Home
ಸುದ್ದಿಜಾಲ

ಈ ಫೋನಿಗೆ ಭರ್ಜರಿ ಆಫರ್‌!..ಗ್ರಾಹಕರು ಹಿಂದೆ ಮುಂದೆ ನೋಡದೇ ಖರೀದಿಸಬಹುದು!

ಹೊಸ ಮೊಬೈಲ್‌ ಖರೀದಿಸುವ ಗ್ರಾಹಕರೇ, ಸದ್ಯ ನೀವೇನಾದರೂ ಬಜೆಟ್‌ ದರದಲ್ಲಿ ನೂತನ ಸ್ಮಾರ್ಟ್‌ಫೋನ್‌ ಕೊಳ್ಳುವ ಪ್ಲ್ಯಾನ್‌ ಮಾಡಿದ್ದರೆ, ಈ ಆಫರ್‌ ನಿಮಗೆ ಬೊಂಬಾಟ್‌ ಎನಿಸುತ್ತದೆ. ಏಕೆಂದರೆ, ಐಕ್ಯೂ ಸಂಸ್ಥೆಯು ಐಕ್ಯೂ Z9 5G (iQOO Z9) ಫೋನ್‌ ಅಮೆಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಗ್ರಾಹಕರು ಹಿಂದೆ ಮುಂದೆ ನೋಡದೇ ಖರೀದಿಸಬಹುದು.

ಹೌದು, ಅಮೆಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ಈ ಎರಡು ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಇದೀಗ ಐಕ್ಯೂ Z9 5G (iQOO Z9) ಫೋನ್‌ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಫ್ಲಿಪ್‌ಕಾರ್ಟ್‌ ತಾಣದಲ್ಲಿ ಈ ಫೋನಿನ 128 GB ವೇರಿಯಂಟ್‌ 17,899ರೂ. ಗಳ ಬೆಲೆಯಲ್ಲಿ ಲಭ್ಯ ಇದೆ. ಹಾಗೆಯೇ ಅಮೆಜಾನ್‌ ತಾಣದಲ್ಲಿ ಈ ಫೋನಿನ 128 GB ವೇರಿಯಂಟ್‌ 18,499 ರೂ. ಗಳ ಬೆಲೆಯಲ್ಲಿ ಲಭ್ಯ ಇದೆ.

ಈ ಫೋನಿಗೆ ಭರ್ಜರಿ ಆಫರ್‌!..ಗ್ರಾಹಕರು ಹಿಂದೆ ಮುಂದೆ ನೋಡದೇ ಖರೀದಿಸಬಹುದು!

ಅಂದಹಾಗೆ ಈ ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಐಕ್ಯೂ Z9 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಐಕ್ಯೂ Z9 5G - ಫೀಚರ್ಸ್‌ ಮಾಹಿತಿ

ಐಕ್ಯೂ Z9 5G ಮೊಬೈಲ್‌ 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಹಾಗೆಯೇ ಇದು 1,800 ನಿಟ್ಸ್‌ ಬ್ರೈಟ್‌ನೆಸ್ ಆಯ್ಕೆ ಹಾಗೂ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದುಕೊಂಡಿದೆ. ಇದು ಮೊಬೈಲ್‌ನಲ್ಲಿ ಪ್ರೀಮಿಯಂ ಅನುಭವ ನೀಡಬಲ್ಲದು.

ಐಕ್ಯೂ Z9 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ARM ಮಾಲಿ-G610 ಜಿಪಿಯು ಪವರ್‌ ಹೊಂದಿದೆ. ಇದರ ಜೊತೆಗೆ 8GB RAM ಮತ್ತು 128GB/256GB UFS 2.2 ಆಂತರೀಕ ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಅಲ್ಲದೆ ಬಾಹ್ಯ ಸ್ಟೋರೇಜ್‌ ವಿಸ್ತರಣೆ ಮಾಡಿಕೊಳ್ಳಲು ಮೈಕ್ರೊ ಎಸ್‌ಡಿ ಕಾರ್ಡ್ ಆಯ್ಕೆ ಸಹ ನೀಡಲಾಗಿದೆ. ಅಲ್ಲದೇ ಈ ಫೋನ್‌ ಆಂಡ್ರಾಯ್ಡ್ 14 ಆಧಾರಿತ ಫನ್‌ಟಚ್‌ 14 ಓಎಸ್‌ ಸಪೋರ್ಟ್‌ ಹೊಂದಿದೆ.

ಐಕ್ಯೂ Z9 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 50 ಮೆಗಾ ಪಿಕ್ಸೆಲ್‌ ಸೋನಿ IMX882 ಮುಖ್ಯ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಆಗಿದೆ. ಹಾಗೆಯೇ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಐಕ್ಯೂ Z9 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬೆಂಬಲ ಪಡೆದಿದ್ದು, ಇದಕ್ಕೆ ಪೂರಕವಾಗಿ 44W ವೇಗದ ಚಾರ್ಜಿಂಗ್ ಬೆಂಬಲ ಹೊಂದಿದೆ. ಉಳಿದಂತೆ ಈ ಮೊಬೈಲ್‌ ಫಿಂಗರ್‌ಪ್ರಿಂಟ್ ಸೆನ್ಸರ್‌, IP54 ರೇಟಿಂಗ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ ಮತ್ತು ಹೈ-ರೆಸ್ ಆಡಿಯೊ ಪ್ರಮಾಣೀಕರಣ ಸೌಲಭ್ಯ ಒಳಗೊಂಡಿದೆ. ಅಲ್ಲದೇ ಗ್ರಾಹಕರು ಐಕ್ಯೂ Z9 5G ಫೋನ್‌ ಅನ್ನು 8GB + 128GB ವೇರಿಯಂಟ್‌ ಹಾಗೂ 8GB + 256GB ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
iQOO Z9 gets a Huge Price Drop on Flipkart and Amazon. check more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+