ಈ ಸ್ಮಾರ್ಟ್‌ಫೋನ್ ಮೇಲೆ ಸಿಗ್ತಾ ಇದೆ ಭರ್ಜರಿ ಆಫರ್! ಇದಕ್ಕಿಂತ ಡಿಸ್ಕೌಂಟ್ ಬೇಕಾ?
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ಡಿಸ್ಕೌಂಟ್ ದೊರೆಯುತ್ತಿದೆ. ಇದೇ ವೇಳೆ ಬಜೆಟ್ ಸ್ಮಾರ್ಟ್‌ಫೋನ್‌ಗಳ ಮೇಲೆ ಇನ್ನಷ್ಟು ಹೆಚ್ಚಿನ ರಿಯಾಯಿತಿಗಳನ್ನು ನೀಡಲಾಗ್ತಿದೆ. ಇದರಲ್ಲಿ ಐಕ್ಯೂ Z7s 5G ಸ್ಮಾರ್ಟ್‌ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಲಾಗ್ತಿದ್ದು, ಮೊಬೈಲ್ ಖರೀದಿಸುವವರಿಗೆ ಗುಡ್‌ನ್ಯೂಸ್ ನೀಡಿದೆ.
ಹೌದು, ಅಮೆಜಾನ್ ತಾಣದ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಐಕ್ಯೂ Z7s 5G ಫೋನ್ ಶೇ. 33% ರಷ್ಟು ಡಿಸ್ಕೌಂಟ್ ಪಡೆದಿದೆ. ಇದರಿಂದ ಅಮೆಜಾನ್ ತಾಣದಲ್ಲಿ 23,999ರೂ ಬೆಲೆಗೆ ಪಟ್ಟಿ ಮಾಡಲಾಗಿರುವ ಈ ಸ್ಮಾರ್ಟ್‌ಫೋನ್ ಕೇವಲ 15,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಜೊತೆಗೆ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಆಫರ್‌ಗಳು ಕೂಡ ಸೇರಿವೆ.
ಐಕ್ಯೂ Z7s 5G ಸ್ಮಾರ್ಟ್‌ಫೋನ್‌ನ ಮೇಲೆ ಲಭ್ಯವಾಗುತ್ತಿರುವ ರಿಯಾಯಿತಿ 6GB RAM ಮತ್ತು 128GB ಸ್ಟೊರೇಜ್ ವೇರಿಯೆಂಟ್ ಆಯ್ಕೆಗೆ ಸಂಬಂಧಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಐಕ್ಯೂ Z7s 5G ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z7s 5G ಡಿಸ್ಪ್ಲೇ ರಚನೆ ಹಾಗೂ ವಿನ್ಯಾಸ
ಐಕ್ಯೂ Z7s 5G ಸ್ಮಾರ್ಟ್‌ಫೋನ್ 6.38 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸುತ್ತದೆ. ಜೊತೆಗೆ ಸ್ಮಾರ್ಟ್‌ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಪಡೆದಿದೆ.
ಐಕ್ಯೂ Z7s 5G ಪ್ರೊಸೆಸರ್ ಕಾರ್ಯವೈಖರಿ ಏನು?
ಐಕ್ಯೂ Z7s 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ Funtouch OS 13 ನಲ್ಲಿ ಕಾರ್ಯನಿರ್ವಹಿಸಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಮತ್ತು 8GB RAM ಮತ್ತು 128GB ಇಂಟರ್‌ಸ್ಟೋರೇಜ್ ವೆರಿಯಂಟ್‌ಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಐಕ್ಯೂ Z7s 5G ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್
ಐಕ್ಯೂ Z7s 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಐಕ್ಯೂ Z7s 5G ಬ್ಯಾಟರಿ ಬ್ಯಾಕ್‌ಅಪ್
ಐಕ್ಯೂ Z7s 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು 44W ವೈರ್ಡ್ ಫ್ಲ್ಯಾಶ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C, ಬ್ಲೂಟೂಟ್ v5.1, GPS ಮತ್ತು Wi-Fi 6 ಸಂಪರ್ಕವನ್ನು ಹೊಂದಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಅಮೆಜಾನ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್ ಬೆಲೆಯನ್ನು 23,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ 33% ಡಿಸ್ಕೌಂಟ್ ಪಡೆದುಕೊಂಡಿರುವುದರಿಂದ ಇದು ನಿಮಗೆ ಕೇವಲ 15,999ರೂ. ಗಳ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಸ್ಮಾರ್ಟ್‌ಫೋನ್ ನಾರ್ವೆ ಬ್ಲೂ ಮತ್ತು ಪೆಸಿಫಿಕ್ ನೈಟ್ ಕಲರ್ ಆಯ್ಕೆಗಳಲ್ಲಿ ಬರಲಿದೆ.


Click it and Unblock the Notifications








