Home
ಸುದ್ದಿಜಾಲ

ಬಹಿರಂಗವಾಯ್ತು ಐಕ್ಯೂ Z9 5G ಫೋನಿನ ಫೀಚರ್ಸ್‌: ಟೆಕ್‌ ವಲಯದಲ್ಲಿ ಹೊಸ ಸಂಚಲನ!

ಐಕ್ಯೂ Z9 5G ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ Geekbench ಲಿಸ್ಟ್‌ನಲ್ಲಿ ಕಾಣಿಸಿಕೊಂಡಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7200SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಹಾಗೆಯೇ 8GB RAM ಅನ್ನು ಪ್ಯಾಕ್ ಮಾಡುತ್ತದೆ ಎಂದು ಪಟ್ಟಿಯು ತಿಳಿಸುತ್ತದೆ.

ಹೌದು, ಐಕ್ಯೂ Z9 5G ಸ್ಮಾರ್ಟ್‌ಫೋನ್‌ ಪೀಚರ್ಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎನ್ನಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಹಾಗಾದ್ರೆ ಐಕ್ಯೂ Z9 5G ಫೋನ್‌ನ ಫೀಚರ್ಸ್‌ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಬಹಿರಂಗವಾಯ್ತು ಐಕ್ಯೂ Z9 5G ಫೋನಿನ ಫೀಚರ್ಸ್‌: ಟೆಕ್‌ ವಲಯದಲ್ಲಿ ಹೊಸ ಸಂಚಲನ!

iQOO Z9 5G ಫೀಚರ್ಸ್‌ ನಿರೀಕ್ಷೆ ಏನು?
iQOO Z9 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರುವ ನಿರೀಕ್ಷೆಯಿದೆ. ಇನ್ನು ಸ್ಮಾರ್ಟ್‌ಫೋನ್‌ 1200 x 2712 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರುವ ಸಾಧ್ಯತೆಯಿದೆ. ಜೊತೆಗೆ ಡಿಸ್‌ಪ್ಲೇಯು 120 Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ ಎನ್ನಲಾಗಿದೆ. ಇದಲ್ಲದೆ ಡಿಸ್‌ಪ್ಲೇ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯಲ್ಲಿರಲಿದೆ.

iQOO Z9 5G ಪ್ರೊಸೆಸರ್‌ ಯಾವುದು?
iQOO Z9 5G ಸ್ಮಾರ್ಟ್‌ಪೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7200SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಅಂಡ್ರಾಯ್ಡ್‌ 14 ಬೆಂಬಲದೊಂದಿಗೆ ರನ್‌ ಆಗಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ 8GB RAM ಮತ್ತು 256GB ಹಾಗೂ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ.

iQOO Z9 5G ಕ್ಯಾಮೆರಾ ರಚನೆ ಏನಿರಲಿದೆ?
iQOO Z9 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ ಎನ್ನಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಬಹಿರಂಗವಾಯ್ತು ಐಕ್ಯೂ Z9 5G ಫೋನಿನ ಫೀಚರ್ಸ್‌: ಟೆಕ್‌ ವಲಯದಲ್ಲಿ ಹೊಸ ಸಂಚಲನ!

iQOO Z9 5G ಬ್ಯಾಟರಿ ಮತ್ತು ಇತರೆ ಫೀಚರ್ಸ್‌
iQOO Z9 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಬಹುದು. 120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿರಬಹುದು ಎನ್ನಲಾಗಿದೆ.

iQOO Z9 5G ಬೆಲೆ ಮತ್ತು ಲಭ್ಯತೆ
iQOO Z9 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಶೀಘ್ರದಲ್ಲೆ ಬಿಡುಗಡೆ ಆಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಬಹಿರಂಗವಾಗಿಲ್ಲ, ಆದರೆ ಇದು ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಬ್ಲೂ, ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗುವ ನಿರೀಕ್ಷೆ ಇಡಲಾಗಿದೆ.

ಇನ್ನು ಇತ್ತೀಚಿಗೆ ಭಾರತದ ಮಾರುಕಟ್ಟೆಯಲ್ಲಿ ಐಕ್ಯೂ ಸಂಸ್ಥೆ ಐಕ್ಯೂ ನಿಯೋ 9 ಪ್ರೊ ಫೋನಿನ ಪ್ರಿ ಬುಕಿಂಗ್‌ ಪ್ರಾರಂಭಿಸಿದೆ. ಆದರೆ ಈ ಫೋನ್‌ ಇನ್ನು ಕೂಡ ಭಾರತದ್ಲಿ ಬಿಡುಗಡೆ ಆಗಿಲ್ಲ ಎನ್ನುವುದು ಗಮನಿಸಬೇಕಾದ ವಿಚಾರ. ಈ ಮೊಬೈಲ್‌ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಇದು 1260 x 2800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿರಲಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ಬಲ ಅನ್ನು ಪಡೆದಿರಲಿದ್ದು, ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ ಜೊತೆಗೆ ಕಾರ್ಯ ನಿರ್ವಹಿಸಲಿದೆ.

Best Mobiles in India

English summary
iQOO Z9 5G Smartphone Specifications Revealed by Geekbench Listing Ahead of Launch
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+