Home
ಸುದ್ದಿಜಾಲ

ವೇಗದ ಪ್ರೊಸೆಸರ್‌ ಸೌಲಭ್ಯದ ಈ ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ!

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ಅಡ್ಡಾ ಎನಿಸಿಕೊಂಡಿರುವ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಏನಾದರೊಂದು ವಿಶೇಷ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡುತ್ತದೆ. ಸದ್ಯ ಅಮೆಜಾನ್‌ ಐಕ್ಯೂ ಕ್ವೆಸ್ಟ್‌ ಡೇಸ್‌ (iQOO QUEST DAYS) ಆಯೋಜಿಸಿದ್ದು, ಈ ಮಾರಾಟದಲ್ಲಿ ಐಕ್ಯೂ ಸಂಸ್ಥೆಯ ಆಯ್ದ ಫೋನ್‌ಗಳು ಬೊಂಬಾಟ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಐಕ್ಯೂ Z9 5G ಫೋನ್‌ ಭರ್ಜರಿ ಇಳಿಕೆಯ ದರದಲ್ಲಿ ಲಭ್ಯ ಇದೆ.

ಹೌದು, ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಇದೀಗ ಐಕ್ಯೂ ಕ್ವೆಸ್ಟ್‌ ಡೇಸ್‌ ಸೇಲ್‌ ಲೈವ್‌ ಇದ್ದು, ಈ ಮಾರಾಟವು ಇದೇ ಜೂನ್ 10 ರ ವರೆಗೂ ಚಾಲ್ತಿ ಇರಲಿದೆ. ಈ ಸೇಲ್‌ನಲ್ಲಿ ಐಕ್ಯೂ ಕಂಪನಿಯ ಐಕ್ಯೂ Z9 5G ಫೋನ್‌ 2000ರೂ. ಗಳ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಆಯ್ದ ಬ್ಯಾಂಕ್‌ ಕಾರ್ಡ್ ಮೂಲಕ ಖರೀದಿಸಿದರೆ, ಈ ಕೊಡುಗೆಯು ಲಭ್ಯ ಆಗಲಿದೆ.

ವೇಗದ ಪ್ರೊಸೆಸರ್‌ ಸೌಲಭ್ಯದ ಈ ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ!

ಅಂದಹಾಗೆ ಈ ಫೋನ್‌ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಇದು 8GB + 128GB ವೇರಿಯಂಟ್‌ ಹಾಗೂ 8GB + 256GB ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ Z9 5G ಫೀಚರ್ಸ್‌ ಮಾಹಿತಿ

ಐಕ್ಯೂ Z9 5G ಮೊಬೈಲ್‌ 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಇದರೊಂದಿಗೆ ಇದು 1,800 ನಿಟ್ಸ್‌ ಬ್ರೈಟ್‌ನೆಸ್ ಆಯ್ಕೆ ಹಾಗೂ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದುಕೊಂಡಿದೆ.

ಐಕ್ಯೂ Z9 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಈ ಫೋನ್‌ ಆಂಡ್ರಾಯ್ಡ್ 14 ಆಧಾರಿತ ಫನ್‌ಟಚ್‌ 14 ಓಎಸ್‌ ಸಪೋರ್ಟ್‌ ಪಡೆದಿದೆ. ಇದರ ಜೊತೆಗೆ 8GB RAM ಮತ್ತು 128GB/256GB UFS 2.2 ಆಂತರೀಕ ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಅಲ್ಲದೆ ಬಾಹ್ಯ ಸ್ಟೋರೇಜ್‌ ವಿಸ್ತರಣೆ ಮಾಡಿಕೊಳ್ಳಲು ಮೈಕ್ರೊ ಎಸ್‌ಡಿ ಕಾರ್ಡ್ ಆಯ್ಕೆ ಸಹ ನೀಡಲಾಗಿದೆ.

ಐಕ್ಯೂ Z9 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 50 ಮೆಗಾ ಪಿಕ್ಸೆಲ್‌ ಸೋನಿ IMX882 ಪ್ರಾಥಮಿಕ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಹಾಗೆಯೇ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಐಕ್ಯೂ Z9 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್ ಹೊಂದಿದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಹೊಂದಿದೆ. ಅಲ್ಲದೇ ಈ ಮೊಬೈಲ್‌ ಫಿಂಗರ್‌ಪ್ರಿಂಟ್ ಸೆನ್ಸರ್‌, IP54 ರೇಟಿಂಗ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ ಮತ್ತು ಹೈ-ರೆಸ್ ಆಡಿಯೊ ಪ್ರಮಾಣೀಕರಣ ಸೌಲಭ್ಯ ಒಳಗೊಂಡಿದೆ. ಅಲ್ಲದೇ ಗ್ರಾಹಕರು ಐಕ್ಯೂ Z9 5G ಫೋನ್‌ ಅನ್ನು 8GB + 128GB ವೇರಿಯಂಟ್‌ ಹಾಗೂ 8GB + 256GB ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
iQOO Z9 5G available at Biggest Discount Price on iQOO QUEST Days Sale. Check offer price, specifications and more info.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+