Home
ಸುದ್ದಿಜಾಲ

ಭಾರತದಲ್ಲಿ ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಲಾಂಚ್‌! ಖರೀದಿಗೆ ಕ್ಯೂ ಪಕ್ಕಾ!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಐಕ್ಯೂ ಕಂಪೆನಿ ತನ್ನದೇ ಆದ ಪ್ರಾಬಲ್ಯವನ್ನು ಸಾಧಿಸಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನಸೆಳೆದಿದೆ. ಸದ್ಯ ಇದೀಗ ಹೊಸ ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 44W ಫ್ಲ್ಯಾಶ್ ಚಾರ್ಜ್ ಬೆಂಬಲಿಸಲಿದೆ.

ಹೌದು, ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಲಾಂಚ್‌! ಖರೀದಿಗೆ ಕ್ಯೂ ಪಕ್ಕಾ!

ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ರಚನೆ

ಐಕ್ಯೂ Z7s 5G ಸ್ಮಾರ್ಟ್‌ಫೋನ್‌ 6.38 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿದೆ.

ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?

ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13-ಆಧಾರಿತ Funtouch OS 13ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೊರೇಜ್‌ ಮತ್ತು 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಭಾರತದಲ್ಲಿ ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಲಾಂಚ್‌! ಖರೀದಿಗೆ ಕ್ಯೂ ಪಕ್ಕಾ!

ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌

ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬೊಕೆ ಫ್ಲೇರ್ ಪೋರ್ಟ್ರೇಟ್, ಮೈಕ್ರೋ ಮೂವಿ, ಸೂಪರ್ ನೈಟ್ ಮೋಡ್, ಡಬಲ್ ಎಕ್ಸ್‌ಪೋಸರ್, ಸ್ಲೋ-ಮೋಷನ್ ವೀಡಿಯೊ, ಡ್ಯುಯಲ್-ವ್ಯೂ ವಿಡಿಯೋ ಮೋಡ್ ಅನ್ನು ಒಳಗೊಂಡಿದೆ.

ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್‌ಅಪ್‌

ಐಕ್ಯೂ Z7s 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೈರ್ಡ್ ಫ್ಲ್ಯಾಶ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C, ಬ್ಲೂಟೂತ್ v5.1, GPS ಮತ್ತು Wi-Fi 6 ಸಂಪರ್ಕವನ್ನು ಬೆಂಬಲಿಸಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ನೀರು ಮತ್ತು ಧೂಳಿನಿಂದ ರಕ್ಷಣೆಗೆ IP54 ರೇಟಿಂಗ್ ಅನ್ನು ಹೊಂದಿದೆ.

ಭಾರತದಲ್ಲಿ ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಲಾಂಚ್‌! ಖರೀದಿಗೆ ಕ್ಯೂ ಪಕ್ಕಾ!

ಭಾರತದಲ್ಲಿ ಐಕ್ಯೂ Z7s 5G ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಐಕ್ಯೂ Z7s 5G ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೊರೇಜ್‌ ಆಯ್ಕೆಗೆ 18,999ರೂ.ಬೆಲೆಯನ್ನು ಹೊಂದಿದೆ. ಇನ್ನು 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 19,999ರೂ.ಬೆಲೆಯಲ್ಲಿ ಲಭ್ಯವಾಗಲಿದೆ. ಸದ್ಯ ಸ್ಮಾರ್ಟ್‌ಫೋನ್‌ ಕಂಪೆನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮತ್ತು ಅಮೆಜಾನ್‌ ಮೂಲಕ ಖರೀದಿಗೆ ಲಭ್ಯವಿದೆ. ಇನ್ನು ಸ್ಮಾರ್ಟ್‌ಫೋನ್‌ ನಾರ್ವೆ ಬ್ಲೂ ಮತ್ತು ಪೆಸಿಫಿಕ್ ನೈಟ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
iQoo Z7s 5G smartphone supports dual nano SIMs, with one hybrid slot for a microSD card.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+