ಬಜೆಟ್ ಬೆಲೆಯ ಈ 5G ಫೋನಿಗೆ ಈಗ ಭರ್ಜರಿ ಡಿಸ್ಕೌಂಟ್!..ಫೀಚರ್ಸ್ ಹೇಗಿವೆ?
ದೇಶದ ಮೊಬೈಲ್ ಮಾರುಕಟ್ಟೆಯಲ್ಲಿ ಐಕ್ಯೂ ಕಂಪನಿಯು ಭಿನ್ನ ಶ್ರೇಣಿಯ ಮೊಬೈಲ್‌ಗಳ ಮೂಲಕ ಈಗಾಗಲೇ ತನ್ನದೇ ಸ್ಥಾನ ಖಚಿತಪಡಿಸಿಕೊಂಡಿದೆ. ಸಂಸ್ಥೆಯ ಬಹುತೇಕ ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ಆ ಪೈಕಿ ಐಕ್ಯೂ Z9 5G ಮೊಬೈಲ್ ಕೂಡಾ ಒಂದಾಗಿದ್ದು, ಈ ಮೊಬೈಲ್ ಇದೀಗ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಖರೀದಿದಾರರು ವಾವ್ ಎನ್ನುವಂತೆ ಆಗಿದೆ.
ಹೌದು, ಅಮೆಜಾನ್ ತಾಣದಲ್ಲಿ ಐಕ್ಯೂ Z9 5G ಮೊಬೈಲ್ ಬೆಲೆಯಲ್ಲಿ ಈಗ ಶೇ. 20% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್ ಈಗ 19,998ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ. ಇದು ಅಲ್ಲದೇ ಅಮೆಜಾನ್ ಇ ಕಾಮರ್ಸ್‌ನಲ್ಲಿ ಲಭ್ಯ ಇರುವ ಇತರೆ ಬ್ಯಾಂಕ್ ಕೊಡುಗೆ, ಇಎಮ್‌ಐ ಸೌಲಭ್ಯಗಳನ್ನು ಪಡೆದುಕೊಂಡರೆ ಇನ್ನಷ್ಟು ಡಿಸ್ಕೌಂಟ್ ಸಿಗಲಿದೆ.

ಇನ್ನು ಐಕ್ಯೂ Z9 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದುಕೊಂಡಿದೆ. ಹಾಗಾದರೇ ಐಕ್ಯೂ Z9 5G ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಐಕ್ಯೂ Z9 5G - ಫೀಚರ್ಸ್ ಹೀಗಿವೆ
ಐಕ್ಯೂ Z9 5G ಮೊಬೈಲ್ 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಹಾಗೆಯೇ ಇದು 1,800 ನಿಟ್ಸ್ ಬ್ರೈಟ್‌ನೆಸ್ ಆಯ್ಕೆ ಹಾಗೂ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದುಕೊಂಡಿದೆ. ಇದು ಮೊಬೈಲ್‌ನಲ್ಲಿ ಪ್ರೀಮಿಯಂ ಅನುಭವ ಒದಗಿಸಬಲ್ಲದು.
ಐಕ್ಯೂ Z9 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ARM ಮಾಲಿ-G610 ಜಿಪಿಯು ಪವರ್ ಹೊಂದಿದೆ. ಇದರ ಜೊತೆಗೆ 8GB RAM ಮತ್ತು 128GB/256GB UFS 2.2 ಆಂತರೀಕ ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಅಲ್ಲದೆ ಬಾಹ್ಯ ಸ್ಟೋರೇಜ್ ವಿಸ್ತರಣೆ ಮಾಡಿಕೊಳ್ಳಲು ಮೈಕ್ರೊ ಎಸ್‌ಡಿ ಕಾರ್ಡ್ ಆಯ್ಕೆ ಸಹ ನೀಡಲಾಗಿದೆ. ಅಲ್ಲದೇ ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ಫನ್‌ಟಚ್ 14 ಓಎಸ್ ಸಪೋರ್ಟ್ ಪಡೆದಿದೆ.
ಐಕ್ಯೂ Z9 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, 50 ಮೆಗಾ ಪಿಕ್ಸೆಲ್ ಸೋನಿ IMX882 ಮುಖ್ಯ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಆಗಿದೆ. ಹಾಗೆಯೇ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.
ಐಕ್ಯೂ Z9 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದ್ದು, ಇದಕ್ಕೆ ಪೂರಕವಾಗಿ 44W ವೇಗದ ಚಾರ್ಜಿಂಗ್ ಸಪೋರ್ಟ್ ಸಹ ಹೊಂದಿದೆ. ಹಾಗೆಯೇ ಈ ಮೊಬೈಲ್ ಫಿಂಗರ್‌ಪ್ರಿಂಟ್ ಸೆನ್ಸರ್, IP54 ರೇಟಿಂಗ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್ ಮತ್ತು ಹೈ-ರೆಸ್ ಆಡಿಯೊ ಪ್ರಮಾಣೀಕರಣ ಸೌಲಭ್ಯ ಒಳಗೊಂಡಿದೆ. ಅಲ್ಲದೇ ಗ್ರಾಹಕರು ಐಕ್ಯೂ Z9 5G ಫೋನ್ ಅನ್ನು 8GB + 128GB ವೇರಿಯಂಟ್ ಹಾಗೂ 8GB + 256GB ವೇರಿಯಂಟ್ ಆಯ್ಕೆಗಳಲ್ಲಿ ಖರೀದಿ ಮಾಡಲು ಅವಕಾಶ ಇದೆ.


Click it and Unblock the Notifications







