ Z7s 5G ಮೊಬೈಲ್‌ಗೆ ಈಗ 38% ನೇರ ಡಿಸ್ಕೌಂಟ್..128GB ಸ್ಟೋರೇಜ್ ಆಯ್ಕೆ!
ಮೊಬೈಲ್ ಮಾರುಕಟ್ಟೆಯಲ್ಲಿ ಐಕ್ಯೂ ಸಂಸ್ಥೆಯು ಕೂಡಾ ಕೆಲವು ಮೊಬೈಲ್‌ಗಳ ಮೂಲಕ ಈಗಾಗಲೇ ಗ್ರಾಹಕರ ಬಳಗ ಹೊಂದಿದೆ. ಸಂಸ್ಥೆಯ ಜನಪ್ರಿಯ ಫೋನ್‌ಗಳ ಪೈಕಿ ಐಕ್ಯೂ Z7s 5G ಮೊಬೈಲ್ ಕೂಡಾ ಸೇರಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಗಮನಾರ್ಹ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಐಕ್ಯೂ Z7s 5G ಫೋನ್ ಶೇ. 38% ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಗ್ರಾಹಕರು ಈ ಸ್ಮಾರ್ಟ್‌ಫೋನ್ 6GB RAM + 128GB ವೇರಿಯಂಟ್ ಫೋನ್ 14,999 ರೂ. ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದಲ್ಲದೇ ಇದರೊಂದಿಗೆ ಬ್ಯಾಂಕ್ ಆಫರ್ ಸಹ ಗ್ರಾಹಕರಿಗೆ ಲಭ್ಯ ಸಿಗಲಿವೆ.

ಐಕ್ಯೂ Z7s 5G ಮೊಬೈಲ್ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಹೊಂದಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಅಲ್ಲದೇ 5,000mAh ಶಕ್ತಿ ಸಾಮರ್ಥ್ಯದ ಬ್ಯಾಟರಿ ಕಾಣಬಹುದಾಗಿದೆ. ಹಾಗಾದರೇ ಟೆಕ್ನೋ ಪಾಪ್ 8 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ.
ಡಿಸ್‌ಪ್ಲೇ ರಚನೆಯ ಮಾಹಿತಿ
ಐಕ್ಯೂ Z7s 5G ಮೊಬೈಲ್ 6.38 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಅನ್ನು ಹೊಂದಿದೆ. ಇದು 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ ಮಾಡುತ್ತದೆ. ಇದರ ಜೊತೆಗೆ ಈ ಸ್ಮಾರ್ಟ್‌ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.

ಪ್ರೊಸೆಸರ್ ಪವರ್ ಯಾವುದು
ಐಕ್ಯೂ Z7s 5G ಮೊಬೈಲ್ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ Funtouch OS 13 ನಲ್ಲಿ ಕೆಲಸ ನಿರ್ವಹಿಸಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಮತ್ತು 8GB RAM ಮತ್ತು 128GB ಆಂತರೀಕ ಸ್ಟೋರೇಜ್ ವೆರಿಯಂಟ್‌ಗಳಲ್ಲಿ ಲಭ್ಯ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ಇದೆ.
ಕ್ಯಾಮೆರಾ ಸೆನ್ಸಾರ್ ಹೇಗಿದೆ
ಐಕ್ಯೂ Z7s 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್ ಎಷ್ಟು
ಐಕ್ಯೂ Z7s 5G ಮೊಬೈಲ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇದು 44W ವೈರ್ಡ್ ಫ್ಲ್ಯಾಶ್ ಚಾರ್ಜಿಂಗ್ ಅನ್ನು ಸಪೋರ್ಟ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C, ಬ್ಲೂಟೂಟ್ v5.1, GPS ಮತ್ತು Wi-Fi 6 ಸಂಪರ್ಕವನ್ನು ಹೊಂದಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಪಡೆದಿದೆ.


Click it and Unblock the Notifications







