ಬಿಡುಗಡೆಗೂ ಮುನ್ನವೇ ಐಕ್ಯೂ Z8 ಫೋನ್ ಫೀಚರ್ಸ್ ಬಹಿರಂಗ; ಯಾಕಿಷ್ಟು ನಿರೀಕ್ಷೆ?
ಇತ್ತೀಚಿನ ದಿನಗಳಲ್ಲಿ ಐಕ್ಯೂ ಕಂಪೆನಿ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳಿಂದ ಗಮನಸೆಳೆದಿದೆ. ವಿಶೇಷ ಡಿಸ್‌ಪ್ಲೇ ವಿನ್ಯಾಸ ಹಾಗೂ ಕ್ಯಾಮೆರಾ ಮಾಡ್ಯೂಲ್‌ನಿಂದ ಫೋನ್ ಪ್ರಿಯರ ಮನಗೆದ್ದಿದೆ. ಇದೀಗ ಹೊಸ ಐಕ್ಯೂ Z8 ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಫೀಚರ್ಸ್ ಇದೀಗ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.
ಹೌದು, ಐಕ್ಯೂ Z8 ಸ್ಮಾರ್ಟ್‌ಫೋನ್ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗಗೊಂಡಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರುವ ನಿರೀಕ್ಷೆಯಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z8 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಐಕ್ಯೂ Z8 ಸ್ಮಾರ್ಟ್‌ಫೋನ್ 6.64 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 2388 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಬರಲಿದೆ. ಇದಲ್ಲದೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸುವ ನಿರೀಕ್ಷೆಯಿದೆ.
ಐಕ್ಯೂ Z8 ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ಐಕ್ಯೂ Z8 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200SoC ಪ್ರೊಸೆಸರ್ ವೇಗದೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಒಂದು ಕಾರ್ಟೆಕ್ಸ್-A78 ಕೋರ್ 3.1GHz, ಮೂರು ಕಾರ್ಟೆಕ್ಸ್-A78 ಕೋರ್‌ಗಳು 3.0GHz, ನಾಲ್ಕು ಕಾರ್ಟೆಕ್ಸ್-A55 ಕೋರ್‌ಗಳು 2.0GHz, ಮತ್ತು ಆರ್ಮ್ ಮಾಲಿ-G610 MC6 GPU ಸಪೋರ್ಟ್ ಹೊಂದಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ.
ಐಕ್ಯೂ Z8 ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್ ಏನಿರಲಿದೆ?
ಐಕ್ಯೂ Z8 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ನೊಂದಿಗೆ ಬರಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ನೊಂದಿಗೆ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನಿರೀಕ್ಷಿಸಲಾಗಿದೆ.
ಐಕ್ಯೂ Z8 ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ಐಕ್ಯೂ Z8 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸೊಲೆರೋ ಮೀಟರ್, ಕಂಪಾಸ್ ಸೆನ್ಸಾರ್‌ಗಳನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.
ಐಕ್ಯೂ Z8 ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ಐಕ್ಯೂ Z8 ಸ್ಮಾರ್ಟ್‌ಫೋನ್ ಚೀನಾದಲ್ಲಿ ಸುಮಾರು CNY 1,599 (ಅಂದಾಜು 18,400ರೂ)ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಇದು ಕಪ್ಪು, ನೀಲಿ ಮತ್ತು ಐಲ್ ಆಫ್ ಮ್ಯಾನ್ (ಹಸಿರು) ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಸ್ಮಾರ್ಟ್‌ಫೋನ್ ಭಾರತಕ್ಕೂ ಕಾಲಿಡಲಿದೆಯಾ ಅನ್ನೊದರ ಬಗ್ಗೆ ಇನ್ನು ಕೂಡ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಇನ್ನು ಐಕ್ಯೂ ಕಂಪೆನಿಯ ಇತ್ತೀಚಿನ ಸುದ್ದಿಗಳನ್ನು ಗಮನಿಸುವುದಾದರೆ, ಭಾರತದಲ್ಲಿ ಇತ್ತೀಚಿಗೆ ಹೊಸ ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








