Home
ಸುದ್ದಿಜಾಲ

Amazon Great Indian Festival sale: ಈ 5G ಫೋನ್‌ ಸಖತ್ ಡಿಸ್ಕೌಂಟ್‌ ಬೆಲೆಗೆ ಲಭ್ಯ!

ಲೀಡಿಂಗ್ ಆನ್‌ಲೈನ್‌ ಶಾಪಿಂಗ್ ಪ್ರಿಯರು ನಿರೀಕ್ಷೆಯಿಂದ ಎದುರುನೋಡುತ್ತಿರುವ ಅಮೆಜಾನ್ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ 2024 (Amazon Great Indian Festival sale 2024) ಮಾರಾಟದ ದಿನಾಂಕ ಈಗ ಘೋಷಣೆ ಮಾಡಲಾಗಿದೆ. ಈ ವಿಶೇಷ ಮಾರಾಟದಲ್ಲಿ ಗ್ರಾಹಕರು ನಿರೀಕ್ಷೆ ಮಾಡಿರದ ಅತ್ಯುತ್ತಮ ಬೆಲೆಗೆ ಸ್ಮಾರ್ಟ್‌ಫೋನ್‌, ಸ್ಮಾರ್ಟ್‌ ಉತ್ಪನ್ನಗಳನ್ನು ಖರೀದಿ ಮಾಡಲು ಅವಕಾಶ ಇದೆ.

ಹೌದು, ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2024 (Amazon Great Indian Festival sale 2024) ಭಾರತದಲ್ಲಿ ಇದೇ ಸೆಪ್ಟೆಂಬರ್ 27 ರಂದು ಶುರುವಾಗಲಿದೆ. ಇನ್ನು ಅಮೆಜಾನ್‌ ಪ್ರೈಮ್‌ ಸದಸ್ಯರು ಇದೇ ಸೆಪ್ಟೆಂಬರ್ 26 ರಂದು ಅಕ್ಸೆಸ್‌ ಅನ್ನು ಪಡೆಯುತ್ತಾರೆ. ಈ ಮಾರಾಟದಲ್ಲಿ ಐಕ್ಯೂ Z9s (iQOO Z9s) ಮೊಬೈಲ್‌ ಆಕರ್ಷಕ ಡಿಸ್ಕೌಂಟ್‌ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿದೆ.

Amazon Great Indian Festival sale: ಈ ಫೋನ್‌ ಸಖತ್ ಡಿಸ್ಕೌಂಟ್‌ ಬೆಲೆಗೆ ಲಭ್ಯ

ಐಕ್ಯೂ Z9s (iQOO Z9s) ಮೊಬೈಲ್‌ ಶೇ, 23% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ 19,998ರೂ. ಗಳ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಆಗಲಿದೆ. ಅಲ್ಲದೇ ಇದರೊಂದಿಗೆ ಇನ್ನಷ್ಟು ಡಿಸ್ಕೌಂಟ್‌ ಸಹ ಲಭ್ಯವಾಗಲಿದೆ. ಹಾಗಾದರೇ ಐಕ್ಯೂ Z9s (iQOO Z9s) ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ

ಐಕ್ಯೂ Z9s - ಫೀಚರ್ಸ್‌ ಹೀಗಿವೆ
ಐಕ್ಯೂ Z9s (iQOO Z9s) ಮೊಬೈಲ್‌ 6.67 ಇಂಚಿನ ಡಿಸ್‌ಪ್ಲೇ AMOLED ಡಿಸ್‌ಪ್ಲೇ ಪಡೆದಿದ್ದು, ಇದರೊಂದಿಗೆ 120Hz ರಿಫ್ರೆಶ್‌ ರೇಟ್‌ ಸಪೋರ್ಟ್‌ ಹೊಂದಿದೆ. ಇದರ ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಸೌಲಭ್ಯ ಇದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಪಡೆದಿದೆ.

ಇನ್ನು ಈ ಮೊಬೈಲ್‌ 8 GB RAM + 128 GB, 8 GB + 256 GB ಹಾಗೂ 12 GB + 256 GB ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇದಲ್ಲದೇ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಇದ್ದು, ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಫೋನ್‌ 5,500 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 44W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ಇನ್ನು ಐಕ್ಯೂ Z9s ಫೋನ್‌ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2024 (Amazon Great Indian Festival sale 2024) ನಲ್ಲಿ ಖರೀದಿಗೆ ಲಭ್ಯ ಆಗಲಿದೆ. ಇನ್ನು ಈ ಫೋನ್‌ 8GB + 128GB ವೇರಿಯಂಟ್‌, 8GB + 256GB ವೇರಿಯಂಟ್‌ ಹಾಗೂ 12GB + 256GB ವೇರಿಯಂಟ್‌ ಆಯ್ಕೆಯಲ್ಲಿ ಲಭ್ಯ. ಅಲ್ಲದೇ ಟೈಟಾನಿಯಂ ಮ್ಯಾಟ್ ಮತ್ತು ಓನಿಕ್ಸ್ ಗ್ರೀನ್ ಕಲರ್‌ನಲ್ಲಿ ಖರೀದಿಗೆ ಲಭ್ಯ ಇರಲಿದೆ.

ಅದೇ ರೀತಿ ಐಕ್ಯೂ Z9s ಪ್ರೊ ಮೊಬೈಲ್‌ 6.67 ಇಂಚಿನ ಡಿಸ್‌ಪ್ಲೇ AMOLED ಡಿಸ್‌ಪ್ಲೇ ಪಡೆದಿದ್ದು, 2392×1080 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಹೊಂದಿದೆ. ಇದರ ಜೊತೆಗೆ 120Hz ರಿಫ್ರೆಶ್‌ ರೇಟ್‌ ಸಪೋರ್ಟ್‌ ಇದ್ದು, ಈ ಫೋನ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 7 ಜೆನ್‌ 3 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ.

Best Mobiles in India

English summary
iQOO Z9s 5G will available at best Deal during Amazon Great Indian Festival sale 2024. check details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+