ಐಕ್ಯೂ Z7s 5G ಸ್ಮಾರ್ಟ್‌ಫೋನ್‌ಗೆ ಈಗ ಭರ್ಜರಿ ಡಿಸ್ಕೌಂಟ್!..ಆಫರ್ ಬೆಲೆ ಎಷ್ಟು?
ಜನಪ್ರಿಯ ಐಕ್ಯೂ ಮೊಬೈಲ್ ಸಂಸ್ಥೆಯು ಹಲವು ಫೋನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಇತ್ತೀಚಿಗಿನ ಐಕ್ಯೂ Z7s 5G ಫೋನ್ ಆಕರ್ಷಕ ಫೀಚರ್ಸ್‌ಗಳ ಮೂಲಕ ಸದ್ದು ಮಾಡಿದ್ದು, ಇದೀಗ ಈ ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ತಾಣದಲ್ಲಿ ಐಕ್ಯೂ Z7s 5G ಸ್ಮಾರ್ಟ್‌ಫೋನ್ ಜಬರ್ದಸ್ತ್ ರಿಯಾಯಿತಿ ಬೆಲೆಗೆ ಮಾರಾಟವಾಗುತ್ತಿದೆ. ಐಕ್ಯೂ Z7s 5G ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್‌ನ ವೇರಿಯಂಟ್ 23,999ರೂ. ಹೊಂದಿದ್ದು, ಆಫರ್‌ನಲ್ಲಿ 18,999ರೂ. ಗಳಿಗೆ ಲಭ್ಯ. ಇದರೊಂದಿಗೆ ಬ್ಯಾಂಕ್ ಆಫರ್ ಸಹ ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ಐಕ್ಯೂ Z7s 5G ಸ್ಮಾರ್ಟ್‌ಫೋನ್ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ Z7s 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ : ಐಕ್ಯೂ Z7s 5G ಸ್ಮಾರ್ಟ್‌ಫೋನ್ 6.38 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.
ಐಕ್ಯೂ Z7s 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು : ಐಕ್ಯೂ Z7s 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ Funtouch OS 13ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೊರೇಜ್ ಮತ್ತು 8GB RAM ಮತ್ತು 128GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಐಕ್ಯೂ Z7s 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ : ಐಕ್ಯೂ Z7s 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬೊಕೆ ಫ್ಲೇರ್ ಪೋರ್ಟ್ರೇಟ್, ಮೈಕ್ರೋ ಮೂವಿ, ಸೂಪರ್ ನೈಟ್ ಮೋಡ್, ಡಬಲ್ ಎಕ್ಸ್‌ಪೋಸರ್, ಸ್ಲೋ-ಮೋಷನ್ ವೀಡಿಯೊ, ಡ್ಯುಯಲ್-ವ್ಯೂ ವಿಡಿಯೋ ಮೋಡ್ ಅನ್ನು ಒಳಗೊಂಡಿದೆ.
ಐಕ್ಯೂ Z7s 5G ಸ್ಮಾರ್ಟ್‌ಫೋನ್ ಬ್ಯಾಟರಿ ಬ್ಯಾಕ್‌ಅಪ್ : ಐಕ್ಯೂ Z7s 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೈರ್ಡ್ ಫ್ಲ್ಯಾಶ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C, ಬ್ಲೂಟೂತ್ v5.1, GPS ಮತ್ತು Wi-Fi 6 ಸಂಪರ್ಕವನ್ನು ಬೆಂಬಲಿಸಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗೆ IP54 ರೇಟಿಂಗ್ ಅನ್ನು ಹೊಂದಿದೆ.
ಭಾರತದಲ್ಲಿ ಐಕ್ಯೂ Z7s 5G ಸ್ಮಾರ್ಟ್‌ಫೋನ್ ಮೆಮೊರಿ : ಐಕ್ಯೂ Z7s 5G ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್ ಸ್ಟೊರೇಜ್ ಮತ್ತು 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯ. ಇನ್ನು ಸ್ಮಾರ್ಟ್‌ಫೋನ್ ನಾರ್ವೆ ಬ್ಲೂ ಮತ್ತು ಪೆಸಿಫಿಕ್ ನೈಟ್ ಕಲರ್ ಆಯ್ಕೆಗಳಲ್ಲಿ ಬರಲಿದೆ.


Click it and Unblock the Notifications








