ನಾಳೆ ಈ ಸ್ಟೈಲಿಶ್ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ!..ಅಚ್ಚರಿಯ ಬೆಲೆ!
ಜನಪ್ರಿಯ ಐಕ್ಯೂ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ಐಕ್ಯೂ Z9 5G ಸ್ಮಾರ್ಟ್‌ಫೋನ್ ಅದರ ಫೀಚರ್ಸ್, ಬೆಲೆ ಹಾಗೂ ಡಿಸೈನ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ನಾಳೆ (ಮಾರ್ಚ್ 14 ರಂದು) ಭಾರತದಲ್ಲಿ ಪ್ರಥಮ ಮಾರಾಟ ಪ್ರಾರಂಭ ಮಾಡಲಿದೆ.
ಹೌದು, ಐಕ್ಯೂ ಸಂಸ್ಥೆಯ ಐಕ್ಯೂ Z9 5G ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ನಾಳೆ ಮಧ್ಯಾಹ್ನ 12 ರಂದು ಸೇಲ್ ಶುರು ಮಾಡಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದರೊಂದಿಗೆ 50 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ ರಚನೆ ಸಹ ಪಡೆದಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 17,999ರೂ. ಗಳು ಆಗಿದ್ದು, ಆಯ್ದ ಕೊಡುಗೆಗಳು ಸಹ ಲಭ್ಯ.

ಇನ್ನು ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಐಕ್ಯೂ Z9 5G ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಐಕ್ಯೂ Z9 5G ಸ್ಮಾರ್ಟ್‌ಫೋನ್
ಐಕ್ಯೂ Z9 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್ ಪಡೆದಿದೆ. ಹಾಗೆಯೇ ಇದು 1,800 ನಿಟ್ಸ್ ಬ್ರೈಟ್‌ನೆಸ್ ಆಯ್ಕೆ ಹಾಗೂ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದುಕೊಂಡಿದೆ. ಇದು ಫೋನ್‌ನಲ್ಲಿ ಪ್ರೀಮಿಯಂ ಅನುಭವ ನೀಡುತ್ತದೆ.
ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ARM ಮಾಲಿ-G610 ಜಿಪಿಯು ಬಲ ಪಡೆದುಕೊಂಡಿದೆ. ಇದರ ಜೊತೆಗೆ 8GB RAM ಮತ್ತು 128GB/256GB UFS 2.2 ಆಂತರೀಕ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಅಲ್ಲದೆ ಬಾಹ್ಯ ಸ್ಟೋರೇಜ್ ವಿಸ್ತರಣೆ ಮಾಡಿಕೊಳ್ಳಲು ಮೈಕ್ರೊ ಎಸ್‌ಡಿ ಕಾರ್ಡ್ ಆಯ್ಕೆ ಸಹ ನೀಡಲಾಗಿದೆ. ಉಳಿದಂತೆ ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ಫನ್‌ಟಚ್ 14 ಓಎಸ್ ಅನ್ನು ರನ್ ಮಾಡಲಿದೆ.
ಐಕ್ಯೂ Z9 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, 50 ಮೆಗಾಪಿಕ್ಸೆಲ್ ಸೋನಿ IMX882 ಮುಖ್ಯ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಎರಡನೇ ಕ್ಯಾಮೆರಾವು 2 ಎಂಪಿ ಆಗಿದೆ. ಹಾಗೆಯೇ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಫೋನ್ 16 ಮೆಗಾ ಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ.
ಐಕ್ಯೂ Z9 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದ್ದು, ಇದಕ್ಕೆ ಪೂರಕವಾಗಿ 44W ವೇಗದ ಚಾರ್ಜಿಂಗ್ ಬೆಂಬಲ ಹೊಂದಿದೆ. ಉಳಿದಂತೆ ಈ ಮೊಬೈಲ್ ಫಿಂಗರ್‌ಪ್ರಿಂಟ್ ಸೆನ್ಸರ್, IP54 ರೇಟಿಂಗ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್ ಮತ್ತು ಹೈ-ರೆಸ್ ಆಡಿಯೊ ಪ್ರಮಾಣೀಕರಣ ಸೌಲಭ್ಯ ಒಳಗೊಂಡಿದೆ.
ಭಾರತದಲ್ಲಿ ಐಕ್ಯೂ Z9 5G ಮೊಬೈಲ್ 8GB + 128GB ವೇರಿಯಂಟ್ ಹಾಗೂ 8GB + 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಗ್ರಾಹಕರು ಆರಂಭಿಕ ಆಫರ್‌ನಲ್ಲಿ ಈ ಫೋನ್ ಅನ್ನು ಕ್ರಮವಾಗಿ 17,999 ರೂ. ಗಳ ಮತ್ತು 19,999 ರೂ. ಗಳ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ.


Click it and Unblock the Notifications







