iQOO: 128GB ಸ್ಟೋರೇಜ್ ಆಯ್ಕೆಯ ಈ ಫೋನ್ ಮೇಲೆ ಬರೋಬ್ಬರಿ 38% ಡಿಸ್ಕೌಂಟ್ ಲಭ್ಯ!
ಮೊಬೈಲ್ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಟ್ರೆಂಡ್ ಕ್ರಿಯೆಟ್ ಮಾಡಿದ್ದ ಐಕ್ಯೂ Z7s 5G ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆಯನ್ನು ಕಂಡಿದೆ. ಅಮೆಜಾನ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್ ಮೇಲೆ ಬರೋಬ್ಬರಿ 38% ಡಿಸ್ಕೌಂಟ್ ನೀಡಲಾಗ್ತಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆ 15,000ರೂ ಗಿಂತ ಕಡಿಮೆ ಆಗಿದೆ. ಇದಲ್ಲದೆ ಎಕ್ಸ್‌ಚೇಂಜ್ ಆಫರ್ ಕೂಡ ದೊರೆಯುತ್ತಿದೆ.
ಹೌದು, ಐಕ್ಯೂ Z7s 5G ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ ಭಾರಿ ಆಫರ್‌ನಲ್ಲಿ ಲಭ್ಯವಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ನ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯ ಮೇಲೆ ಈ ರಿಯಾಯಿತಿ ಅನ್ವಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಐಕ್ಯೂ Z7s 5G ಸ್ಮಾರ್ಟ್‌ಫೋನ್ ಮೇಲಿನ ಡಿಸ್ಕೌಂಟ್ ಎಷ್ಟಿದೆ? ರಿಯಾಯಿತಿ ನಂತರ ಬೆಲೆ ಏನು? ಇದೆಲ್ಲದರ ಕಂಪ್ಲೀಟ್ ಡಿಟೇಲ್ಸ್ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z7s 5G ಡಿಸ್ಕೌಂಟ್ ಏನಿದೆ?
ಅಮೆಜಾನ್ ತಾಣದಲ್ಲಿ ಐಕ್ಯೂ Z7s 5G ಸ್ಮಾರ್ಟ್‌ಫೋನ್‌ನ 6GB RAM ಮತ್ತು 128GB ಆಯ್ಕೆಯನ್ನು 23,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಫೋನ್‌ಗೆ 38% ಡಿಸ್ಕೌಂಟ್ ನೀಡುತ್ತಿರುವುದರಿಂದ ಕೇವಲ 14,999ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಮೇಲೆ ವಿವಿಧ ಬ್ಯಾಂಕ್ ಕಾರ್ಡ್‌ಗಳ ಆಫರ್ ಕೂಡ ಲಭ್ಯವಾಗುತ್ತಿದೆ. ಇದು ಮೊಬೈಲ್ ಮೇಲಿನ ಬೆಲೆಯನ್ನು ಇನ್ನಷ್ಟು ಇಳಿಕೆ ಮಾಡಿದೆ.
ಐಕ್ಯೂ Z7s 5G ಫೀಚರ್ಸ್ ಹೇಗಿದೆ?
ಐಕ್ಯೂ Z7s 5G ಮೊಬೈಲ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.38 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ 84.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು 413 ppi ಪಿಕ್ಸೆಲ್ ಸಾಂದ್ರತೆಯನ್ನು ಬೆಂಬಲಿಸಲಿದೆ.

ಐಕ್ಯೂ Z7s 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ಐಕ್ಯೂ Z7s 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13-ಆಧಾರಿತ Funtouch OS 13ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೊರೇಜ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಅವಕಾಶ ನೀಡಿದೆ.
ಐಕ್ಯೂ Z7s 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ
ಐಕ್ಯೂ Z7s 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬೊಕೆ ಫ್ಲೇರ್ ಪೋರ್ಟ್ರೇಟ್, ಮೈಕ್ರೋ ಮೂವಿ, ಸೂಪರ್ ನೈಟ್ ಮೋಡ್, ಡಬಲ್ ಎಕ್ಸ್‌ಪೋಸರ್, ಸ್ಲೋ-ಮೋಷನ್ ವೀಡಿಯೊದಂತಹ ಆಯ್ಕೆಗಳನ್ನು ಪಡೆದಿದೆ.

ಐಕ್ಯೂ Z7s 5G ಸ್ಮಾರ್ಟ್‌ಫೋನ್ ಬ್ಯಾಟರಿ ಬ್ಯಾಕ್‌ಅಪ್
ಐಕ್ಯೂ Z7s 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 44W ವೈರ್ಡ್ ಫ್ಲ್ಯಾಶ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C, ಬ್ಲೂಟೂತ್ v5.1, GPS ಮತ್ತು Wi-Fi 6 ಸಂಪರ್ಕವನ್ನು ಬೆಂಬಲಿಸಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.


Click it and Unblock the Notifications








